ಫ್ಲಿಪ್‌ಕಾರ್ಟ್‌ ಬ್ಲ್ಯಾಕ್‌ ಫ್ರೈಡೇ ಸೇಲ್‌: ಫೋನ್‌ ಖರೀದಿಗೆ ಇದುವೇ ಸಕಾಲ!

|

ಇ-ಕಾಮರ್ಸ್‌ ತಾಣಗಳು ಹಬ್ಬ ಹರಿದಿನಗಳಲ್ಲಿ ಆನ್‌ಲೈನ್‌ ಗ್ರಾಹಕರಿಗೆ ಆಫರ್‌ಗಳ ಸುರಿಮಳೆಯನ್ನೇ ಸೃಷ್ಟಿಸುತ್ತವೆ. ಭರ್ಜರಿ ಡಿಸ್ಕೌಂಟ್‌ಗಳನ್ನ ನೀಡುವ ಮೂಲಕ ಗ್ರಾಹಕರನ್ನ ತಮ್ಮತ್ತ ಆಕರ್ಷಿಸುತ್ತವೇ. ಸದ್ಯ ಇದೀಗ ಫ್ಲಿಪ್‌ಕಾರ್ಟ್‌ ಬ್ಲ್ಯಾಕ್ ಫ್ರೈಡೇ ಸೇಲ್‌ನೊಂದಿಗೆ ಮತ್ತೆ ರಿಯಾಯಿತಿ ಸೇಲ್‌ ಶುರುಮಾಡಿದೆ. ಫ್ಲಿಪ್‌ಕಾರ್ಟ್ ಬ್ಲ್ಯಾಕ್ ಫ್ರೈಡೇ ಸೇಲ್‌ ಈಗಾಗಲೇ ಲೈವ್ ಆಗಿದ್ದು, ನವೆಂಬರ್ 30 ರವರೆಗೆ ಮುಂದುವರಿಯುತ್ತದೆ. ಇನ್ನು ಫ್ಲಿಪ್‌ಕಾರ್ಟ್‌ ಈ ಸೇಲ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನೊಂದಿಗೆ ಇಎಂಐ ವಹಿವಾಟಿನ ಮೇಲೆ ಐದು ಪ್ರತಿಶತದಷ್ಟು ಕ್ಯಾಶ್‌ಬ್ಯಾಕ್ ನೀಡುತ್ತಿದೆ.

ಫ್ಲಿಪ್‌ಕಾರ್ಟ್‌ ಬ್ಲ್ಯಾಕ್‌ ಫ್ರೈಡೇ ಸೇಲ್‌

ಹೌದು, ಫ್ಲಿಪ್‌ಕಾರ್ಟ್‌ ಬ್ಲ್ಯಾಕ್‌ ಫ್ರೈಡೇ ಸೇಲ್‌ ಪ್ರಯುಕ್ತ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ ಘೋಷಿಸಿದೆ. ಇನ್ನು ಈ ಸೇಲ್‌ನಲ್ಲಿ ರಿಯಲ್‌ಮಿ ನಾರ್ಜೊ 20 ಪ್ರೊ, ಐಫೋನ್‌ XR, ಸ್ಯಾಮ್‌ಸಂಗ್‌ ಗ್ಯಾಲಕ್ಸಿ ನೋಟ್‌ 10+, ಸೇರಿದಂತೆ ಇತ್ತೀಚಿಗೆ ಬಿಡುಗಡೆಯಾದ ಹಲವು ಸ್ಮಾರ್ಟ್‌ಫೋನ್‌ಗಳು ಡಿಸ್ಕೌಂಟ್‌ ದರದಲ್ಲಿ ಲಭ್ಯವಾಗಲಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಬ್ಲ್ಯಾಕ್‌ ಫ್ರೈಡೇ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರಿಯಲ್‌ಮಿ ನಾರ್ಜೊ 20 ಪ್ರೊ

ರಿಯಲ್‌ಮಿ ನಾರ್ಜೊ 20 ಪ್ರೊ

ರಿಯಲ್‌ಮಿ ನಾರ್ಜೊ 20 ಪ್ರೊ ಸ್ಮಾರ್ಟ್‌ಫೋನ್‌ ಬ್ಲ್ಯಾಕ್‌ ಫ್ರೈಡೇ ಸೇಲ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಫೋನ್‌ಗಳಲ್ಲಿ ಒಂದಾಗಿದೆ. ಈ ಫೋನ್ 6.5-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಈ ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ 48 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 65W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ 13,999 ರೂಗಳಿಗೆ, ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಜೊತೆಗೆ 13,100 ರೂ.ವರೆಗೆ ಎಕ್ಸ್‌ಚೇಂಜ್ ಆಫರ್ ಸಹ ಇದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 10+

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 10+

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 10+ ಸ್ಮಾರ್ಟ್‌ಫೋನ್‌ 79,999 ರೂ ಮೂಲ ಬೆಲೆಯನ್ನು ಹೊಂದಿದ್ದು, ಫ್ಲಿಪ್‌ಕಾರ್ಟ್‌ ಬ್ಲ್ಯಾಕ್‌ ಫ್ರೈಡೇ ಸೇಲ್‌ನಲ್ಲಿ 54,999 ರೂಗಳಿಗೆ ಲಭ್ಯವಾಗಲಿದೆ. ಜೊತೆಗೆ ನಿಮ್ಮ ಫೋನ್ ವಿನಿಮಯದ ಮೇಲೆ ಗ್ರಾಹಕರಿಗೆ 14,300 ರೂ. ಗಳವರೆಗೆ ರಿಯಾಯಿತಿಯನ್ನು ನೀಡಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 20 +

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 20 +

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 20 + ಸದ್ಯ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ 49,999 ರೂಗಳಿಗೆ,ಲಭ್ಯವಾಗಲಿದೆ. ಜೊತೆಗೆ ಹಳೆಯ ಫೋನ್ ವಿನಿಮಯದ ಮೇಲೆ ಫ್ಲಿಪ್‌ಕಾರ್ಟ್ 14,300 ರೂ.ಗಳವರೆಗೆ ರಿಯಾಯಿತಿಯನ್ನು ನೀಡಲಿದೆ.

