ಸದ್ಯ ಮಾರುಕಟ್ಟೆಯಲ್ಲಿ ಅಬ್ಬರಿಸುತ್ತಿರುವ ಟಾಪ್‌ 5 ಸ್ಮಾರ್ಟ್‌ಫೋನ್‌ಗಳು!

|

ಸದ್ಯ ಸ್ಮಾರ್ಟ್‌ಫೋನ್‌ ಪ್ರತಿಯೊಬ್ಬರ ಅಗತ್ಯ ಹಾಗೂ ಅವಶ್ಯ ಡಿವೈಸ್‌ ಆಗಿದೆ. ಏಕೆಂದರೇ ದೈನಂದಿನ ಬಹುತೇಕ ಕೆಲಸಗಳು ಸ್ಮಾರ್ಟ್‌ಫೋನ್ ಮೂಲಕವೇ ನಡೆಸುತ್ತಾರೆ. ಈ ನಿಟ್ಟಿನಲ್ಲಿ ಮೊಬೈಲ್ ತಯಾರಿಕಾ ಕಂಪನಿಗಳು ಆಕರ್ಷಕ ಫೀಚರ್ಸ್‌ಗಳೊಂದಿಗೆ ಹೊಸ ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡುತ್ತಲೇ ಸಾಗಿವೆ. ಆದರೆ ಮಾರುಕಟ್ಟೆಗೆ ಎಂಟ್ರಿ ಪಡೆಯುವ ಪ್ರತಿ ಫೋನ್‌ಗಳು ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿ ಆಗುವುದಿಲ್ಲ. ಆ ಪೈಕಿ ಕೆಲವೊಂದು ಫೋನ್‌ಗಳು ಮಾತ್ರ ಲೀಡಿಂಗ್‌ನಲ್ಲಿ ಕಾಣಿಸಿಕೊಳ್ಳುತ್ತವೆ.

ಫೋನ್‌ಗಳು

ಹೌದು, ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಕೆಲವು ಫೋನ್‌ಗಳು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆಯುತ್ತವೆ. ಇನ್ನು ಕೆಲವು ಫೋನ್‌ಗಳು ಪ್ರೈಸ್‌ ಟ್ಯಾಗ್‌ನಿಂದ ಗಮನ ಸೆಳೆಯುತ್ತವೆ. ಇವಷ್ಟೆ ಅಲ್ಲದೇ ಇನ್ನಿತರೆ ಕಾರಣಗಳಿಂದಲೂ ಕೆಲವೊಮ್ಮೆ ಫೋನ್‌ಗಳು ಇಷ್ಟವಾಗುತ್ತವೆ. ಆದರೆ ಇನ್ನು ಕೆಲವು ಫೋನ್‌ಗಳು ಮಾರುಕಟ್ಟೆಯಿಂದ ದೂರ ಸರಿದು ಬಿಡುತ್ತವೆ. ಹಾಗಾದರೇ ಪ್ರಸ್ತುತ ಟ್ರೆಂಡಿಂಗ್‌ನಲ್ಲಿರುವ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌

ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌

ಗೂಗಲ್‌ ಪಿಕ್ಸೆಲ್‌ 6 ಪ್ರೊ ಸ್ಮಾರ್ಟ್‌ಫೋನ್‌ 1,440x3,120 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಎಲ್‌ಟಿಪಿಒ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 10Hz ನಿಂದ 120Hz ವರೆಗಿನ ವೇರಿಯಬಲ್ ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಗೂಗಲ್ ಟೆನ್ಸರ್ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಟೆನ್ಸರ್ 20-ಕೋರ್ ಜಿಪಿಯು ಹೊಂದಿದ್ದು, ಉತ್ತಮ ಕಾರ್ಯಕ್ಷಮತೆ ಮತ್ತು ದಕ್ಷತೆಗಾಗಿ ವಿನ್ಯಾಸಗೊಳಿಸಲಾಗಿದೆ. ಹಾಗೆಯೇ 12GB RAM ಮತ್ತು 512GB ಡೀಫಾಲ್ಟ್ ಸ್ಟೋರೇಜ್ ಅನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 5,003mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌ 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್‌ ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ ಸಹ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್‌ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನೈಟ್‌ ಮೋಡ್‌ ಆಯ್ಕೆ ಇದ್ದು, ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಬಹುದಾಗಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್‌ ಬೆಂಬಲಿಸಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ನಾಲ್ಕು ಬಣ್ಣಗಳ ಆಯ್ಕೆ ಪಡೆದಿದೆ.

ಗೂಗಲ್ ಪಿಕ್ಸೆಲ್‌ 6 ಸ್ಮಾರ್ಟ್‌ಫೋನ್‌

ಗೂಗಲ್ ಪಿಕ್ಸೆಲ್‌ 6 ಸ್ಮಾರ್ಟ್‌ಫೋನ್‌

ಗೂಗಲ್ ಪಿಕ್ಸೆಲ್‌ 6 ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇದು 6.4 ಇಂಚಿನ ಫುಲ್‌ ಹೆಚ್‌ಡಿ+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ 90Hz ರೀಫ್ರೇಶ್ ರೇಟ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಪಿಕ್ಸೆಲ್‌ 6 ಸ್ಮಾರ್ಟ್‌ಫೋನ್‌ ಇದು ಆಕ್ಟಾ-ಕೋರ್ ಸಿಪಿಯು ಮತ್ತು 20-ಕೋರ್ ಜಿಪಿಯು ಹೊಂದಿದೆ. ಇದರೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ.

ಶಿಯೋಮಿ ರೆಡ್ಮಿ ನೋಟ್ 10 ಪ್ರೊ

ಶಿಯೋಮಿ ರೆಡ್ಮಿ ನೋಟ್ 10 ಪ್ರೊ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೆ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 25W ಸೂಪರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Top 5 Trending Smartphones of Week 42.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X