ಸದ್ಯ ಮೊಬೈಲ್‌ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಟಾಪ್‌ 5 ಫೋನ್‌ಗಳು!

|

ಸದ್ಯ ಪ್ರತಿಯೊಬ್ಬರಿಗೂ ಸ್ಮಾರ್ಟ್‌ಫೋನ್‌ ಅನಿವಾರ್ಯ ಎನಿಸಿದ್ದು, ಅದನ್ನು ಬಿಟ್ಟು ಇರುವುದು ಕಷ್ಟ ಸಾಧ್ಯ ಆಗಿದೆ. ನಿತ್ಯ ಸ್ಮಾರ್ಟ್‌ ಫೋನ್ ಮೂಲಕವೇ ಜನರ ಅನೇಕ ಕೆಲಸಗಳು ನಡೆಯುತ್ತವೆ. ಈ ನಿಟ್ಟಿನಲ್ಲಿ ಮೊಬೈಲ್ ತಯಾರಿಕಾ ಸಂಸ್ಥೆಗಳು ಗ್ರಾಹಕರನ್ನು ಸೆಳೆಯಲು ಆಕರ್ಷಕ ಫೀಚರ್ಸ್‌ಗಳ ಹೊಸ ಫೋನ್‌ ಗಳನ್ನು ಮಾರುಕಟ್ಟೆಗೆ ಪರಿಚಯ ಮಾಡುತ್ತವೆ. ಆದರೆ ಮಾರುಕಟ್ಟೆಗೆ ಎಂಟ್ರಿ ಕೊಡುವ ಎಲ್ಲ ಫೋನ್‌ಗಳು ಗ್ರಾಹಕರನ್ನು ಸೆಳೆಯುವುದಿಲ್ಲ.

ಅನಾವರಣ

ಹೌದು, ಗ್ರಾಹಕರನ್ನು ಆಕರ್ಷಿಸಲು ಕಂಪನಿಗಳು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡುತ್ತವೆ. ಅದಾಗ್ಯೂ ಅನಾವರಣ ಆಗುವ ಎಲ್ಲ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುವುದಿಲ್ಲ. ಕೆಲವು ಫೋನ್‌ಗಳು ಪ್ರೈಸ್‌ ಟ್ಯಾಗ್‌ ಮೂಲಕ, ಇನ್ನು ಕೆಲವು ಫೋನ್‌ಗಳು ಫೀಚರ್ಸ್‌ಗಳ ಮೂಲಕ ಮಾರುಕಟ್ಟೆ ಯಲ್ಲಿ ಸದ್ದು ಮಾಡುತ್ತವೆ. ಹಾಗೆಯೇ ಕೆಲವು ಫೋನ್‌ಗಳು ಹೇಳ ಹೆಸರಿಲ್ಲದೇ ಸೈಡ್‌ ಲೈನ್‌ನಲ್ಲಿ ಕಾಣಿಸಿಕೊಳ್ಳುತ್ತವೆ. ಹಾಗಾದರೇ ಸದ್ಯ ಮಾರುಕಟ್ಟೆ ಯಲ್ಲಿ ಟ್ರೆಂಡಿಂಗ್‌ನಲ್ಲಿರುವ ಸ್ಮಾರ್ಟ್‌ ಫೋನ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌ 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್‌ ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ ಸಹ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್‌ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನೈಟ್‌ ಮೋಡ್‌ ಆಯ್ಕೆ ಇದ್ದು, ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಬಹುದಾಗಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್‌ ಬೆಂಬಲಿಸಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

ರೆಡ್ಮಿ ನೋಟ್ 10 ಪ್ರೊ

ರೆಡ್ಮಿ ನೋಟ್ 10 ಪ್ರೊ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR 10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲ ದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6 GB RAM + 64 GB ಮತ್ತು 6 GB + 128 GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೆ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದುದು 25W ಸೂಪರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಶಿಯೋಮಿ 11T ಪ್ರೊ

ಶಿಯೋಮಿ 11T ಪ್ರೊ

ಶಿಯೋಮಿ 11T ಪ್ರೊ ಫೋನ್‌ 6.67 ಇಂಚಿನ ಫ್ಲಾಟ್ AMOLED ಟ್ರೀ ಕಲರ್ ಡಿಸ್‌ಪ್ಲೇ ಹೊಂದಿದ್ದು, ಇದರೊಂದಿಗೆ 120Hz ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಕ್ವಾಲ್ಕಮ್ ಸ್ನ್ಯಾಪ್‌ ಡ್ರಾಗನ್ 888 SoC ಪ್ರೊಸೆಸರ್‌ ಇದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಪಡೆದಿದೆ. ಹಾಗೆಯೇ 12 GB RAM ವೇರಿಯಂಟ್ ಆಯ್ಕೆ ಇದೆ. ಇನ್ನು ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್‌ ನಲ್ಲಿದೆ. ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ನಲ್ಲಿದೆ. ಹಾಗೆಯೇ 5,000 mAh ಬ್ಯಾಟರಿ ಬ್ಯಾಕ್‌ ಅಪ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂರಕವಾಗಿ 120 W ಹೈಪರ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ಐಫೋನ್ 13 ಫೋನ್‌

ಐಫೋನ್ 13 ಫೋನ್‌

ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200 nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆ ಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Top 5 Trending Mobile Phones Of Week 40: Here's Is The List.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X