ಸದ್ಯ ಗ್ರಾಹಕರ ಗಮನ ಸೆಳೆದಿರುವ ಟಾಪ್‌ 5 ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ!

|

ಗ್ಯಾಡ್ಜೆಟ್ಸ್‌ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಹೆಚ್ಚಿದ್ದು, ನಿಟ್ಟಿನಲ್ಲಿ ಮೊಬೈಲ್‌ ಕಂಪನಿಗಳು ಮಾರುಕಟ್ಟೆಗೆ ಹೊಸ ಮಾಡೆಲ್‌ ಸ್ಮಾರ್ಟ್‌ಫೋನ್‌ಗಳು ಪರಿಚಯಿಸುತ್ತ ಸಾಗಿವೆ. ಹಾಗೆಯೇ ಪ್ರಮುಖ ಕಂಪನಿಗಳು ಸಹ ಹೈ ಎಂಡ್ ಫೀಚರ್ಸ್‌ಗಳ ನೂತನ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡುತ್ತಿವೆ. ಬಿಡುಗಡೆ ಆಗುವ ಫೋನ್‌ಗಳಲ್ಲಿ ಕೆಲವು ಪ್ರೈಸ್‌ ನಿಂದ ಗಮನ ಸೆಳೆದರೇ, ಮತ್ತೆ ಕೆಲವು ಫೋನ್‌ಗಳು ವಿಶೇಷ ಫೀಚರ್ಸ್‌ಗಳಿಂದ ಆಕರ್ಷಕ ಅನಿಸುತ್ತವೆ.

ಅದಾಗ್ಯೂ

ಹೌದು, ಮೊಬೈಲ್ ಮಾರುಕಟ್ಟೆಗೆ ಲಾಂಚ್ ಆಗುವ ಎಲ್ಲ ಹೊಸ ಸ್ಮಾರ್ಟ್‌ಫೋನ್‌ಗಳು ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಇತ್ತೀಚಿನ ಬಹುತೇಕ ಎಲ್ಲ ಹೊಸ ಫೋನ್‌ಗಳು ಅಧಿಕ ಕ್ಯಾಮೆರಾ ಸೆನ್ಸಾರ್‌ ಹಾಗೂ ವೇಗದ ಪ್ರೊಸೆಸರ್‌ ಹೊಂದಿರುತ್ತವೆ. ಅದಾಗ್ಯೂ ಕೆಲವು ಫೋನ್‌ಗಳು ಮಾತ್ರ ಸ್ಮಾರ್ಟ್‌ಫೋನ್ ಪ್ರಿಯರನ್ನು ಆಕರ್ಷಿಸುತ್ತವೆ. ಹಾಗಾದರೇ ಟ್ರೆಂಡಿಂಗ್‌ನಲ್ಲಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10 ಪ್ರೊ

ರೆಡ್ಮಿ ನೋಟ್ 10 ಪ್ರೊ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೆಯೇ ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ರೆಡ್ಮಿ ನೋಟ್ 10

ರೆಡ್ಮಿ ನೋಟ್ 10

ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಇದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ.

ಆಸೂಸ್‌ ROG ಫೋನ್ 5

ಆಸೂಸ್‌ ROG ಫೋನ್ 5

ಈ ಸ್ಮಾರ್ಟ್‌ಫೋನ್‌ 1,080x2,448 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಕಾರ್ಯನಿರ್ವಹಿಸುತ್ತದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಆಗಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಶಿಯೋಮಿ ಮಿ 10s

ಶಿಯೋಮಿ ಮಿ 10s

ಶಿಯೋಮಿ ಮಿ 10s ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ ಜೊತೆಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇಯನ್ನ ಹೊಂದಿದೆ. ‌ಹಾಗೆಯೇ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ f/1.69 ಲೆನ್ಸ್‌ ಬೆಂಬಲದೊಂದಿಗೆ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಈ ಸ್ಮಾರ್ಟ್‌ಫೋನ್‌ 4,780mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರ ಜೊತೆಗೆ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಪೋರ್ಟ್‌ ಪಡೆದಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೆಯೇ ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5020mAh ಬ್ಯಾಟರಿ ಪವರ್ ಪಡೆದಿದೆ.

Best Mobiles in India

English summary
Top 5 Trending Smartphones OF This Week.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X