Home
ಸುದ್ದಿಜಾಲ

ಒಟಿಟಿ ಪ್ರಯೋಜನ ನೀಡುವ ಜಿಯೋದ ಅಲ್ಪಾವಧಿ ಯೋಜನೆಗಳು!

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ ಟೆಲಿಕಾಂ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ತನ್ನ ಆಕರ್ಷಕ ಪ್ರಿಪೇಯ್ಡ್‌ ಮತ್ತು ಪೊಸ್ಟ್‌ಪೇಯ್ಡ್‌ ಪ್ಲಾನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಅಗ್ಗದ ಬೆಲೆಯಲ್ಲಿ ಅಧಿಕ ಡೇಟಾ ಮತ್ತು ಅನಿಯಿಮಿತ ಕರೆ ಪ್ರಯೋಜನಗಳನ್ನು ನೀಡುವ ಅನೇಕ ಪ್ಲಾನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ ಅಲ್ಪಾವಧಿಯ ಪ್ಲಾನ್‌ಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ.

ಜಿಯೋ ಟೆಲಿಕಾಂ

ಹೌದು, ಜಿಯೋ ಟೆಲಿಕಾಂ ಪರಿಚಯಿಸಿರುವ ಅಲ್ಪಾವಧಿ ಮಾನ್ಯತೆಯ ಪ್ರಿಪೇಯ್ಡ್‌ ಪ್ಲಾನ್‌ಗಳು ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿವೆ. ಇವುಗಳಲ್ಲಿ ದೈನಂದಿ ಡೇಟಾ ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶ ನೀಡುವ ಪ್ಲಾನ್‌ಗಳು ