ಡ್ಯುಯೆಲ್‌ ಸಿಮ್‌ ಬೆಂಬಲಿಸುವ ಐದು ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಇದು ಸ್ಮಾರ್ಟ್‌ಫೋನ್‌ ಜಮಾನ, ಟೆಕ್‌ ವಲಯದಲ್ಲಿ ಸಾಕಷ್ಟು ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಈಗಾಗಲೇ ಹಲವು ಕಂಪನಿಗಳು ತಮ್ಮ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿವೆ. ಅಲ್ಲದೆ ಟೆಕ್‌ ವಲಯದಲ್ಲಿ ಪ್ರತಿ ದಿನವೂ ಆಪ್ಡೇಟ್‌ ಫೀಚರ್ಸ್‌ ಒಳಗೊಂಡ ಹೊಸ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಇವೆ. ವಿಶೆಷ ಕ್ಯಾಮೆರಾ ಫೀಚರ್ಸ್‌ಗಳು, ಭಿನ್ನ ಮಾದರಿಯ ಡಿಸ್‌ಪ್ಲೇ ವಿನ್ಯಾಶದ ಸ್ಮಾರ್ಟ್‌ಫೋನ್‌ ಗಳು ಕೂಡ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೂ ಗ್ರಾಹಕರು ತಮ್ಮ ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನ ಆಯ್ಕೆ ಮಾಡಿಕೊಳ್ಳುತ್ತಾರೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸಾಕಷ್ಟು ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗುತ್ತಲೇ ಇವೆ. ಒದಕ್ಕೊದು ವಿಶಿಷ್ಟ ವಿನ್ಯಾಸದ ಫೀಚರ್ಸ್‌ಗಳನ್ನ ಹೊಂದಿರುವುದರಿಂದ ಗ್ರಾಹಕರಿಗೆ ಯಾವ ಸ್ಮಾರ್ಟ್ಫೋನ್‌ ಖರೀದಿಸಿದರೆ ಉತ್ತಮ ಅನ್ನುವ ಗೊಂದಲ ಇದ್ದೇ ಇರುತ್ತೆ. ಕೆಲವರು ಸ್ಮಾರ್ಟ್‌ಫೋನ್‌ ಕ್ಯಾಮೆರಾ ಫಿಚರ್ಸ್‌ ಗಮನಿಸಿದರೆ, ಇನ್ನು ಕೆಲವರು ಬ್ಯಾಟರಿ ಸಾಮರ್ಥ್ಯ ಗಮನಿಸುತ್ತಾರೆ, ಇನ್ನು ಕೆಲವುರ ಸಿಮ್‌ ಸ್ಲಾಟ್‌ ಆಯ್ಕೆಗಳನ್ನ ಗಮನಿಸುತ್ತಾರೆ. ಹಾಗಾದ್ರೆ ನೀವು ಗುಣಮಟ್ಟದ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳನ್ನ ಖರಿದೀಸಬೇಕೆಂದು ಕೊಂಡಿದ್ದರೆ, ನೀವು ಖರೀದಿಸಬಹುದಾದ ಅತ್ಯುತ್ತಮ ಡ್ಯುಯಲ್ ಸಿಮ್ ಮೊಬೈಲ್ ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

Apple iPhone 11 Pro Max

Apple iPhone 11 Pro Max

ನೀವು ಖರೀದಿಸಬಹುದಾದ ಅತ್ಯುತ್ತಮ ಡ್ಯುಯೆಲ್‌ ಸಿಮ್‌ ಒಳಗೊಂಡ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ Apple iPhone 11 Pro Max ಕೂಡ ಒಂದಾಗಿದೆ. ಇದು ನ್ಯಾನೊ-ಸಿಮ್ ಟ್ರೇ ಮತ್ತು ಇ-ಸಿಮ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್‌ 6.5-ಇಂಚಿನ ಸೂಪರ್ ರೆಟಿನಾ ಎಕ್ಸ್‌ಡಿಆರ್ ಒಎಲ್ಇಡಿ ಡಿಸ್ಪ್ಲೇ ಹೊಂದಿದೆ. ಅಲ್ಲದೆ ಇದು A13 ಬಯೋನಿಕ್ ಚಿಪ್ ಪ್ರೊಸೆಸರ್ ಅನ್ನು ಒಳಗೊಂಡಿದೆ. ಜೊತೆಗೆ ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, 12MP + 12MP + 12MP ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದಲ್ಲದೆ ಇದು 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

