Home
ಸುದ್ದಿಜಾಲ

10,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಟಾಪ್‌ 5 ಸ್ಮಾರ್ಟ್‌ಫೋನ್‌ಗಳು!

ಇದು ಸ್ಮಾರ್ಟ್‌ಫೋನ್‌ ಜಮಾನ, ಸ್ಮಾರ್ಟ್‌ಫೋನ್‌ ಇಲ್ಲದೆ ದಿನ ಕಳೆಯುವುದಕ್ಕೆ ಸಾಧ್ಯವೇ ಇಲ್ಲ ಎನ್ನುವಷ್ಟರ ಮಟ್ಟಿಗೆ ಎಲ್ಲರನ್ನು ಆಕರ್ಷಿಸಿದೆ. ಅಲ್ಲದೆ ಎಲ್ಲರ ಕೈ ನಲ್ಲೂ ಸ್ಮಾರ್ಟ್‌ಫೋನ್‌ಗಳು ರಿಂಗಣಿಸುತ್ತಿವೆ. ಪ್ರತಿ ಕೆಲಸಕ್ಕು ಸ್ಮಾರ್ಟ್‌ಫೋನ್‌ ಅನ್ನು ನೆಚ್ಚಿಕೊಳ್ಳುವಂತಹ ಜಮಾನದಲ್ಲಿ ನಾವಿಂದು ಇದ್ದೇವೆ. ಸದ್ಯ ಯುವಕರಿಂದ ಹಿಡಿದು ಹಿರಯ ವಯೋಮಾನದವರಿಗೂ ಕೂಡ ಸ್ಮಾರ್ಟ್‌ಫೋನ್‌ ಕ್ರೇಜ್‌ ಬಿಟ್ಟಿಲ್ಲ. ಹಾಗಂತ ಎಲ್ಲರೂ ಕೂಡ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸಲು ಸಾಧ್ಯವಿಲ್ಲ. ಬಹುತೇಕರು ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳನ್ನ ಖರೀದಿಸಲು ಮುಂದಾಗುತ್ತಾರೆ.

ಸ್ಮಾರ್ಟ್‌ಫೋನ್‌

ಸ್ಮಾರ್ಟ್‌ಫೋನ್‌

ಹೌದು,ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ತರಹೇವಾರಿ ಫೀಚರ್ಸ್‌, ವೇರಿಯಂಟ್‌ಗಳನ್ನು ಒಳಗೊಂಡ ಸ್ಮಾರ್ಟ್‌ಫೋನ್‌ಗಳು ಲಭ್ಯ ಇವೆ. ಅವುಗಳಲ್ಲಿ ಕೆಲವರು ಐಫೋನ್ ನಂತಹ ಹೈ ಎಂಡ್‌ ಫೋನ್‌ ಖರೀದಿಸುತ್ತಾರೆ ಹಾಗೂ ಇನ್ನು ಕೆಲವರು ಬಜೆಟ್‌ ಬೆಲೆಯಲ್ಲಿಯೇ ಅತ್ಯುತ್ತಮ ಫೀಚರ್ಸ್‌ಗಳನ್ನು ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಲು ಮುಂದಾಗುತ್ತಾರೆ. ಸದ್ಯ ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ 10,000 ರೂ. ಪ್ರೈಸ್‌ಟ್ಯಾಗ್‌ ಒಳಗೆ ಖರೀದಿಸಬಹುದಾದ 5 ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿದ್ದೆವೆ.ಮುಂದೆ ಓದಿರಿ.

ರಿಯಲ್‌ಮಿ ನಾರ್ಜೊ 20A

ರಿಯಲ್‌ಮಿ ನಾರ್ಜೊ 20A

ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ನಲ್ಲಿ 8,499 ರೂ.ಗಳ ಬೆಲೆಯಲ್ಲಿ ಲಭ್ಯವಾಗಲಿದೆ. ಇದು 6.5 ಇoಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 665 ಪ್ರೊಸೆಸರ್ ಅನ್ನು ಹೊಂದಿದೆ. ಇದು 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಒಳಗೊಂಡಿದೆ.

