Home
ಸುದ್ದಿಜಾಲ

ನವೆಂಬರ್‌ ತಿಂಗಳಿನಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ!

ಸ್ಮಾರ್ಟ್‌ಫೋನ್‌ ಇಲ್ಲದೆ ಮನೆಯಿಂದ ಹೊರಬರುವುದು ಕೂಡ ಕಷ್ಟ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಅಷ್ಟರ ಮಟ್ಟಿಗೆ ಇಂದು ಮಾರುಕಟ್ಟೆಯನ್ನು ಸ್ಮಾರ್ಟ್‌ಫೋನ್‌ಗಳು ರೂಲ್‌ ಮಾಡುತ್ತಿವೆ. ಇದೇ ಕಾರಣಕ್ಕೆ ಹಲವು ಜನಪ್ರಿಯ ಬ್ರ್ಯಾಂಡ್‌ಗಳು ತಮ್ಮ ವಿಭಿನ್ನ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ತಮ್ಮದೇ ಆದ ಗ್ರಾಹಕರ ವರ್ಗವನ್ನು ಸೃಷ್ಟಿಸಿಕೊಂಡಿವೆ.

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆ ದಿನದಿಂದ ದಿನಕ್ಕೆ ವಿಶಾಲವಾಗುತ್ತಾ ಸಾಗಿದೆ. ಪ್ರತಿನಿತ್ಯವೂ ಮಾರುಕಟ್ಟೆಗೆ ಎಂಟ್ರಿ ನೀಡುತ್ತಿರುವ ಹೊಸ ಸ್ಮಾರ್ಟ್‌ಫೋನ್‌ಗಳು ಸಂಚಲನವನ್ನೇ ಸೃಷ್ಟಿಸುತ್ತಿವೆ. ಎಂದಿನಂತೆ ನವೆಂಬರ್‌ ತಿಂಗಳಿನಲ್ಲಿಯೂ ಕೂಡ ಹಲವು ಸ್ಮಾರ್ಟ್‌ಫೋನ್‌ ಧೂಳೆಬ್ಬಿಸುತ್ತಿವೆ. ಸ್ಮಾರ್ಟ್‌ಫೋನ್‌ ಖರೀದಿಸುವ ಗ್ರಾಹಕರಿಗೆ ಹೊಸತನದ ಆಯ್ಕೆಗಳನ್ನು ನೀಡುತ್ತಿವೆ. ಹಾಗಾದ್ರೆ ನವೆಂಬರ್‌ ತಿಂಗಳಿನಲ್ಲಿ ನೀವು 25,000ರೂ ಕ್ಕಿಂತ ಕಡಿಮೆ ಬೆಲೆಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನವೆಂಬರ್‌ ತಿಂಗಳಿನಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಫೋನ್‌ಗಳ ವಿವರ ಇಲ್ಲಿದೆ!

ಮೊಟೊರೊಲಾ ಎಡ್ಜ್‌ 40 ನಿಯೋ
ನವೆಂಬರ್‌ ತಿಂಗಳಿನಲ್ಲಿ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಆಕರ್ಷಿಸುತ್ತಿರುವ ಫೋನ್‌ಗಳಲ್ಲಿ ಮೊಟೊರೊಲಾ ಎಡ್ಜ್‌ 40 ನಿಯೋ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್‌ ಸೆನ್ಸಾರ್‌ , ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಫ್ಲಿಪ್‌ಕಾರ್ಟ್‌ನಲ್ಲಿ 22,999ರೂ ಬೆಲೆಯನ್ನು ಪಡೆದುಕೊಂಡಿದೆ.

ನವೆಂಬರ್‌ ತಿಂಗಳಿನಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಫೋನ್‌ಗಳ ವಿವರ ಇಲ್ಲಿದೆ!

ಐಕ್ಯೂ Z7 ಪ್ರೊ
ಭಾರತದಲ್ಲಿ 25,000ರೂ ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿರುವ ಫೋನ್‌ಗಳಲ್ಲಿ ಐಕ್ಯೂ Z7 ಪ್ರೊ ಸ್ಮಾರ್ಟ್‌ಫೋನ್‌ ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.78 ಇಂಚಿನ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 7200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಜೊತೆಗೆ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಲಾವ ಅಗ್ನಿ 2 5G
25,000ರೂ ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಬೆಸ್ಟ್‌ ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಇನ್ನು ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ 1.0 ಕ್ಯಾಮೆರಾ ಸೆನ್ಸಾರ್‌ ಪಡೆದುಕೊಂಡಿದೆ. 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 66W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ಅನ್ನು ಪಡೆದಿದೆ.

ನವೆಂಬರ್‌ ತಿಂಗಳಿನಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಫೋನ್‌ಗಳ ವಿವರ ಇಲ್ಲಿದೆ!

ಪೊಕೊ X5 ಪ್ರೊ 5G
ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ MIUI 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ISOCELL HM2 ಸೆನ್ಸಾರ್‌ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಮತ್ತು 5W ವೈರ್ಡ್ ರಿವರ್ಸ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Top Best Smartphones in India under Rs 25,000: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+