ಸದ್ಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುತ್ತಿರುವ ಮೊಬೈಲ್‌ಗಳು ಇಲ್ಲಿವೆ ನೋಡಿ!
ಪ್ರಸ್ತುತ ಗ್ರಾಹಕರಿಗೆ ಟೆಕ್ ಮಾರುಕಟ್ಟೆಯಲ್ಲಿ ತರಹೇವಾರಿ ಮೊಬೈಲ್‌ಗಳ ಆಯ್ಕೆ ಲಭ್ಯ. ಅದಾಗ್ಯೂ, ಗ್ರಾಹಕರನ್ನು ಸೆಳೆಯಲು ಕೆಲವು ನೂತನ ಫೋನ್‌ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಲೇ ಇವೆ. ಅವುಗಳಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು ಬೆಲೆಯಿಂದ ಆಕರ್ಷಣೆ ಮಾಡಿದರೆ, ಮತ್ತೆ ಕೆಲವು ಫೋನ್‌ಗಳು ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆಯುತ್ತವೆ.
ಹೌದು, ಮಾರುಕಟ್ಟೆಯಲ್ಲಿ ಬಿಡುಗಡೆ ಆಗುವ ಎಲ್ಲ ಮೊಬೈಲ್‌ಗಳು ಗ್ರಾಹಕರನ್ನು ಸೆಳೆಯಲು ಸಫಲ ಆಗುವುದಿಲ್ಲ. ಅವುಗಳಲ್ಲಿ ಕೆಲವು ಫೋನ್‌ಗಳು ಮಾತ್ರ ಮಾರುಕಟ್ಟೆಯಲ್ಲಿ ಅಬ್ಬರಿಸುತ್ತವೆ. ವಿಶೇಷ ಫೀಚರ್ಸ್‌ಗಳಿಂದ ಹೆಚ್ಚಿನ ಬೇಡಿಕೆ ಪಡೆಯುತ್ತವೆ. ಮುಖ್ಯವಾಗಿ ಗ್ರಾಹಕರು ಕ್ಯಾಮೆರಾ, ಪ್ರೊಸೆಸರ್, ಡಿಸ್‌ಪ್ಲೇ ಅಂಶಗಳ ಬಗ್ಗೆ ಗಮನ ನೀಡುತ್ತಾರೆ. ಹಾಗಾದರೆ ಸದ್ಯ ಮಾರುಕಟ್ಟೆಯಲ್ಲಿ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿರುವ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಮೊಬೈಲ್ : ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್ QHD+ ಡೈಮಂಡ್ ಅಮೋಲೆಡ್ ಜೊತೆಗೆ 6.8 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಅನ್ನು ಪಡೆದಿದೆ. ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನಿನ ಬ್ಯಾಟರಿ 5,000mAh ಸಾಮರ್ಥ್ಯ ಪಡೆದಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G : ಈ ಮೊಬೈಲ್ 6.6 ಇಂಚಿನ ಹೆಚ್‌ಡಿ ಪ್ಲಸ್ ಸೂಪರ್ ಅಮೊಲೆಡ್ ಡಿಸ್‌ಪ್ಲೇ ಅನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1080 6nm ಪ್ರೊಸೆಸರ್ ಅನ್ನು ಒಳಗೊಂಡಿದ್ದು, 8GB + 128GB ಮತ್ತು 8GB + 256GB ಸ್ಟೋರೇಜ್ ಆಯ್ಕೆ ಪಡೆದಿದೆ. ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ.
ರೆಡ್ಮಿ ನೋಟ್ 12 ಪ್ರೊ 5G ಫೋನ್ : ಈ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 1080SoC ಪ್ರೊಸೆಸರ್ ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಪಡೆದಿದೆ. ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದು 67W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಐಫೋನ್ 14 ಪ್ರೊ ಮ್ಯಾಕ್ಸ್ ಫೋನ್ : ಈ ಫೋನ್ 6.7 ಇಂಚಿನ ರೆಟಿನಾ XDR ಡಿಸ್‌ಪ್ಲೇ ಹೊಂದಿದ್ದು, ಇದು ಸಹ ಆಲ್ವೇಸ್ ಆನ್ ಕಾರ್ಯವನ್ನು ಹೊಂದಿದೆ. ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಕ್ಯಾಮೆರಾವನ್ನು 65 ಪ್ರತಿಶತ ದೊಡ್ಡ ಸಂವೇದಕವನ್ನು ಹೊಂದಿದೆ. ಹಾಗೆಯೇ A16 ಬಯೋನಿಕ್ ಚಿಪ್ ಪ್ರೊಸೆಸರ್ ಪವರ್ ಪಡೆದಿವೆ.
ಟೆಕ್ನೋ ಸ್ಪಾರ್ಕ್ 10 5G : ಈ ಫೋನ್ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G ಮೊಬೈಲ್ : ಈ ಮೊಬೈಲ್ 6.4 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಜೊತೆಗೆ ಎಕ್ಸಿನೋಸ್ 1380SoC ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಒನ್ UI 5.1 ಸಪೋರ್ಟ್ ಪಡೆದಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 50ಎಂಪಿ ಆಗಿದ್ದು, 12ಎಂಪಿ ಅಲ್ಟ್ರಾ ವೈಡ್ ಲೆನ್ಸ್ ಆಯ್ಕೆ ಇದೆ. ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ.


Click it and Unblock the Notifications