ಪೊಕೊ C3

ಪೊಕೊ C3

ಇನ್ನು ಇತ್ತೀಚಿಗಷ್ಟೇ ಬಿಡುಗಡೆಯಾದ ಪೊಕೊ C3 ಬೇಸ್ ವೇರಿಯಂಟ್‌ ಸ್ಮಾರ್ಟ್‌ಫೋನ್‌ ಕೂಡ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಸದ್ಯ 7,499 ರೂ.ಗಳ ಬೆಲೆಯಲ್ಲಿ ಲಭ್ಯವಾಗಲಿದೆ. ಇದು 6.53 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಆಗಿದ್ದು, 5000 mAh ಬ್ಯಾಟರಿ ಸಾಮರ್ಥ್ಯವನ್ನು ಒಳಗೊಂಡಿದೆ.

ರೆಡ್ಮಿ 9 ಪ್ರೈಮ್

ರೆಡ್ಮಿ 9 ಪ್ರೈಮ್

ರೆಡ್ಮಿ 9 ಪ್ರೈಮ್ 4GB RAM ಮತ್ತು 64GB ಸಂಗ್ರಹ ಸಾಮರ್ಥ್ಯದ ಬೇಸ್‌ ಮಾಡೆಲ್‌ ಸ್ಮಾರ್ಟ್‌ಫೋನ್‌ ಸದ್ಯ ಭಾರತದಲ್ಲಿ 9,999 ರೂ. ಗಳಿಗೆ ಲಭ್ಯವಾಗಲಿದೆ. 6.5-ಇಂಚಿನ ಡಿಸ್‌ಪ್ಲೇ ಹೊಂದಿರುವ ಈ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್ ಶೈಲಿಯ ನಾಚ್,ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, 5020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.

ರೆಡ್ಮಿ 9A

ರೆಡ್ಮಿ 9A

ಶಿಯೋಮಿಯ ರೆಡ್‌ಮಿ 9A ಸ್ಮಾರ್ಟ್‌ಫೋನ್‌ ರೆಡ್ಮಿ 9-ಸರಣಿಯಲ್ಲಿ 10,000 ರೂ ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದೀಗ ಈ ಸ್ಮಾರ್ಟ್‌ಫೋನ್‌ ಬೆಲೆ 6,799 ರೂ, ಆಗಿದೆ. ಜೊತೆಗೆ ನೀವು ಬ್ಯಾಂಕ್ ಕಾರ್ಡ್‌ ಬಳಸಿ ಖರೀದಿಸದರೆ ಕ್ಯಾಶ್‌ಬ್ಯಾಕ್ ಮತ್ತು ರಿಯಾಯಿತಿಯನ್ನು ಸಹ ಪಡೆಯಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53-ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಮಿಡಿಯಾ ಟೆಕ್‌ ಹಿಲಿಯೊ G25 ಪ್ರೊಸೆಸರ್ ಅನ್ನು ಒಳಗೊಂಡಿದೆ.

ಮೊಟೊರೊಲಾ ಮೋಟೋ G9

ಮೊಟೊರೊಲಾ ಮೋಟೋ G9

ಮೋಟೋ G9 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ನಲ್ಲಿ 9,999 ರೂಗಳಿಗೆ ಮಾರಾಟವಾಗುತ್ತಿದೆ. ಅಲ್ಲದೆ ನೀವು ಬ್ಯಾಂಕ್ ಕಾರ್ಡ್ ಬಳಸಿ ಖರೀದಿಸಿದರೆ ಇನ್ನೂ ಕಡಿಮೆ ಬೆಲೆಯಲ್ಲಿ ಖರೀದಿಸುವ ಅವಕಾಶವನ್ನು ಸಹ ನಿಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್ ಹೊಂದಿದ್ದು, ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.

Best Mobiles in India

English summary
The best smartphones for under Rs 10,000.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+