ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಆಗಲಿರುವ ಟಾಪ್ 5 ಸ್ಮಾರ್ಟ್‌ಫೋನ್‌ಗಳು!
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಸಾಕಷ್ಟು ವಿಶಾಲವಾಗಿದೆ. ಪ್ರತಿನಿತ್ಯ ಇಲ್ಲಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಭರಾಟೆ ಜೋರಾಗಿಯೇ ನಡೆಯುತ್ತಿರಯುತ್ತೆ. ಇನ್ನು ಈಗಾಗಲೇ ಭಾರತದಲ್ಲಿ ಹಲವಾರು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವುದಾಗಿ ಇತ್ತೀಚೆಗೆ ಘೋಷಿಸಲಾಗಿದೆ. ಇವುಗಳಲ್ಲಿ ಸಾಕಷ್ಟು ಸ್ಮಾರ್ಟ್‌ಫೋನ್‌ಗಳು ಸ್ಮಾರ್ಟ್‌ಫೋನ್ ಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆಯನ್ನ ಹುಟ್ಟು ಹಾಕಿವೆ. ಸದ್ಯ ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಅತ್ಯುತ್ತಮ ಫೋನ್‌ಗಳ ಪಟ್ಟಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಹೌದು, ಭಾರತದ ಮಾರುಕಟ್ಟೆಗೆ ಶೀಘ್ರದಲ್ಲೆ ಎಂಟ್ರಿ ನೀಡಲಿರುವ ಸ್ಮಾರ್ಟ್‌ಫೋನ್‌ಗಳ ಪಟ್ಟಿ ಸಾಕಷ್ಟು ಆಸಕ್ತಿದಾಯಕವಾಗಿದೆ. ಸದ್ಯ ಭಾರತದಲ್ಲಿ ಲಭ್ಯವಿರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಮತ್ತು ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಹಿಂದಿನ ಲೇಖನದಲ್ಲಿ ತಿಳಿಸಿದ್ದೀವಿ. ಇದೀಗ ಭಾರತದಲ್ಲಿ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿರುವ ಹಾಗೂ ಸ್ಮಾರ್ಟ್‌ಫೋನ್ ಪ್ರಿಯರು ಆಸಕ್ತಿ ಕಾಯುತ್ತಿರುವ, ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಆಗಲಿರುವ ಸ್ಮಾರ್ಟ್‌ಫೋನ್‌ಗಳ ಪಟ್ಟಿ ಇಲ್ಲಿದೆ ಓದಿರಿ.

ಒನ್‌ಪ್ಲಸ್ 8T
ಒನ್ ಪ್ಲಸ್ 8T ಸ್ಮಾರ್ಟ್‌ಫೋನ್ ಕೂಡ ಶೀಘ್ರದಲ್ಲಿಯೇ ಭಾರತದಲ್ಲಿ ಬಿಡುಗಡೆ ಆಗಲಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ 6.55 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ಲಸ್ ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಅನ್ನು ಹೊಂದಿದೆ. ಅಲ್ಲದೆ ಇದು 20 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

infinix note 7
ಇದು ಕೆಲವೇ ದಿನಗಳಲ್ಲಿ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ 6.95 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G70 ಪ್ರೊಸೆಸರ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ , ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 20
ಇನ್ನು ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ರಿಯಲ್‌ಮಿ ನಾರ್ಜೊ 20 ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್ ವಿಶೇಷತೆಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ 4GB RAM+ 64GB ಮತ್ತು 4GB RAM + 128GB ಸಂಗ್ರಹ ಸಾಮರ್ಥ್ಯದ ವೆರಿಯೆಂಟ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎನ್ನಲಾಗಿದೆ.

ರಿಯಲ್‌ಮಿ ನಾರ್ಜೊ 20A
ರಿಯಲ್‌ಮಿ ನಾರ್ಜೊ 20 A ಸ್ಮಾರ್ಟ್‌ಫೋನ್ ಕೂಡ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಸ್ಮಾರ್ಟ್‌ಫೋನ್ ಆಗಿದೆ. ಇದು 3GB RAM + 32GB ಮತ್ತು 4GB RAM + 64GB ಸಂಗ್ರಹ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ. ಅಲ್ಲದೆ ಇದು ಗ್ಲೋರಿ ಸಿಲ್ವರ್ ಮತ್ತು ವಿಕ್ಟರಿ ಬ್ಲೂ ಬಣ್ಣದ ಆವೃತ್ತಿಗಳಲ್ಲಿ ಲಬ್ಯವಾಗುವ ಸಾಧ್ಯತೆ ಇದೆ.

ರಿಯಲ್‌ಮಿ ನಾರ್ಜೊ 20 ಪ್ರೊ
ರಿಯಲ್‌ಮಿ ನಾರ್ಜೊ 20 ಪ್ರೊ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಸ್ಮಾರ್ಟ್‌ಫೋನ್ ಆಗಿ ಗುರುತಿಸಿಕೊಂಡಿದೆ. ಇದು 6GB RAM + 64GB ಮತ್ತು 8GB RAM + 128GB ಶೇಖರಣಾ ಆಯ್ಕೆಗಳನ್ನು ಹೊಂದಿರುತ್ತದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ನಿಂಜಾ ಮತ್ತು ವೈಟ್ ನೈಟ್ ಕಲರ್ ಆಯ್ಕೆಗಳಲ್ಲಿ ಲಬ್ಯವಾಗಲಿದೆ ಎನ್ನಲಾಗಿದೆ.


Click it and Unblock the Notifications