Samsung Galaxy S20 Ultra

Samsung Galaxy S20 Ultra

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 ಅಲ್ಟ್ರಾ ಸ್ಮಾರ್ಟ್‌ಫೋನ್‌ ಡ್ಯುಯಲ್ ನ್ಯಾನೊ-ಸಿಮ್ ಟ್ರೇನೊಂದಿಗೆ ಬರುವ ಫ್ಲ್ಯಾಗ್‌ಶಿಪ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಆಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್ 990 ಪ್ರೊಸೆಸರ್ ಒಳಗೊಂಡಿದೆ. ಹಾಗೇಯೇ 12GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ, ಇದನ್ನು 1 ಟಿಬಿ ವರೆಗೆ ವಿಸ್ತರಿಸಬಹುದಾಗಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ವೈಡ್-ಆಂಗಲ್ ಕ್ಯಾಮೆರಾ, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್ ಸಾಮರ್ಥ್ಯದ ಟೆಲಿಫೋಟೋ ಕ್ಯಾಮೆರಾ, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು ವಿಜಿಎ ​​ಡೆಪ್ತ್ ವಿಷನ್ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 40 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

Apple iPhone 11

Apple iPhone 11

ಆಪಲ್ ಐಫೋನ್ 11 ಅದ್ಭುತ ಬ್ಯಾಟರಿ ಅವಧಿಯನ್ನು ಹೊಂದಿರುವ ಅತ್ಯುತ್ತಮ ಡ್ಯುಯಲ್ ಸಿಮ್ ಮೊಬೈಲ್ ಫೋನ್‌ಗಳಲ್ಲಿ ಒಂದಾಗಿದೆ. ಇದು ಎ 13 ಬಯೋನಿಕ್ ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನು ಈ ಐಫೋನ್‌ 256 GB ಸಾಮರ್ಥ್ಯದ ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಇದು 6.1-ಇಂಚಿನ ಲಿಕ್ವಿಡ್ ರೆಟಿನಾ ಐಪಿಎಸ್ ಎಲ್ಸಿಡಿ ಡಿಸ್ಪ್ಲೇಯನ್ನು ಸಹ ಹೊಂದಿದೆ.

Samsung S10 Plus

Samsung S10 Plus

ಸ್ಯಾಮ್‌ಸಂಗ್ ಎಸ್ 10 ಪ್ಲಸ್ ಸ್ಮಾರ್ಟ್‌ಫೋನ್‌ 6.4-ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು ಎಕ್ಸಿನೋಸ್ 9820 ಆಕ್ಟಾ-ಕೋರ್ ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್‌ ಕ್ಯಾಮೆರಾ, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ವೈಡ್‌ ಕ್ಯಾಮೆರಾ ಸೆನ್ಸಾರ್‌, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಟೆಲಿಪೋಟೋ ಕ್ಯಾಮೆರಾ ವನ್ನು ಹೊಂದಿದೆ. ಅಲ್ಲದೆ ಇದು 10ಮೆಗಾಪಿಕ್ಸೆಲ್‌ ಮತ್ತು 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಡ್ಯುಯಲ್-ಸೆಲ್ಫಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

OnePlus 8 5G

OnePlus 8 5G

ಇನ್ನು ಒನ್‌ಪ್ಲಸ್ 8 5G ಸ್ಮಾರ್ಟ್‌ಫೋನ್‌ ಕೂಡ ಡ್ಯುಯೆಲ್‌ ಸಿಮ್‌ ಒಳಗೊಂಡ ಸ್ಮಾರ್ಟ್‌ಫೋನ್‌ ಆಗಿದೆ. ಇದು 6.55-ಇಂಚಿನ 90Hz ಫ್ಲೂಯಿಡ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು 2.86 GHz ಸ್ನಾಪ್‌ಡ್ರಾಗನ್ 865 ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್‌ ಸೆನ್ಸಾರ್‌, 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

Most Read Articles
Best Mobiles in India

English summary
Looking for a dual SIM smartphone? Here are the top options for you.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X