ಸದ್ಯ ಈ ಫೋನ್‌ಗಳು ಮೊಬೈಲ್‌ ಮಾರುಕಟ್ಟೆಯಲ್ಲಿ ಟ್ರೆಂಡಿಂಗ್‌ನಲ್ಲಿವೆ!

|

ಸದ್ಯ ಸ್ಮಾರ್ಟ್‌ಫೋನ್‌ ಡಿವೈಸ್‌ ಪ್ರತಿಯೊಬ್ಬರಿಗೂ ಅವಶ್ಯಕ ಆಗಿದೆ. ಪ್ರತಿಷ್ಠಿತ ಮೊಬೈಲ್ ಕಂಪನಿಗಳು ಮಾರುಕಟ್ಟೆಯಲ್ಲಿ ಹೊಸ ಮಾದರಿಯ ಆಕರ್ಷಕ ಫೀಚರ್ಸ್‌ಗಳುಳ್ಳ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತ ಸಾಗಿವೆ. ಮುಖ್ಯವಾಗಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದ್ದರು, ಅವುಗಳು ಅಪ್‌ಡೇಟ್ ಫೀಚರ್ಸ್‌ಗಳನ್ನು ಒಳಗೊಂಡಿರುವುದು ವಿಶೇಷ. ಈ ವರ್ಷದ ಆರಂಭದಲ್ಲಿಯೇ ಸಿಕ್ಕಾಪಟ್ಟೆ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ಆಗಿವೆ. ಆದರೆ ಅವುಗಳಲ್ಲಿ ಕೆಲವೊಂದು ಮಾತ್ರ ಟ್ರೆಂಡಿಂಗ್ ಆಗುತ್ತವೆ. ಇನ್ನ ಕೆಲವು ಸದ್ದಿಲ್ಲದೇ ಹೋಗಿಬಿಡುತ್ತವೆ.

ಮಾರುಕಟ್ಟೆಗೆ

ಹೌದು, ಮಾರುಕಟ್ಟೆಗೆ ಬಿಡುಗಡೆ ಕಾಣುವ ಎಲ್ಲ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಆಕರ್ಷಿಸುವುದಿಲ್ಲ ಹಾಗೂ ಅವುಗಳು ಲೀಡಿಂಗ್‌ನಲ್ಲಿ ಸ್ಥಾನ ಪಡೆಯುವುದಿಲ್ಲ. ಕೆಲವು ಗ್ರಾಹಕರನ್ನು ಸೆಳೆಯುತ್ತವೆ ಮತ್ತೆ ಇನ್ನು ಕೆಲವು ಹೇಳ ಹೆಸರಿಲ್ಲದೇ ಮಾರುಕಟ್ಟೆಯಿಂದ ಮಾಯವಾಗುತ್ತವೆ. ಆದರೆ ಸದ್ಯ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್, ಶಿಯೋಮಿ, ಸೇರಿದಂತೆ ಬಜೆಟ್ ಬೆಲೆಯ ಫೋನ್‌ಗಳು ಟ್ರೆಂಡಿಂಗ್‌ನಲ್ಲಿವೆ. ಹಾಗಾದರೇ ಸದ್ಯ ಟ್ರೆಂಡಿಂಗ್‌ನಲ್ಲಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಮಿ 11 ಅಲ್ಟ್ರಾ

ಮಿ 11 ಅಲ್ಟ್ರಾ

ಮಿ 11 ಅಲ್ಟ್ರಾ ಫೋನ್ 3,200× 1,440 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.81 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ E4 AMOLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿದ್ದು, 120Hz ರೀಫ್ರೇಶ್‌ ರೇಟ್‌ ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದ್ದು, 8GB RAM + 256GB, 12GB RAM + 256GB ಆಯ್ಕೆಗಳನ್ನು ಒಳಗೊಂಡಿದೆ. ಮಿ 11 ಅಲ್ಟ್ರಾ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 48 ಎಂಪಿ ಸೆನ್ಸಾರ್‌ ಬಲದಲ್ಲಿ ಇದೆ. ಹಾಗೂ ತೃತೀಯ ಕ್ಯಾಮೆರಾವು ಅತ್ಯುತ್ತಮ ಸೆನ್ಸಾರ್ ಬಲ ಪಡೆದಿದೆ. ಹಾಗೆಯೇ ಮಿ 11 ಅಲ್ಟ್ರಾ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ಶಿಯೋಮಿ ರೆಡ್ಮಿ ನೋಟ್ 10 ಪ್ರೊ

ಶಿಯೋಮಿ ರೆಡ್ಮಿ ನೋಟ್ 10 ಪ್ರೊ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್‌ಲ್ಯಾಂಡ್ ಕಡಿಮೆ ಹೊಂದಿದೆ. ‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಕ್ವಾಂಟಮ್ 2

ಸ್ಯಾಮ್‌ಸಂಗ್ ಗ್ಯಾಲಕ್ಸಿ ಕ್ವಾಂಟಮ್ 2

ಗ್ಯಾಲಕ್ಸಿ ಕ್ವಾಂಟಮ್ 2 ಸ್ಮಾರ್ಟ್‌ಫೋನ್ 1,440x3,200 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಕ್ವಾಡ್ HD+ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855+ SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಸಪೋರ್ಟ್‌ ಅನ್ನು ಪಡೆದಿದೆ. ಟ್ರಿಪಲ್ ರಿಯಲ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 25W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಪೊಕೊ F3 ಫೋನ್

ಪೊಕೊ F3 ಫೋನ್

ಪೊಕೊ F3 ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದ್ದು, ಇನ್ಫಿನಿಟಿ-ಒ-ಡಿಸ್‌ಪ್ಲೇ ಆಗಿದೆ. ಇದು ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಇದೆ.

ರೆಡ್ಮಿ ನೋಟ್ 10

ರೆಡ್ಮಿ ನೋಟ್ 10

ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್‌ಪ್ಲೇ ಇದಾಗಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನುಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ.

Best Mobiles in India

English summary
The Xiaomi Mi 11 Ultra leads Redmi Note 10 Pro for the second time in a row, while the newly launched Galaxy Quantum 2 completes the podium.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X