Home
ಸುದ್ದಿಜಾಲ

ಭಾರತದಲ್ಲಿ 30,000 ರೂ ಒಳಗೆ ಲಭ್ಯವಾಗುವ ಐದು ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳು!

ಭಾರತದಲ್ಲಿ ಈ ವರ್ಷದ ಅಂತ್ಯದ ವೇಳೆಗೆ 5G ನೆಟ್‌ವರ್ಕ್‌ ಲಭ್ಯವಾಗುವ ನಿರೀಕ್ಷೆ ಇದೆ. 5G ನೆಟ್‌ವರ್ಕ್‌ ಬಂದ ನಂತರ ನಿಮ್ಮ ಸ್ಮಾರ್ಟ್‌ಫೋನ್‌ಗಳನ್ನು ನೀವು 5Gಗೆ ಅಪ್ಡೇಟ್‌ ಮಾಡಬೇಕಾಗುತ್ತದೆ. ಇದೇ ಕಾರಣಕ್ಕೆ ಹೆಚ್ಚಿನ ಸ್ಮಾರ್ಟ್‌ಫೋನ್‌ ಕಂಪೆನಿಗಳು ಭಾರತದಲ್ಲಿ 5G ನೆಟ್‌ವರ್ಕ್‌ ಇಲ್ಲದೆ ಹೋದರೂ 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಿವೆ. ಭವಿಷ್ಯದ ದೃಷ್ಟಿಯಿಂದ 5G ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸುವುದು ಕೂಡ ಉತ್ತಮ ಎನಿಸಿದೆ. ಇನ್ನು ಮಾರುಕಟ್ಟೆಯಲ್ಲಿ 5G ಬೆಂಬಲಿಸುವ ಅನೇಕ ಸ್ಮಾರ್ಟ್‌ಫೋನ್‌ಗಳಿದ್ದು, ಸ್ಮಾರ್ಟ್‌ಫೋನ್‌ಪ್ರಿಯರು ಮಾತ್ರ ತಮ್ಮ ನೆಚ್ಚಿನ ಬ್ರಾಂಡ್‌ ಫೋನ್‌ಗಳನ್ನೇ ಆಯ್ಕೆ ಮಾಡುತ್ತಾರೆ.

5G

ಹೌದು, ಭಾರತದಲ್ಲಿ 5G ಲಭ್ಯವಾಗುವ ಕಾಲ ಹತ್ತಿರದಲ್ಲೇ ಇರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ 5G ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇನ್ನು ಮಾರುಕಟ್ಟೆಯಲ್ಲಿ ಹಲವು ಕಂಪೆನಿಗಳ 5G ಸ್ಮಾರ್ಟ್‌ಫೋನ್‌ಗಳಿದ್ದು, ಕೈಗೆಟಕುವ ಬೆಲೆಯಲ್ಲೂ ಸಹ ಲಭ್ಯವಾಗಲಿವೆ. ಹಾಗಾದ್ರೆ ಮಾರುಕಟ್ಟೆಯಲ್ಲಿ 30,000 ರೂ, ಒಳಗೆ ಲಭ್ಯವಾಗುವ ಐದು ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ ನಾರ್ಜೋ 30 ಪ್ರೊ 5G

ರಿಯಲ್‌ಮಿ ನಾರ್ಜೋ 30 ಪ್ರೊ 5G

ರಿಯಲ್‌ಮಿ ನಾರ್ಜೋ 30 ಪ್ರೊ 5G ನೆಟ್‌ವರ್ಕ್‌ ಬೆಂಬಲಿಸುವ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದು ಭಾರತದಲ್ಲಿ ಕೈಗೆಟಕುವ ಬೆಲೆಯನ್ನು ಹೊಂದಿದ್ದು, ಕೇವಲ 16,999 ರೂಗಳಲ್ಲಿ ಖರೀದಿಸಬಹುದಾಗಿದೆ. ಅಷ್ಟೇ ಅಲ್ಲ ರಿಯಲ್‌ಮಿ ಅಪ್‌ಗ್ರೇಡ್ ಪ್ರೋಗ್ರಾಂನೊಂದಿಗೆ, ಕಂಪನಿಯ ಪ್ರಕಾರ ನೀವು ಈ 5G ಫೋನ್ ಅನ್ನು 13,999 ರೂಗಳಿಗೆ ಖರೀದಿಸಲು ಸಾಧ್ಯವಾಗುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 800 ಯು ಪ್ರೊಸೆಸರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ.

ಒನ್‌ಪ್ಲಸ್ ನಾರ್ಡ್ 5G

ಒನ್‌ಪ್ಲಸ್ ನಾರ್ಡ್ 5G

ಒನ್‌ಪ್ಲಸ್ ನಾರ್ಡ್ 5G ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G ಪ್ರೊಸೆಸರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಫಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆಸುಕೊಂಡಿದೆ. ಜೊತೆಗೆ 4,115mAh ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜರ್ ಅನ್ನು ಒಳಗೊಂಡಿದೆ. ಇದರ ಬೆಲೆ 27,999 ರೂ.ಆಗಿದೆ.

ಶಿಯೋಮಿ ಮಿ 10i

ಶಿಯೋಮಿ ಮಿ 10i

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 750G ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ತಾಮೆರಾ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಇದು 4,820mAh ಬ್ಯಾಟರಿಯನ್ನು ಹೊಂದಿದ್ದು 33W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ನೀಡುತ್ತದೆ. ಇದರ ಬೆಲೆ 20,999 ರೂ.ಆಗಿದೆ.

ರಿಯಲ್‌ಮಿ X7 ಪ್ರೊ 5G

ರಿಯಲ್‌ಮಿ X7 ಪ್ರೊ 5G

ರಿಯಲ್‌ಮಿ X7 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಖರೀದಿಸಬಹುದಾದ ಅತ್ಯುತ್ತಮ ಮಧ್ಯಮ ಶ್ರೇಣಿಯ 5G ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.55-ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1000+ ಪ್ರೊಸೆಸರ್ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದರ ಬೆಲೆ ಭಾರತದಲ್ಲಿ 29,999 ರೂ.ಆಗಿದೆ.

ವಿವೋ V20 ಪ್ರೊ 5G

ವಿವೋ V20 ಪ್ರೊ 5G

ವಿವೋ V20 ಪ್ರೊ ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G ಪ್ರೊಸೆಸರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಜೊತೆಗೆ 4,000mAh ಬ್ಯಾಟರಿ ಹೊಂದಿದ್ದು, 33W ವೇಗದ ಚಾರ್ಜರ್ ಅನ್ನು ಬೆಂಬಲಿಸಲಿದೆ.ಇದರ ಬೆಲೆ ಭಾರತದಲ್ಲಿ 29,999 ರೂ ಆಗಿದೆ.

Best Mobiles in India

English summary
Top 5G smartphones available in India under Rs 30,000.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+