Home
ಸುದ್ದಿಜಾಲ

ಭಾರತದಲ್ಲಿ ಈ ಫ್ಲ್ಯಾಗ್‌ಶಿಪ್‌ ಫೋನ್‌ಗಳು ಸಿಕ್ಕಾಪಟ್ಟೆ ಸೌಂಡ್‌ ಮಾಡುತ್ತಿವೆ! ಕಾರಣ ಇಲ್ಲಿದೆ!

ಇತ್ತೀಚಿನ ದಿನಗಳಲ್ಲಿ ಫ್ಲ್ಯಾಗ್‌ಶಿಪ್‌ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಸದ್ದು ಮಾಡುತ್ತಿವೆ. ಪ್ರೀಮಿಯಂ ಫೀಚರ್ಸ್‌ ಒಳಗೊಂಡ ಈ ಸ್ಮಾರ್ಟ್‌ಫೋನ್‌ಗಳು ದುಬಾರಿ ಬೆಲೆಯನ್ನು ಹೊಂದಿದ್ದರೂ ಸಹ ಗ್ರಾಹಕರ ಗಮನಸೆಳೆದಿವೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳಲ್ಲಿ ಅತ್ಯಾಕರ್ಷಕ ಕ್ಯಾಮೆರಾ ಹಾಗೂ ವಾಯರ್‌ಲೆಸ್‌ ಚಾರ್ಜಿಂಗ್‌ ಹೊಂದಿರುವುದು ಮೇನ್‌ ಹೈಲೈಟ್ ಆಗಿದೆ.

ಹೌದು, ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳು ಅತ್ಯುತ್ತಮ IP ರೇಟಿಂಗ್‌ಗಳಿಂದ ಗಮನಸೆಳೆದಿವೆ. ಇದೇ ಕಾರಣಕ್ಕೆ ಈ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ನವೆಂಬರ್‌ ತಿಂಗಳಿನಲ್ಲಿ ಹಲವು ಫ್ಲ್ಯಾಗ್‌ಶಿಪ್ ಫೋನ್‌ಗಳು ಸಂಚಲನ ಸೃಷ್ಟಿಸಿವೆ. ಹಾಗಾದ್ರೆ ನವೆಂಬರ್‌ ತಿಂಗಳಿನಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಫ್ಲ್ಯಾಗ್‌ಶಿಪ್‌ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಈ ಫ್ಲ್ಯಾಗ್‌ಶಿಪ್‌ ಫೋನ್‌ಗಳು ಸಿಕ್ಕಾಪಟ್ಟೆ ಸೌಂಡ್‌ ಮಾಡುತ್ತಿವೆ!

ಒನ್‌ಪ್ಲಸ್‌ ಓಪನ್
ಪ್ರಸ್ತುತ ಮೊಬೈಲ್‌ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಓಪನ್‌ ಸ್ಮಾರ್ಟ್‌ಫೋನ್‌ ಟ್ರೆಂಡಿಂಗ್‌ನಲ್ಲಿದೆ. ಈ ಸ್ಮಾರ್ಟ್‌ಫೋನ್‌ 7.82 ಇಂಚಿನ 2K ಫ್ಲೆಕ್ಸಿ-ಫ್ಲೂಯಿಡ್ LTPO 3.0 ಅಮೋಲೆಡ್‌ ಇನ್ನರ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 6.31 ಇಂಚಿನ ಔಟರ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ Hasselblad-ಬ್ರಾಂಡ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,800mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 67W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಐಫೋನ್‌ 15 ಪ್ರೊ ಮ್ಯಾಕ್ಸ್‌
ಐಫೋನ್‌ 15 ಪ್ರೊ ಮ್ಯಾಕ್ಸ್‌ 6.7 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು A17 ಪ್ರೊ ಚಿಪ್‌ಸೆಟ್ ಮೂಲಕ ಕಾರ್ಯನಿರ್ವಹಿಸಲಿದ್ದು, ನಿರೀಕ್ಷೆಗೂ ಮೀರಿದ ಕಾರ್ಯಕ್ಷಮತೆ ಲಭ್ಯವಿದೆ. ಐಫೋನ್ 15 ಪ್ರೊ ಮ್ಯಾಕ್ಸ್ 5x ಜೂಮ್ ಇರುವ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪೆರಿಸ್ಕೋಪ್ ಲೆನ್ಸ್ ಇದೆ. ಇವೆರಡೂ 12ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಭಾರತದಲ್ಲಿ ಈ ಫ್ಲ್ಯಾಗ್‌ಶಿಪ್‌ ಫೋನ್‌ಗಳು ಸಿಕ್ಕಾಪಟ್ಟೆ ಸೌಂಡ್‌ ಮಾಡುತ್ತಿವೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ನೀವು ಖರೀದಿಸಬಹುದಾದ ಅತ್ಯುತ್ತಮ ಫ್ಲ್ಯಾಗ್‌ಶಿಪ್‌ ಸ್ಮಾರ್ಟ್‌ಫೋನ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ 6.8 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ನ ಕಸ್ಟಮ್ ಆವೃತ್ತಿಯನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 One UI 5.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, 85 ಡಿಗ್ರಿ ಫೀಲ್ಡ್ ಆಫ್ ವ್ಯೂ ಅನ್ನು ನೀಡಲಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಭಾರತದಲ್ಲಿ ಈ ಫ್ಲ್ಯಾಗ್‌ಶಿಪ್‌ ಫೋನ್‌ಗಳು ಸಿಕ್ಕಾಪಟ್ಟೆ ಸೌಂಡ್‌ ಮಾಡುತ್ತಿವೆ!

ಒನ್‌ಪ್ಲಸ್‌ 11
ಒನ್‌ಪ್ಲಸ್‌ 11 ಸ್ಮಾರ್ಟ್‌ಫೋನ್‌ ನೀವು ಖರೀದಿಸಬಹುದಾದ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಕ್ವಾಡ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13-ಆಧಾರಿತ OxygenOS 13 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 16GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 100W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Top flagship smartphones to buy in India this November 2023: Specs Details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+