ಭಾರತದಲ್ಲಿ 35,000ರೂ.ಒಳಗೆ ಲಭ್ಯವಾಗುವ ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳು!

|

ಭಾರತದಲ್ಲಿ ಇನ್ನು 5G ನೆಟ್‌ವರ್ಕ್‌ ಲಭ್ಯವಾಗಿಲ್ಲ, ಆದರೂ ಕೂಡ 5G ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಿವೆ. ಶೀಘ್ರದಲ್ಲೇ ಭಾರತದಲ್ಲಿ 5G ನೆಟ್‌ವರ್ಕ್‌ ಲಭ್ಯವಾಗಲಿದೆ ಎಂಬ ನಿರೀಕ್ಷೆಯಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಅನೇಕ 5G ಫೋನ್‌ಗಳನ್ನು ಪರಿಚಯಿಸಿವೆ. ಇನ್ನು ಈ 5G ಸ್ಮಾರ್ಟ್‌ಫೋನ್‌ ಅತ್ಯುತ್ತಮ ಕಾರ್ಯದಕ್ಷತೆಯ ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿವೆ.

ಸ್ಮಾರ್ಟ್‌ಫೋನ್‌

ಹೌದು, ಭಾರತದಲ್ಲಿ 5G ಸ್ಮಾರ್ಟ್‌ಫೋನ್‌ಗಳ ಎಂಟ್ರಿ ಜೋರಾಗಿದೆ. ಅತ್ಯುತ್ತಮ ಕ್ಯಾಮೆರಾ ಫೀಚರ್ಸ್‌, ವೇಗದ ಚಾರ್ಜಿಂಗ್‌ ಬೆಂಬಲಿಸುವ ಬ್ಯಾಟರಿ ಸಾಮರ್ಥ್ಯವನ್ನು ಈ ಫೋನ್‌ಗಳು ಒಳಗೊಂಡಿವೆ. ಇದೇ ಕಾರಣಕ್ಕೆ ಹೆಚ್ಚಿನ ಜನರು 5G ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವುದಕ್ಕೆ ಮುಂದಾಗುತ್ತಾರೆ. ಸದ್ಯ ಭಾರತದಲ್ಲಿ ವಿವಿಧ ಬೆಲೆಗಳಲ್ಲಿ 5G ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಹಾಗಾದ್ರೆ ಭಾರತದಲ್ಲಿ 35,000ರೂ.ಒಳಗೆ ಲಭ್ಯವಾಗುವ ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್‌ ನಾರ್ಡ್‌ 2

ಒನ್‌ಪ್ಲಸ್‌ ನಾರ್ಡ್‌ 2

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ 90Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸ್ಪೋರ್ಟಿ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ. ಇನ್ನು ಈ ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 65W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 29,999ರೂ.ಗಳ ಆರಂಭಿಕ ಬೆಲೆಯಲ್ಲಿ ಲಭ್ಯವಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20FE 5G ಸ್ಮಾರ್ಟ್‌ಫೋನ್‌ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಆಪರೇಟಿಂಗ್‌ ಸಿಸ್ಟಮ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 36,990ರೂ.ಗಳ ಆರಂಭಿಕ ಬೆಲೆಯಲ್ಲಿ ಲಭ್ಯವಾಗಲಿದೆ. ಆದರೆ ಇದರ ಮೇಲೆ ಎರಡು ಸಾವಿರ ರೂ.ಗಳ ಆಫರ್‌ ಕೂಡ ಲಭ್ಯವಿದೆ.

ಶಿಯೋಮಿ ಮಿ 11X

ಶಿಯೋಮಿ ಮಿ 11X

ಶಿಯೋಮಿ 11X ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿವೆ. ಜೊತೆಗೆ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 26,999ರೂ.ಗಳಿಗೆ ದೊರೆಯಲಿದೆ.

ಐಕ್ಯೂ 9 SE

ಐಕ್ಯೂ 9 SE

ಐಕ್ಯೂ 9 SE ಸ್ಮಾರ್ಟ್‌ಫೋನ್‌ 6.62 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 66W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ರಿಯಲ್‌ಮಿ GT 2

ರಿಯಲ್‌ಮಿ GT 2

ರಿಯಲ್‌ಮಿ GT 2 ಸ್ಮಾರ್ಟ್‌ಫೋನ್‌ 6.62 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಮತ್ತು 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ ರಿಯಲ್‌ಮಿ UI 3.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 34,999ರೂ.ಬೆಲೆಗೆ ಲಭ್ಯವಾಗಲಿದೆ.

Best Mobiles in India

English summary
Top five 5G smartphones to buy in India under Rs. 35,000

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X