ಪ್ರಸ್ತುತ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡ ಫೋನ್‌ಗಳ ಲಿಸ್ಟ್ ಇಲ್ಲಿದೆ!
ಸ್ಮಾರ್ಟ್‌ಫೋನ್ ಡಿವೈಸ್‌ಗಳು ಪ್ರಸ್ತುತ ಪ್ರತಿಯೊಬ್ಬರ ಅಗತ್ಯ ಹಾಗೂ ಅವಶ್ಯಕ ಸಾಧನವಾಗಿ ಗುರುತಿಸಿಕೊಂಡಿದೆ. ಈ ನಿಟ್ಟಿನಲ್ಲಿ ಗ್ರಾಹಕರನ್ನು ಸೆಳೆಯಲು ಪ್ರಮುಖ ಮೊಬೈಲ್ ಕಂಪನಿಗಳು ಮಾರುಕಟ್ಟೆಯಲ್ಲಿ ಹೊಸ ಮಾದರಿಯ ಆಕರ್ಷಕ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತ ಸಾಗಿವೆ. ಅವುಗಳಲ್ಲಿ ಮುಖ್ಯವಾಗಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದ್ದರು, ಅವುಗಳು ಹೊಸ ಅಪ್‌ಡೇಟ್ ಫೀಚರ್ಸ್‌ಗಳನ್ನು ಒಳಗೊಂಡಿರುವುದು ವಿಶೇಷ. ಪ್ರಸಕ್ತ ವರ್ಷದಲ್ಲಿಯೂ ಹಲವು ಸ್ಮಾರ್ಟ್‌ಫೋನ್‌ಗಳು ಎಂಟ್ರಿ ಆಗಿವೆ. ಆದರೆ ಅವುಗಳಲ್ಲಿ ಕೆಲವು ಮಾತ್ರ ಲೀಡಿಂಗ್‌ನಲ್ಲಿ ಕಾಣಿಸಿಕೊಳ್ಳುತ್ತವೆ.

ಹೌದು, ಮಾರುಕಟ್ಟೆಗೆ ಬಿಡುಗಡೆ ಆಗುವ ಎಲ್ಲ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುವುದಿಲ್ಲ. ಆದರೆ ಕೆಲವು ಫೋನ್‌ಗಳು ಲೀಡಿಂಗ್‌ನಲ್ಲಿ ಸ್ಥಾನ ಪಡೆದರೇ, ಮತ್ತೆ ಕೆಲವು ಫೋನ್‌ಗಳು ಮಾರುಕಟ್ಟೆಯಿಂದ ಬಹುಬೇಗನೇ ಮಾಯವಾಗುತ್ತವೆ. ಆದರೆ ಸದ್ಯ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್, ಶಿಯೋಮಿ, ಸೇರಿದಂತೆ ಬಜೆಟ್ ಬೆಲೆಯ ಫೋನ್‌ಗಳು ಹೆಚ್ಚು ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಪ್ರಸ್ತುತ ಟ್ರೆಂಡಿಂಗ್‌ನಲ್ಲಿರುವ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ ರೆಡ್ಮಿ ನೋಟ್ 10 ಪ್ರೊ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ರೆಡ್ಮಿ ನೋಟ್ 10
ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನುಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ.

ಪೊಕೊ X3 ಪ್ರೊ
ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 -ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 860 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM, 8GB RAM ಮತ್ತು 128GB, 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ.

ಪೊಕೊ F3 ಫೋನ್
ಪೊಕೊ F3 ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದ್ದು, ಇನ್ಫಿನಿಟಿ-ಒ-ಡಿಸ್‌ಪ್ಲೇ ಆಗಿದೆ. ಇದು ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಇದೆ.


Click it and Unblock the Notifications