ಭಾರತದಲ್ಲಿ ಲಭ್ಯವಿರುವ 8GB RAM ಸಾಮರ್ಥ್ಯದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಪ್ರಭಾವವನ್ನು ಹೊಂದಿವೆ. ಪ್ರತಿಯೊಬ್ಬರ ಕೈನಲ್ಲಿಯೂ ಕೂಡ ಸ್ಮಾರ್ಟ್‌ಫೋನ್‌ಗಳು ರಿಂಗಣಿಸುವುದು ಸಾಮಾನ್ಯವಾಗಿದೆ. ಸ್ಮಾರ್ಟ್‌ಫೋನ್‌ ಇಲ್ಲದೆ ಯಾವುದೇ ಕೆಲಸವು ಆಗದೂ ಎನ್ನುವ ಮಟ್ಟಿಗೆ ಜನರ ಜೀವನ ಶೈಲಿ ಬದಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳು ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳ ವಿನ್ಯಾಸದಲ್ಲಿಯೂ ಕೂಡ ಅನೇಕ ಬದಲಾವಣೆಗಳನ್ನು ಮಾಡುತ್ತಾ ಬಂದಿವೆ.

ಸ್ಮಾರ್ಟ್‌ಫೋನ್‌ಗಳ

ಹೌದು, ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ಜಾಸ್ತಿಯಾದಂತೆ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತಿವೆ. ಬಳಕೆದಾರರ ಆಯ್ಕೆಗೆ ತಕ್ಕಂತೆ ಸ್ಮಾರ್ಟ್‌ಫೋನ್‌ಗಳಲ್ಲಿ RAMಗಳ ಆಯ್ಕೆಯನ್ನು ನೀಡಲಾಗ್ತಿದೆ. ಇವುಗಳಲ್ಲಿ 8GB RAM ಒಳಗೊಂಡ ಸ್ಮಾರ್ಟ್‌ಫೋನ್‌ಗಳು ಕೂಡ ತಮ್ಮದೇ ಆದ ಜನಪ್ರಿಯತೆ ಪಡೆದುಕೊಂಡಿವೆ. ಇಂದಿನ ಸ್ಮಾರ್ಟ್‌ಫೋನ್‌ಗಳು 12GB ಮತ್ತು 16GB ವರೆಗಿನ RAM ಅನ್ನು ನೀಡುತ್ತಿವೆ. ಇವುಗಳ ನಡುವೆಯೂ ಕೂಡ 8GB RAM ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಗಮನ ಸೆಳೆದಿವೆ.

ಸ್ಮಾರ್ಟ್‌ಫೋನ್‌ಗಳು

8GB RAM ಒಳಗೊಂಡ ಸ್ಮಾರ್ಟ್‌ಫೋನ್‌ಗಳು ಇಂದಿಗೂ ಕೂಡ ಗ್ರಾಹಕರನ್ನು ಸೆಳೆದಿವೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು 8GB RAM ಆಯ್ಕೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ. ಇನ್ನು 8GB RAM ಹೊಂದಿರುವ ಸ್ಮಾರ್ಟ್‌ಫೋನ್‌ಗಳು ನಿಮಗೆ ಮಲ್ಟಿ ಫಂಕ್ಷನ್‌ಗಾಗಿ ಸಾಕಷ್ಟು ಸಂಪನ್ಮೂಲಗಳನ್ನು ಒದಗಿಸುತ್ತವೆ. ಜೊತೆಗೆ HD ಚಲನಚಿತ್ರವನ್ನು ವೀಕ್ಷಿಸುವುದಕ್ಕಡ ಅವಕಾಶ ನೀಡುತ್ತವೆ. ಅಲ್ಲದೆ ಸ್ಮಾರ್ಟ್‌ಫೋನ್ ಸರಾಗವಾಗಿ ಕಾರ್ಯನಿರ್ವಹಿಸುವಂತೆ ಮಾಡಲಿದೆ. ಹಾಗಾದ್ರೆ ಭಾರತದಲ್ಲಿ ಪ್ರಸ್ತುತ ಲಭ್ಯವಿರುವ 8GB RAM ಸಾಮರ್ಥ್ಯದ ಅತ್ಯುತ್ತಮ ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ GT ನಿಯೋ 2

ರಿಯಲ್‌ಮಿ GT ನಿಯೋ 2

ಕಳೆದ ವರ್ಷ ಲಾಂಚ್‌ ಆದ ರಿಯಲ್‌ಮಿ GT ನಿಯೋ 2 ಸ್ಮಾರ್ಟ್‌ಫೋನ್‌ ಕೂಡ 8GB RAM ಆಯ್ಕೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ 6.62 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, 65W ಸೂಪರ್ ಡಾರ್ಟ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 32,990ರೂ.ಗಳಿಗೆ ಲಭ್ಯವಾಗಲಿದೆ.

ವಿವೋ X80

ವಿವೋ X80

8GB RAM ಆಯ್ಕೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಸಾಲಿನಲ್ಲಿ ವಿವೋ X80 ಸ್ಮಾರ್ಟ್‌ಫೋನ್‌ ಕೂಡ ಸೇರಿದೆ. ಈ ಸ್ಮಾರ್ಟ್‌ಫೋನ್‌ 6.78-ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇನ್ನು ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 54,999ರೂ.ಬೆಲೆಯಲ್ಲಿ ಲಭ್ಯವಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ 8GB RAM ಆಯ್ಕೆಯಲ್ಲಿ ನೀವು ಖರೀದಿಸಬಹುದಾದ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 3,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವಾಯರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವಾಯರ್‌ಲೆಸ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ನ 8GB RAM ಮತ್ತು 256GB ವೇರಿಯಂಟ್ ಆಯ್ಕೆಯು ಅಮೆಜಾನ್‌ನಲ್ಲಿ 82,489ರೂ.ಬೆಲೆಗೆ ಲಭ್ಯವಾಗಲಿದೆ.

ಪೊಕೊ F3 GT

ಪೊಕೊ F3 GT

ಪೊಕೊ F3 GT ಸ್ಮಾರ್ಟ್‌ಫೋನ್‌ 6.67-ಇಂಚಿನ ಟರ್ಬೊ ಅಮೋಲೆಡ್ 10-ಬಿಟ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,065mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 67W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 28,999ರೂ.ಬೆಲೆಯಲ್ಲಿ ದೊರೆಯಲಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಜೊತೆಗೆ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 21,999ರೂ.ಬೆಲೆಗೆ ಲಭ್ಯವಾಗಲಿದೆ.

ಒನ್‌ಪ್ಲಸ್‌ 10ಪ್ರೊ

ಒನ್‌ಪ್ಲಸ್‌ 10ಪ್ರೊ

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ QHD+ ಲಿಕ್ವಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್‌. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 80W ಸೂಪರ್‌ವೂಕ್‌ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್‌ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 66,999ರೂ.ಬೆಲೆಯಲ್ಲಿ ದೊರೆಯಲಿದೆ.

Best Mobiles in India

English summary
Top best smartphones with 8GB RAM in India from Samsung, Xiaomi, Realme, Oppo, and Vivo

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X