ಸದ್ಯ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡ ಸ್ಮಾರ್ಟ್‌ಫೋನ್‌ಗಳು ಇವೇ ನೋಡಿ!
ಪ್ರಸ್ತುತ ಸ್ಮಾರ್ಟ್‌ಫೋನ್ ಇಲ್ಲದೇ ಜನರ ಜೀವನವನ್ನು ಊಹಿಸುವುದು ಕಷ್ಟ ಸಾಧ್ಯ ಎನಿಸುತ್ತದೆ. ಏಕೆಂದರೇ ಫೋನ್ ಎಲ್ಲರಿಗೂ ಅವಶ್ಯ ಸಾಧನ ಎನ್ನುವುದರಲ್ಲಿ ಎರಡು ಮಾತಿಲ್ಲ. ಹೀಗಾಗಿ ಮೊಬೈಲ್ ಸಂಸ್ಥೆಗಳು ಆಕರ್ಷಕ ಫೀಚರ್ಸ್‌ಗಳೊಂದಿಗೆ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತ ಮುನ್ನಡೆದಿವೆ. ಅದಾಗ್ಯೂ ಬಿಡುಗಡೆ ಆಗುವ ಪ್ರತಿಯೊಂದು ಫೋನ್ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುವುದಿಲ್ಲ. ಕೆಲವೇ ಕೆಲವು ಫೋನ್‌ಗಳು ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಳ್ಳುತ್ತವೆ.
ಹೌದು, ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗುವ ಎಲ್ಲ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುವುದಿಲ್ಲ. ಆದರೆ ಕೆಲವು ಫೋನ್‌ಗಳು ಲೀಡಿಂಗ್‌ನಲ್ಲಿ ಸ್ಥಾನ ಪಡೆದರೇ, ಮತ್ತೆ ಕೆಲವು ಫೋನ್‌ಗಳು ಮಾರುಕಟ್ಟೆಯಿಂದ ಸದ್ದಿಲ್ಲದೆ ನಿರ್ಗಮಿಸುತ್ತವೆ. ಆದರೆ ಸದ್ಯ ಮಾರುಕಟ್ಟೆಯಲ್ಲಿ ರಿಯಲ್‌ಮಿ, ವಿವೋ, ಸ್ಯಾಮ್‌ಸಂಗ್, ಶಿಯೋಮಿ, ಟೆಕ್ನೋ ಸೇರಿದಂತೆ ಬಜೆಟ್ ಬೆಲೆಯ ಫೋನ್‌ಗಳು ಹೆಚ್ಚು ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಸದ್ಯ ಟ್ರೆಂಡಿಂಗ್‌ನಲ್ಲಿರುವ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G : ಈ ಸ್ಮಾರ್ಟ್‌ಫೋನ್ 6.4 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಎಕ್ಸಿನೋಸ್ 1380SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಒನ್UI 5.1 ರನ್ ಮಾಡಲಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಇದರಲ್ಲಿ 50MP ಪ್ರಾಥಮಿಕ ಕ್ಯಾಮೆರಾ, 12MP ಅಲ್ಟ್ರಾ ವೈಡ್ ಲೆನ್ಸ್ ಆಯ್ಕೆ ಇದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ರೆಡ್ಮಿ ನೋಟ್ 12 ಟರ್ಬೋ : ಈ ಸ್ಮಾರ್ಟ್‌ಫೋನ್ 6.67 FHD+ ಅಮೊಲೇಡ್ ಸ್ಕ್ರೀನ್ ಹೊಂದಿರಲಿದ್ದು, ಇದಕ್ಕೆ ಪೂರಕವಾಗಿ 120Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿರಲಿದೆ. ಹಾಗೆಯೇ ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 7+ ಜೆನ್ 1 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ತ್ರಿವಳಿ ಕ್ಯಾಮೆರಾ ರಚನೆ ಪಡೆದಿರಲಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದ್ದು, ಇದರೊಂದಿಗೆ 16 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸೌಲಭ್ಯ ಪಡೆದಿರಲಿದೆ.
ರೆಡ್ಮಿ ನೋಟ್ 12 ಪ್ರೊ 5G : ಈ ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1080SoC ಪ್ರೊಸೆಸರ್ ಪಡೆದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಪಡೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿದ್ದು, ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಐಫೋನ್ 14 ಪ್ರೊ ಮ್ಯಾಕ್ಸ್ : ಈ ಫೋನ್ 6.7 ಇಂಚಿನ ರೆಟಿನಾ XDR ಡಿಸ್‌ಪ್ಲೇ ಹೊಂದಿದ್ದು, ಇದು ಸಹ ಆಲ್ವೇಸ್ ಆನ್ ಕಾರ್ಯವನ್ನು ಹೊಂದಿದೆ. ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಕ್ಯಾಮೆರಾವನ್ನು 65 ಪ್ರತಿಶತ ದೊಡ್ಡ ಸಂವೇದಕವನ್ನು ಹೊಂದಿದೆ. ಹಾಗೆಯೇ A16 ಬಯೋನಿಕ್ ಚಿಪ್ ಪ್ರೊಸೆಸರ್ ಪವರ್ ಪಡೆದಿವೆ.

ಟೆಕ್ನೋ ಸ್ಪಾರ್ಕ್ 10 5G : ಈ ಫೋನ್ 6.6 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A34 5G : ಈ ಸ್ಮಾರ್ಟ್‌ಫೋನ್ 6.6 ಇಂಚಿನ ಹೆಚ್‌ಡಿ ಪ್ಲಸ್ ಸೂಪರ್ ಅಮೊಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1080 6nm ಪ್ರೊಸೆಸರ್ ಅನ್ನು ಒಳಗೊಂಡಿದ್ದು, 8GB + 128GB ಮತ್ತು 8GB + 256GB ಸ್ಟೋರೇಜ್ ಆಯ್ಕೆ ಪಡೆದಿದೆ. ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ.


Click it and Unblock the Notifications








