ಸದ್ಯ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿರುವ 5 ಅತ್ಯುತ್ತಮ ಫೋನ್‌ಗಳು!

|

ಸದ್ಯ ಸ್ಮಾರ್ಟ್‌ಫೋನ್‌ ಇಲ್ಲದೇ ಮನುಷ್ಯನನ್ನು ಊಹಿಸುವುದು ಕಷ್ಟ ಸಾಧ್ಯ ಎಂದರೆ ತಪ್ಪಾಗಲಾರದು. ಏಕೆಂದರೇ ಸ್ಮಾರ್ಟ್‌ಫೋನ್ ಎಲ್ಲರ ದೈನಂದಿನ ಜೀವನದಲ್ಲಿ ಪ್ರಮುಖ ಡಿವೈಸ್ ಆಗಿ ಬಿಂಬಿತವಾಗಿದೆ. ಮೊಬೈಲ್‌ ಕಂಪನಿಗಳು ಆಕರ್ಷಕ ಫೀಚರ್ಸ್‌ಗಳೊಂದಿಗೆ ಹೊಸ ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡುತ್ತಲೇ ಇರುತ್ತವೆ. ಅದಾಗ್ಯೂ ಬಿಡುಗಡೆ ಆಗುವ ಪ್ರತಿಯೊಂದು ಫೋನ್ ಗ್ರಾಹಕರನ್ನು ಸೆಳೆಯುವಲ್ಲಿ ಸಫಲ್‌ವಾಗುವುದಿಲ್ಲ. ಅವುಗಳಲ್ಲಿ ಕೆಲವೊಂದು ಮಾತ್ರ ಲೀಡಿಂಗ್‌ನಲ್ಲಿ ಕಾಣಿಸಿಕೊಳ್ಳುತ್ತವೆ.

ಪಡೆದರೇ

ಹೌದು, ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗುವ ಎಲ್ಲ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುವುದಿಲ್ಲ. ಆದರೆ ಕೆಲವು ಫೋನ್‌ಗಳು ಲೀಡಿಂಗ್‌ನಲ್ಲಿ ಸ್ಥಾನ ಪಡೆದರೇ, ಮತ್ತೆ ಕೆಲವು ಫೋನ್‌ಗಳು ಮಾರುಕಟ್ಟೆಯಿಂದ ಬಹುಬೇಗನೇ ಮಾಯವಾಗುತ್ತವೆ. ಆದರೆ ಸದ್ಯ ಮಾರುಕಟ್ಟೆಯಲ್ಲಿ ರಿಯಲ್‌ಮಿ, ವಿವೋ, ಸ್ಯಾಮ್‌ಸಂಗ್, ಶಿಯೋಮಿ, ಸೇರಿದಂತೆ ಬಜೆಟ್ ಬೆಲೆಯ ಫೋನ್‌ಗಳು ಹೆಚ್ಚು ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಸದ್ಯ ಟ್ರೆಂಡಿಂಗ್‌ನಲ್ಲಿರುವ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ 9 ಪ್ರೊ ಪ್ಲಸ್‌ ಫೋನ್‌

ರಿಯಲ್‌ಮಿ 9 ಪ್ರೊ ಪ್ಲಸ್‌ ಫೋನ್‌

ರಿಯಲ್‌ಮಿ 9 ಪ್ರೊ ಪ್ಲಸ್‌ ಫೋನ್‌ ಜನಪ್ರಿಯ ಬ್ರ್ಯಾಂಡ್ ರಿಯಲ್‌ಮಿಯ ಆಕರ್ಷಕ ಸ್ಮಾರ್ಟ್‌ಫೋನ್ ಆಗಿದೆ. ಈ ಫೋನ್ 6.4 ಇಂಚಿನ ಸ್ಕ್ರೀನ್ ಒಳಗೊಂಡಿದೆ. ಜೊತೆಗೆ ಟಫ್ ಮೀಡಿಯಾ ಟೆಕ್ ಡೈಮೆನ್ಸಿಟಿ 920 MT6877T ಪ್ರೊಸೆಸರ್ ಪಡೆದಿದ್ದು, ಇದಕ್ಕೆ ಪೂರಕವಾಗಿ 6 GB RAM ಸಾಮರ್ಥ್ಯ ವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 4500 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದ್ದು, ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಬಲವನ್ನು ಒಳಗೊಂಡಿದೆ.

ವಿವೋ V23 5G ಸ್ಮಾರ್ಟ್‌ಫೋನ್

ವಿವೋ V23 5G ಸ್ಮಾರ್ಟ್‌ಫೋನ್

ಜನಪ್ರಿಯ ವಿವೋ ಸಂಸ್ಥೆಯ ವಿವೋ V23 5G ಸ್ಮಾರ್ಟ್‌ಫೋನ್ ಆಕರ್ಷಕ ಲುಕ್ ಪಡೆದಿದೆ. ಇದು 6.44 ಇಂಚಿನ ಸ್ಕ್ರೀನ್ ಅನ್ನು ಪಡೆದಿದೆ. ಅಲ್ಲದೇ ಗಟ್ಟಿಮುಟ್ಟಾದ ಮೀಡಿಯಾ ಟೆಕ್ ಡೈಮೆನ್ಸಿಟಿ 920 MT6877T ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಈ ಫೋನ್ 4,200 mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇನ್ನು ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ.

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB + 128GB, 8GB + 256GB ಮತ್ತು 12GB + 256GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್‌ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

Best Mobiles in India

English summary
Top Five Trending Smartphones in India (April 2022).

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X