Home
ಸುದ್ದಿಜಾಲ

ಹೊಸ Redmi A4 5G ಮೊಬೈಲ್‌ಗೆ ನೇರ ಟಾಂಗ್‌ ನೀಡುವ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಪ್ರಮುಖ ಮೊಬೈಲ್‌ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಶಿಯೋಮಿ (Xiaomi) ಭಾರತೀಯ ಮಾರುಕಟ್ಟೆಯಲ್ಲಿ ನೂತನವಾಗಿ ರೆಡ್ಮಿ A4 5G (Redmi A4 5G) ಫೋನ್‌ ಅನ್ನು ಬಿಡುಗಡೆ ಮಾಡಿದ್ದು, ಎಂಟ್ರಿ ಲೆವೆಲ್‌ 5G ವಿಭಾಗದಲ್ಲಿ ಮೊಬೈಲ್‌ ಪ್ರಿಯರ ಗಮನ ಸೆಳೆದಿದೆ. ಈ ನೂತನ ರೆಡ್ಮಿ A4 5G (Redmi A4 5G) ಅಗ್ಗದ ದರದಲ್ಲಿ ಕಾಣಿಸಿಕೊಂಡಿದ್ದು, ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್‌ ಪ್ರಿಯರನ್ನು ಸೆಳೆದಿದೆ. ಅದಾಗ್ಯೂ, ನಿಮಗೆ ರೆಡ್ಮಿ A4 5G ಮೊಬೈಲ್‌ಗೆ ಪರ್ಯಾಯ ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯ ಇವೆ.

ಹೌದು, ಮಾರುಕಟ್ಟೆಯಲ್ಲಿ ಎಂಟ್ರಿ ಲೆವೆಲ್‌ ಮೊಬೈಲ್‌ಗಳಿಗೆ ಅತ್ಯುತ್ತಮ ಬೇಡಿಕೆ ಇದೆ. ಹೀಗಾಗಿ ಮೊಬೈಲ್‌ ತಯಾರಿಕಾ ಸಂಸ್ಥೆಗಳು ಸಹ ಈ ವಿಭಾಗದಲ್ಲಿ ಉತ್ತಮ ಫೋನ್‌ಗಳನ್ನು ಪರಿಚಯಿಸುತ್ತ ಮುನ್ನಡೆದಿವೆ. ಆ ಪಟ್ಟಿಗೆ ಈಗ ಶಿಯೋಮಿಯ ಹೊಸ ರೆಡ್ಮಿ A4 5G (Redmi A4 5G) ಸೇರಿದೆ. ಆದರೆ ಮಾರುಕಟ್ಟೆಯಲ್ಲಿ ಇದಕ್ಕೆ ಟಾಂಗ್ ನೀಡುವ ಇತರೆ ಪರ್ಯಾಯ ಮೊಬೈಲ್‌ಗಳ ಆಯ್ಕೆ ಸಹ ಖರೀದಿದಾರರಿಗೆ ಲಭ್ಯ ಇವೆ. ಹಾಗಾದರೇ ರೆಡ್ಮಿ A4 5G ಫೋನ್ ಪರ್ಯಾಯ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಹೊಸ Redmi A4 5G ಮೊಬೈಲ್‌ಗೆ ನೇರ ಟಾಂಗ್‌ ನೀಡುವ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ವಿವೋ Y18t ಮೊಬೈಲ್‌

ವಿವೋ Y18t ಮೊಬೈಲ್‌ 6.56 ಇಂಚಿನ LCD ಡಿಸ್‌ಪ್ಲೇಯನ್ನು ಪಡೆದಿದ್ದು, ಈ ಡಿಸ್‌ಪ್ಲೇ ಉತ್ತಮ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಹಾಗೂ 840 nits ಬ್ರೈಟ್ನೆಸ್‌ ಅನ್ನು ಸಪೋರ್ಟ್ ಮಾಡುತ್ತದೆ. Unisoc T612 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ವಿವೋ Y18t ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪವರ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 15W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಸಹ ಪಡೆದುಕೊಂಡಿದೆ.

ಒಪ್ಪೋ A3x 4G ಮೊಬೈಲ್‌

ಒಪ್ಪೋ A3x 4G ಫೋನ್‌ 6.67 ಇಂಚಿನ IPS LCD ಸ್ಕ್ರೀನ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು HD+ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಸ್ನ್ಯಾಪ್‌ಡ್ರಾಗನ್‌ 6s 4G Gen 1 SoC ಪ್ರೊಸೆಸರ್‌ ಸಪೋರ್ಟ್‌ ಸಹ ಇದೆ. ಇದರ ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಹಾಗೆಯೇ ಒಪ್ಪೋ A3x 4G ಮೊಬೈಲ್‌ 45W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದ್ದು, ಇದಕ್ಕೆ ಸಪೋರ್ಟ್‌ ಆಗಿ 5100mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ನೀಡಲಾಗಿದೆ.

ಇನ್ಫಿನಿಕ್ಸ್‌ ಹಾಟ್‌ 50 5G ಮೊಬೈಲ್‌

ಇನ್ಫಿನಿಕ್ಸ್‌ ಹಾಟ್‌ 50 5G ಮೊಬೈಲ್‌ 6.7 ಇಂಚಿನ HD ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಶನ್ 6300 ಚಿಪ್‌ಸೆಟ್ ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, 48 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಅಲ್ಲದೇ ಇದು 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬಿಡುಗಡೆ ಮಾಡಿದ್ದು, ಇದು 18W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರಿಯಲ್‌ಮಿ C65 5G ಮೊಬೈಲ್‌

ರಿಯಲ್‌ಮಿ C65 5G ಫೋನ್‌ ಡಿಸ್‌ಪ್ಲೇಯು 1604 × 720 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದ್ದು, 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ರಚನೆ ಅನ್ನು ಹೊಂದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, ಈ ಫೋನ್‌ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಅನುಗುಣವಾಗಿ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A06 ಮೊಬೈಲ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A06 ಮೊಬೈಲ್‌ 6.7 ಇಂಚಿನ IPS LCD ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಇದು 60Hzನ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರೊಂದಿಗೆ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಹೊಂದಿದೆ. ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Top 5 Redmi A4 5G Alternative Phones at affordable price. check mobiles list and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+