Home
ಸುದ್ದಿಜಾಲ

ಮೊಬೈಲ್‌ನಲ್ಲಿ ಗೇಮ್‌ ಆಡಬೇಕೆ?..ಹಾಗಿದ್ರೆ ಈ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ನೋಡಿ!

ಮೊಬೈಲ್‌ ಮಾರುಕಟ್ಟೆಯಲ್ಲಿ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳಿಗೂ ಸಿಕ್ಕಾಪಟ್ಟೆ ಡಿಮ್ಯಾಂಡ್‌ ಇದೆ. ಅಧಿಕ ಡೇಟಾ ಬೇಡುವ ಹೈ ಎಂಡ್‌ ಮೊಬೈಲ್ ಗೇಮ್‌ಗಳು ಹೆಚ್ಚು ಜನಪ್ರಿಯ ಪಡೆದಿವೆ. ಈ ನಿಟ್ಟಿನಲ್ಲಿ ಇತ್ತೀಚಿಗೆ ಮಾರುಕಟ್ಟೆಗೆ ಹಲವು ನೂತನ ಮಾದರಿಯ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತ ಸಾಗಿವೆ. ಅದಾಗ್ಯೂ, ಮೊಬೈಲ್‌ ಗೇಮ್‌ ಆಡುವ ಬಳಕೆದಾರರಿಗೆ ವೇಗದ ಪ್ರೊಸೆಸರ್‌ ಸೌಲಭ್ಯ ಪಡೆದಿರುವ ಮೊಬೈಲ್‌ಗಳು ಹೆಚ್ಚು ಆಕರ್ಷಕ ಎನಿಸುತ್ತವೆ.

ಹೌದು, ಹೆಚ್ಚಿನ ಡೇಟಾದ ಮೊಬೈಲ್‌ ಗೇಮ್‌ ಆಡಲು ಇಷ್ಟಪಡುವ ಬಳಕೆದಾರರಿಗೆ ವೇಗದ ಪ್ರೊಸೆಸರ್‌ ಇರುವ ಸ್ಮಾರ್ಟ್‌ಫೋನ್‌ಗಳು ಪೂರಕ ಎನಿಸಿವೆ. ಇತ್ತೀಚಿನ ಕೆಲವು ಸ್ಮಾರ್ಟ್‌ಫೋನ್‌ಗಳು ವೇಗದ ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಜೊತೆಗೆ ಆಕರ್ಷಕ ಡಿಸ್‌ಪ್ಲೇ ಪಡೆದಿವೆ. ಹೀಗಾಗಿ ಇವು ಗೇಮಿಂಗ್‌ ಸೂಕ್ತ ಸೌಲಭ್ಯ ಎನಿಸುತ್ತವೆ. ಹಾಗಾದರೆ ಪ್ರಸ್ತುತ ಮಾರುಕಟ್ಟೆಯಲ್ಲಿ ಗೇಮಿಂಗ್‌ಗೆ ಪೂರಕ ಎನಿಸಿರುವ ಕೆಲವು ಅತ್ಯುತ್ತಮ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಬೈಲ್‌ನಲ್ಲಿ ಗೇಮ್‌ ಆಡಬೇಕೆ?..ಹಾಗಿದ್ರೆ ಈ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ನೋಡಿ!

ರಿಯಲ್‌ಮಿ GT 6T ಮೊಬೈಲ್‌

ರಿಯಲ್‌ಮಿ GT 6T ಫೋನ್‌ 6.78 ಇಂಚಿನ 3D LTPO AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2,789 x 1,264 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಸ್ನ್ಯಾಪ್‌ಡ್ರಾಗನ್ 7+ ಜೆನ್‌ 3 ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಸಹ ಇದೆ.

ಇನ್ನು ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರ ಜೊತೆಗೆ 5,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ಐಕ್ಯೂ ನಿಯೋ 9 ಪ್ರೊ ಮೊಬೈಲ್‌

ಐಕ್ಯೂ ಸಂಸ್ಥೆಯ ಈ ಮೊಬೈಲ್‌ 6.78 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಇದು 1260 x 2800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ.

ಅಲ್ಲದೇ ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX920 ಸೆನ್ಸಾರ್‌ ಸಪೋರ್ಟ್‌ ಪಡೆದಿದೆ. ಜೊತೆಗೆ 5160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 120W FlashCharge ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್ ಪಡೆದಿದೆ.

ವಿವೋ V40 ಪ್ರೊ ಮೊಬೈಲ್‌

ವಿವೋ V40 ಪ್ರೊ ಮೊಬೈಲ್‌ 6.78 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಇದು 1260 x 2800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಇದು ಮೀಡಿಯಾಟೆಕ್ ಡೈಮೆನ್ಸಿಟಿ 9200+ ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್‌ ಜೊತೆಗೆ ಕೆಲಸ ನಿರ್ವಹಿಸಲಿದೆ.

ಅಲ್ಲದೇ ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX920 ಸೆನ್ಸಾರ್‌ ಸಪೋರ್ಟ್‌ ಪಡೆದಿದೆ. ಜೊತೆಗೆ 5160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 80W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್ ಪಡೆದಿದೆ.

Best Mobiles in India

English summary
Top Gaming Mobile under Rs 50,000 In India 2024. check phone list and more features.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+