ಶಿಯೋಮಿ ಸ್ಮಾರ್ಟ್‌ಫೋನ್‌

ಶಿಯೋಮಿ ಸ್ಮಾರ್ಟ್‌ಫೋನ್‌

ಫ್ಲಿಪ್‌ಕಾರ್ಟ್‌ ಬ್ಲ್ಯಾಕ್‌ ಫ್ರೈಡೇ ಸೇಲ್‌ನಲ್ಲಿ ರೆಡ್ಮಿ 8A ಡ್ಯುಯಲ್ ಸ್ಮಾರ್ಟ್‌ಫೋನ್‌ ಅನ್ನು ರಿಯಾಯಿತಿ ದರದಲ್ಲಿ 6,999 ರೂ. ಗಳಿಗೆ ಸೇಲ್‌ ಮಾಡುತ್ತಿದೆ. ಇದರ ಮೂಲ ಬೆಲೆ 9,999 ರೂ ಆಗಿದೆ. ಇನ್ನು ಶಿಯೋಮಿ ರೆಡ್‌ಮಿ ನೋಟ್ 9 ಪ್ರೊ 4GB RAM ಮತ್ತು 128GB ಸ್ಟೋರೇಜ್ ಮಾದರಿ 14,999 ರೂಗಳಲ್ಲಿ ಲಭ್ಯವಾಗಲಿದೆ. ಜೊತೆಗೆ ರೆಡ್‌ಮಿ 9I ಸ್ಮಾರ್ಟ್‌ಫೋನ್‌ 8,999 ರೂ ಗಳಿಗೆ ಲಭ್ಯವಾಗಲಿದ್ದು, ಇದರ ಮೂಲ ಬೆಲೆ 10,999 ರೂ. ಆಗಿದೆ. ಅಲ್ಲದೆ ರೆಡ್‌ಮಿ ನೋಟ್ 8 ಕೂಡ 8,999 ರೂಗಳಲ್ಲಿ ಲಭ್ಯವಾಗಲಿದ್ದು, ಇದರ ಮೂಲ ಬೆಲೆ 12,999 ರೂ. ಆಗಿದೆ.

ರಿಯಲ್‌ಮಿ X3

ರಿಯಲ್‌ಮಿ X3

ರಿಯಲ್‌ಮಿ X3 ಸ್ಮಾರ್ಟ್‌ಫೋನ್‌ ಈಗ ಬ್ಲ್ಯಾಕ್ ಫ್ರೈಡೇ ಸೇಲ್‌ನಲ್ಲಿ 3,000 ರೂ.ವರೆಗೆ ರಿಯಾಯಿತಿಯನ್ನು ಪಡೆದುಕೊಂಡಿವೆ. ಇದರಲ್ಲಿ ರಿಯಲ್‌ಮಿ X3 6GB RAM ಮತ್ತು 128 GB ಸ್ಟೋರೇಜ್ ಸಾಮರ್ಥ್ಯದ ಸ್ಮಾರ್ಟ್ಫೋನ್‌ ಮೂಲಬೆಲೆ 24,999 ರೂ, ಆಗಿದ್ದು, ಇದು 21,999 ರೂ.ಗಳಿಗೆ ಖರೀದಿಸಬಹುದಾಗಿದೆ. ಇನ್ನು ಇದರ 8GB RAM ಮತ್ತು 128GB ಸ್ಟೋರೇಜ್ ಮಾದರಿಯನ್ನು 22,999 ರೂಗಳಿಗೆ ಖರೀದಿಸಬಹುದಾಗಿದೆ. ಇದರ ಮೂಲ ಬೆಲೆ 25,999 ರೂ. ಆಗಿದೆ.

ರಿಯಲ್‌ಮಿ X3 ಸೂಪರ್ ಜೂಮ್

ರಿಯಲ್‌ಮಿ X3 ಸೂಪರ್ ಜೂಮ್

ಇನ್ನು ರಿಯಲ್‌ಮಿ ‍X3 ಸೂಪರ್‌ಜೂಮ್ ಸ್ಮಾರ್ಟ್‌ಫೋನ್‌ ಕ್ರಮವಾಗಿ 8GB RAM - 128 GB ಸ್ಟೋರೇಜ್ ಸಾಮರ್ಥ್ಯಕ್ಕೆ 27,999 ರೂ ಮೂಲಬೆಲೆಯಿಂದ 23,999 ರೂ,ಗೆ ಖರೀದಿಸಬಹುದಾಗಿದೆ. ಇನ್ನು 8GB RAM - 256GB ಸ್ಟೋರೇಜ್ ರೂಪಾಂತರದ ಫೋನ್‌ 25,999 ರೂ.ಗೆ ಲಭ್ಯವಾಗಲಿದೆ. ಇದರ ಮೂಲ ಬೆಲೆ 29,999 ರೂ ಆಗಿದೆ.

Most Read Articles
Best Mobiles in India

English summary
Flipkart Black Friday sale 2020 offers: The e-commerce giant is offering attractive deals, which could be difficult to ignore. Read on to know more.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X