Just In
Don't Miss
- Sports
ಐಎಸ್ಎಲ್: ಗೋವಾಕ್ಕೆ ಫೈನಲ್ ಪಂಚ್ ನೀಡುವ ಗುರಿಯಲ್ಲಿ ಮುಂಬೈ
- News
'ಹಿಜಾಬ್' ಕುರಿತು ಟ್ವೀಟ್: ಪಾಕ್ನಲ್ಲಿ ಚೀನಾ ಅಧಿಕಾರಿ ವಿರುದ್ಧ ಕಿಡಿ
- Finance
ಮಾರ್ಚ್ 08ರಂದು ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ
- Lifestyle
ದಿನ ಭವಿಷ್ಯ: ನಿಮ್ಮ ರಾಶಿ ಸೋಮವಾರ ಹೇಗಿರಲಿದೆ ನೋಡಿ
- Movies
ಬಿಗ್ಬಾಸ್: ಒಂದು ವಾರದಲ್ಲಿ ಪ್ರಶಾಂತ್ ಸಂಬರ್ಗಿ ಬದಲಾಯಿಸಿರುವ ಬಟ್ಟೆ ಎಷ್ಟು ಗೊತ್ತೆ?
- Automobiles
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ 10,000 ರೂ, ಒಳಗೆ ಲಭ್ಯವಾಗುವ ಸ್ಮಾರ್ಟ್ಫೋನ್ಗಳು!
ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್ಫೋನ್ ಎಲ್ಲರಿಗೂ ಅವಶ್ಯಕವಾಗಿದೆ. ಹಿರಿಯರಿಂದ ಹಿಡಿದು ಎಲ್ಲಾ ವಯೋಮಾನದವರಿಗೂ ಸ್ಮಾರ್ಟ್ಫೋನ್ ಬೇಕೆ ಬೇಕು ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಇದೇ ಕಾರಣಕ್ಕೆ ಹಲವು ಸ್ಮಾರ್ಟ್ಫೋನ್ ಕಂಪೆನಿಗಳು ತಮ್ಮ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನ ಪರಿಚಯಿಸುತ್ತಲೇ ಬಂದಿವೆ. ಇನ್ನು ಮಾರುಕಟ್ಟೆಯಲ್ಲಿ ಹೈ ಎಂಡ್ ಮಾದರಿಯಿಂದ ಹಿಡಿದು ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳನ್ನು ಸಹ ನಾವು ಕಾಣಬಹುದಾಗಿದೆ. ಅದರಲ್ಲೂ ಹೆಚ್ಚಿನ ಗ್ರಾಹಕರು ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳನ್ನ ಖರೀದಿಸಿಲು ಇಚ್ಚಿಸುತ್ತಾರೆ.

ಹೌದು, ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಹಲವು ಬೆಲೆಯ ಸ್ಮಾರ್ಟ್ಫೋನ್ಗಳನ್ನ ಕಾಣಬಹುದಾಗಿದೆ. ಇನ್ನು ಬಜೆಟ್ ಬೆಲೆಯಲ್ಲಿ ಗುಣಮಟ್ಟದ ಸ್ಮಾರ್ಟ್ಫೋನ್ಗಳ ಲಭ್ಯತೆಯ ಬಗ್ಗೆ ಹೆಚ್ಚಿನ ಜನರು ಗಮನ ವಹಿಸುತ್ತಾರೆ. ಸದ್ಯ 2021 ರಲ್ಲಿ ಭಾರತದಲ್ಲಿ 10,000ರೂ ಒಳಗೆ ಸಾಕಷ್ಟು ಸ್ಮಾರ್ಟ್ಫೋನ್ಗಳು ಬಿಡುಗಡೆ ಆಗಿವೆ. ಉತ್ತಮ ಕ್ಯಾಮೆರಾ ಫೀಚರ್ಸ್, ಡಿಸ್ಪ್ಲೇ ವಿನ್ಯಾಸ ಒಳಗೊಂಡಿರುವ ಈ ಸ್ಮಾರ್ಟ್ಫೋನ್ಗಳು ಸ್ಮಾರ್ಟ್ಫೋನ್ ಪ್ರಿಯರ ಆಯ್ಕೆಯಾಗಿವೆ. ಹಾಗಾದ್ರೆ ಭಾರತದಲ್ಲಿ 10,000 ರೂ ಒಳಗೆ ಲಭ್ಯವಿರುವ ಸ್ಮಾರ್ಟ್ಫೋನ್ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಿವೋ Y12s
ವಿವೊ Y12s ಸ್ಮಾರ್ಟ್ಫೋನ್ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51 ಇಂಚಿನ ಹ್ಯಾಲೊ ಫುಲ್ವ್ಯೂ ಹೆಚ್ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 439 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಹೊಂದಿದೆ, ಇದನ್ನು ಮೆಮೊರಿ ಕಾರ್ಡ್ ಸಹಾಯದಿಂದ ಇನ್ನಷ್ಟು ವಿಸ್ತರಿಸಬಹುದು. ಈ ಸ್ಮಾರ್ಟ್ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 5,000mAh ಬ್ಯಾಟರಿಯನ್ನು ಹೊಂದಿದ್ದು, ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರ ಬೆಲೆ 9,990 ರೂ.ಆಗಿದೆ.

