20,000ರೂ. ಒಳಗೆ ಲಭ್ಯವಾಗುವ ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳು!

|

ಭಾರತದ ಮೊಬೈಲ್‌ ಮಾರುಕಟ್ಟೆ ಸಾಕಷ್ಟು ವಿಶಾಲವಾಗಿದೆ. ಹಲವು ಪ್ರತಿಷ್ಠಿತ ಸ್ಮಾರ್ಟ್‌ಫೋನ್‌ ಕಂಪೆನಿಗಳು ತಮ್ಮ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ. ಸದ್ಯ ಇದೀಗ ಭಾರತದಲ್ಲಿ ಶೀಘ್ರದಲ್ಲೇ 5G ನೆಟ್‌ವರ್ಕ್‌ ಪ್ರಾರಂಭವಾಗುವುದರಿಂದ 5G ಸ್ಮಾರ್ಟ್‌ಫೋನ್‌ಗಳ ಎಂಟ್ರಿ ಜೋರಾಗಿದೆ. ಸ್ಮಾರ್ಟ್‌ಫೋನ್‌ ಪ್ರಿಯರು ಕೂಡ 5G ಸ್ಮಾರ್ಟ್‌ಫೋನ್‌ಗಳ ಖರೀದಿಗೆ ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಇನ್ನು 5G ಸ್ಮಾರ್ಟ್‌ಫೋನ್‌ಗಳಲ್ಲಿ 20,000ರೂ. ಒಳಗಿನ ಫೋನ್‌ಗಳು ಹೆಚ್ಚು ಗಮನಸೆಳೆದಿವೆ.

ಭಾರತದಲ್ಲಿ

ಹೌದು, ಭಾರತದಲ್ಲಿ 5G ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಸೌಂಡ್‌ ಮಾಡುತ್ತಿವೆ. ಇನ್ನು 5G ಸ್ಮಾರ್ಟ್‌ಫೋನ್‌ಗಳು ಕೇವಲ ಹೈ ಎಂಡ್‌ ಪ್ರೈಟ್‌ಟ್ಯಾಗ್‌ಗೆ ಸೀಮಿತವಾಗಿಲ್ಲ. ನೀವು ಮಧ್ಯಮ ಶ್ರೇಣಿಯ ಪ್ರೈಸ್‌ಟ್ಯಾಗ್‌ನಲ್ಲಿ ಕೂಡ ಖರೀದಿಸಬಹುದಾಗಿದೆ. ಆದರೆ ಬಜೆಟ್ 5G ಸ್ಮಾರ್ಟ್‌ಫೋನ್‌ಗಳು ಸೀಮಿತ ಬ್ಯಾಂಡ್ ಬೆಂಬಲದೊಂದಿಗೆ ಬರುತ್ತವೆ. ಈ ಶ್ರೇಣಿಯಲ್ಲಿರುವ ಹಲವಾರು ಫೋನ್‌ಗಳು ಬಹು ಅಪ್ಲಿಕೇಶನ್‌ಗಳನ್ನು ಬಳಸುವುದಕ್ಕೆ ಕೂಡ ಸೂಕ್ತವಾಗಿವೆ. ಹಾಗಾದ್ರೆ ನೀವು ಖರೀದಿಸಬಹುದಾದ 20,000ರೂ. ಒಳಗಿನ ಫೋನ್‌ಗಳು ಯಾವುವು ಅನ್ನೊದನ್ನ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್‌-ಸಿ ಮೂಲಕ 33W ಸೂಪರ್VOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಭಾರತದಲ್ಲಿ ಒಟ್ಟು ಐದು 5G ಬ್ಯಾಂಡ್‌ಗಳೊಂದಿಗೆ ಬರುತ್ತದೆ. ಇದರ ಬೆಲೆ 19,999ರೂ. ಆಗಿದೆ.

ಮೊಟೊ G62 5G

ಮೊಟೊ G62 5G

ಮೊಟೊ G62 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ವೇಗದ ಚಾರ್ಜಿಂಗ್ ಟೆಕ್ನಾಲಜಿಯನ್ನು ಒಳಗೊಂಡಿದೆ. ಇದು 12 5G ಬ್ಯಾಂಡ್‌ಗಳ ಬೆಂಬಲವನ್ನು ಹೊಂದಿದೆ. ಪ್ರಸ್ತುತ ಭಾರತದಲ್ಲಿ ಈ ಸ್ಮಾರ್ಟ್‌ಫೋನಿನ ಬೆಲೆ 17,999ರೂ. ಆಗಿದೆ.

ಐಕ್ಯೂ Z6 5G

ಐಕ್ಯೂ Z6 5G

ಐಕ್ಯೂ Z6 5G ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ISOCELL JN1 ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಆದರೆ ಇದು 5Gಯ ಕೇವಲ ಎರಡು ಬ್ಯಾಂಡ್‌ಗಳ ಬೆಂಬಲವನ್ನು ಪಡೆಯುತ್ತದೆ. ಈ ಸ್ಮಾರ್ಟ್‌ಫೋನಿನ ಬೆಲೆ 16,999ರೂ. ಆಗಿದೆ.

ರೆಡ್ಮಿ ನೋಟ್‌ 11T 5G

ರೆಡ್ಮಿ ನೋಟ್‌ 11T 5G

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ 6.6-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ 810 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ಪ್ರೊ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ 15,999ರೂ. ಬೆಲೆಯನ್ನು ಹೊಂದಿದೆ.

ರಿಯಲ್‌ಮಿ 9 5G

ರಿಯಲ್‌ಮಿ 9 5G

ರಿಯಲ್‌ಮಿ 9 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಡೈಮೆನ್ಸಿಟಿ 810 5G ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್‌ನಲ್ಲಿ 18W ಕ್ವಿಕ್ ಚಾರ್ಜ್ ಬೆಂಬಲಿಸಲಿದೆ. ಈ ಫೋನ್‌ ಒಂಬತ್ತು ಬ್ಯಾಂಡ್‌ಗಳ ಬೆಂಬಲವನ್ನು ಸಹ ಪಡೆಯುತ್ತದೆ. ಭಾರತದಲ್ಲಿ ಈ ಸ್ಮಾರ್ಟ್‌ಫೋನಿನ ಬೆಲೆ 15,999ರೂ. ಆಗಿದೆ.

Best Mobiles in India

Read more about:
English summary
here are five 5G phones you can check out in India in August 2022.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X