Just In
- 7 hrs ago
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- 8 hrs ago
ಡಿಜಿಟಲ್ ಇಂಡಿಯಾಗಾಗಿ ನಾಲ್ಕು ಹೊಸ ಯೋಜನೆಗಳನ್ನು ಪರಿಚಯಿಸಿದ ಪ್ರಧಾನಿ ಮೋದಿ!
- 9 hrs ago
ಭಾರತದಲ್ಲಿ ಬಹುನಿರೀಕ್ಷಿತ ಐಫೋನ್ 14 ಪ್ರೊ ಬೆಲೆ ಎಷ್ಟಿರಬಹುದು?..ಫೀಚರ್ಸ್ ಏನು?
- 11 hrs ago
ಸಾರ್ವಜನಿಕರೇ ನಿಮ್ಮ ಮನೆ ಮೇಲೆ ಮೊಬೈಲ್ ಟವರ್ ಹಾಕಿಸುವ ಮುನ್ನ ಎಚ್ಚರ?
Don't Miss
- Sports
ವಿಂಡೀಸ್ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ, ಸಂಜು ಸ್ಯಾಮ್ಸನ್ಗೆ ಸಿಗಲಿದೆ ಮತ್ತೊಂದು ಅವಕಾಶ?
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Automobiles
ದೇಶದ ಮೊದಲ 150kWh ಡಿಸಿ ಇವಿ ಫಾಸ್ಟ್ ಚಾರ್ಜರ್ ಸ್ಥಾಪಿಸಿದ ಕಿಯಾ ಇಂಡಿಯಾ
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಮಾರುಕಟ್ಟೆಯಲ್ಲಿ ಟ್ರೆಂಡಿಂಗ್ನಲ್ಲಿ ಕಾಣಿಸಿಕೊಂಡ ಫೋನ್ಗಳ ಲಿಸ್ಟ್ ಇಲ್ಲಿದೆ!
ಪ್ರಸ್ತುತ ಸ್ಮಾರ್ಟ್ಫೋನ್ ಇಲ್ಲದೇ ಮನುಷ್ಯನನ್ನು ಊಹಿಸುವುದು ಕಷ್ಟ ಸಾಧ್ಯ ಎಂದರೆ ತಪ್ಪಾಗಲಾರದು. ಏಕೆಂದರೇ ಸ್ಮಾರ್ಟ್ಫೋನ್ ಎಲ್ಲರ ದೈನಂದಿನ ಜೀವನದಲ್ಲಿ ಪ್ರಮುಖ ಡಿವೈಸ್ ಆಗಿ ಬಿಂಬಿತವಾಗಿದೆ. ಮೊಬೈಲ್ ಕಂಪನಿಗಳು ಆಕರ್ಷಕ ಫೀಚರ್ಸ್ಗಳೊಂದಿಗೆ ಹೊಸ ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡುತ್ತಲೇ ಇರುತ್ತವೆ. ಇನ್ನು ಬಿಡುಗಡೆ ಆಗುವ ಪ್ರತಿಯೊಂದು ಸ್ಮಾರ್ಟ್ಫೋನ್ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುವುದಿಲ್ಲ. ಆ ಪೈಕಿ ಕೆಲವೊಂದು ಫೋನ್ ಮಾತ್ರ ಟ್ರೆಂಡಿಂಗ್ನಲ್ಲಿ ಕಾಣಿಸಿಕೊಳ್ಳುತ್ತವೆ.

ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗುವ ಎಲ್ಲ ಸ್ಮಾರ್ಟ್ಫೋನ್ಗಳು ಗ್ರಾಹಕರನ್ನು ಸೆಳೆಯುವುದಿಲ್ಲ. ಆದರೆ ಕೆಲವು ಫೋನ್ಗಳು ಲೀಡಿಂಗ್ನಲ್ಲಿ ಸ್ಥಾನ ಪಡೆದರೇ, ಮತ್ತೆ ಕೆಲವು ಫೋನ್ಗಳು ಮಾರುಕಟ್ಟೆಯಿಂದ ಬಹುಬೇಗನೇ ಮಾಯವಾಗುತ್ತವೆ. ಆದರೆ ಸದ್ಯ ಮಾರುಕಟ್ಟೆಯಲ್ಲಿ ರಿಯಲ್ಮಿ, ವಿವೋ, ಸ್ಯಾಮ್ಸಂಗ್, ಶಿಯೋಮಿ, ಸೇರಿದಂತೆ ಬಜೆಟ್ ಬೆಲೆಯ ಫೋನ್ಗಳು ಹೆಚ್ಚು ಲೀಡಿಂಗ್ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಪ್ರಸ್ತುತ ಟ್ರೆಂಡಿಂಗ್ನಲ್ಲಿರುವ ಮೊಬೈಲ್ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್ಫೋನ್ 6.8 ಇಂಚಿನ ಎಡ್ಜ್ QHD ಡೈನಾಮಿಕ್ AMOLED 2X ಡಿಸ್ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್ಅಪ್ ಪಡೆದಿದೆ.
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್ಫೋನ್
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್ಫೋನ್ 6.1 ಇಂಚಿನ ಫುಲ್ HD+ OLED ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಆಕ್ಟಾ ಕೋರ್ ಗೂಗಲ್ ಟೆನ್ಸರ್ SoC ಮತ್ತು Titan M2 ಸೆಕ್ಯುರಿಟಿ ಕೊಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12.2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ ನೋಟ್ 11 ಸ್ಮಾರ್ಟ್ಫೋನ್
ರೆಡ್ಮಿ ನೋಟ್ 11 ಸ್ಮಾರ್ಟ್ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್ಡಿ+ ಅಮೋಲೆಡ್ ಡಾಟ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, MIUI 13 ನೊಂದಿಗೆ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಕ್ವಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಪ್ರೊ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್
ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ ಫೀಚರ್ಸ್ ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ 6.7 ಇಂಚಿನ ಡಿಸ್ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್ಪ್ಲೇ ಮಾದರಿಯಲ್ಲಿದೆ. ಹೈ ಎಂಡ್ ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ ಸಹ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನೈಟ್ ಮೋಡ್ ಆಯ್ಕೆ ಇದ್ದು, ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಬಹುದಾಗಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್ ಬೆಂಬಲಿಸಲಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್ಫೋನ್
ಸ್ಯಾಮ್ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್ಫೋನ್ 120Hz ರಿಫ್ರೆಶ್ ರೇಟ್ ಹೊಂದಿರುವ 6.5 ಇಂಚಿನ ಫುಲ್ ಹೆಚ್ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ O ಡಿಸ್ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 8 GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086