ಸ್ಯಾಮ್ಸಂಗ್ ಗ್ಯಾಲಕ್ಸಿ M02s
ಸ್ಯಾಮ್ಸಂಗ್ ಗ್ಯಾಲಕ್ಸಿ M02s ಸ್ಮಾರ್ಟ್ಫೋನ್ ಬಜೆಟ್ ಬೆಲೆಯಲ್ಲಿ ಲಭ್ಯವಾಗಲಿರುವ ಸ್ಮಾರ್ಟ್ಫೋನ್ ಆಗಿದೆ. ಈ ಸ್ಮಾರ್ಟ್ಫೋನ್ 720 × 1560 ಪಿಕ್ಸೆಲ್ಗಳ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಟಿಎಫ್ಟಿ ಡಿಸ್ಪ್ಲೇ ಹೊಂದಿದೆ. ಇದಲ್ಲದೆ, ಸ್ನಾಪ್ಡ್ರಾಗನ್ 450 ಪ್ರೊಸೆಸರ್ ಅನ್ನು ಹೊಂದಿದೆ. ಇನ್ನು ಗ್ಯಾಲಕ್ಸಿ m02s 3GB RAM + 32GB ರೂಪಾಂತರದ ಬೆಲೆ 8,999 ರೂ. ಮತ್ತು 4GB RAM + 64 GB ರೂಪಾಂತರದ ಬೆಲೆ 9,999 ರೂ. ಆಗಿದೆ. ಈ ಫೋನ್ ಕಪ್ಪು, ನೀಲಿ ಮತ್ತು ಕೆಂಪು ಬಣ್ಣದ ರೂಪಾಂತರಗಳಲ್ಲಿ ಲಭ್ಯವಿದೆ. ಸ್ಯಾಮ್ಸಂಗ್ ಗ್ಯಾಲಕ್ಸಿ M02s ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಫೋನ್ 5000mAh ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜ್ ಅನ್ನು ಬೆಂಬಲಿಸುತ್ತದೆ.

ಟೆಕ್ನೋ ಸ್ಪಾರ್ಕ್ 6 ಗೋ
ಟೆಕ್ನೋ ಸ್ಪಾರ್ಕ್ 6 ಗೋ ಫೋನ್ 6.52 ಇಂಚಿನ ಹೆಚ್ಡಿ ಪ್ಲಸ್ ಟಿಎಫ್ಟಿ ಡಿಸ್ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ A25 ಪ್ರೊಸೆಸರ್ ಹೊಂದಿದ್ದು,ಆಂಡ್ರಾಯ್ಡ್ 10 ಅನ್ನು ಆಧರಿಸಿದ ಹಿಯೋಸ್ 6.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಹೊಂದಿದೆ. ಈ ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಇದು 5000mAh ಬ್ಯಾಟರಿ ಹೊಂದಿದೆ. ಇದರ ಬೆಲೆ 8,699 ರೂ. ಆಗಿದ್ದು, ಈ ಫೋನ್ ಆಕ್ವಾ ಬ್ಲೂ, ಐಸ್ ಜೇಡ್ ಮತ್ತು ಮಿಸ್ಟರಿ ವೈಟ್ ಕಲರ್ ರೂಪಾಂತರಗಳಲ್ಲಿ ಲಭ್ಯವಾಗಲಿದೆ.

ಶಿಯೋಮಿ ರೆಡ್ಮಿ 9i
ಶಿಯೋಮಿ ತನ್ನ ಬಜೆಟ್ ಸ್ನೇಹಿ ಸ್ಮಾರ್ಟ್ಫೋನ್ ರೆಡ್ಮಿ 9I ಅನ್ನು ಭಾರತದಲ್ಲಿ ಈಗಾಗಲೇ ಬಿಡುಗಡೆ ಮಾಡಿದೆ. ಇದು 720 × 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇನ್ನು ಶಿಯೋಮಿ ರೆಡ್ಮಿ 9i ಅನ್ನು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್ ಹೊಂದಿದೆ. ಇದು 4GB + 64GB ಸಾಮರ್ಥ್ಯದ 2 ರೂಪಾಂತರಗಳಲ್ಲಿ ಫೋನ್ ಬಿಡುಗಡೆಯಾಗಿದ್ದು, ಇದರ ಬೆಲೆ 7,999 ರೂ ಆಗಿದೆ.

ಮೈಕ್ರೋಮ್ಯಾಕ್ಸ್ ಇನ್ 1B
ಭಾರತದ ಸ್ಮಾರ್ಟ್ಫೋನ್ ತಯಾರಕ ಮೈಕ್ರೋಮ್ಯಾಕ್ಸ್ ತನ್ನ ಎರಡು ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳನ್ನ ಕಳೆದ ವರ್ಷಾಂತ್ಯದಲ್ಲಿ ಬಿಡುಗಡೆ ಮಾಡಿತ್ತು. ಈ ಮೂಳಕ ಮಾರುಕಟ್ಟೆಗೆ ರಿ ಎಂಟ್ರಿ ನೀಡಿತ್ತು. ಇದರಲ್ಲಿ ಮೈಕ್ರೋಮ್ಯಾಕ್ಸ್ ಇನ್ 1B ಸ್ಮಾರ್ಟ್ಫೋನ್ ಕೂಡ ಒಂದಾಗಿದೆ. ಇದು 6.52 ಇಂಚಿನ ಹೆಚ್ಡಿ ಡಿಸ್ಪ್ಲೇ ಹೊಂದಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ 2GB + 32GB ಬೆಲೆ 6,999 ಮತ್ತು 4GB + 64GB ರೂಪಾಂತರದ ಬೆಲೆ 7,999 ರೂ.ಹೊಂದಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190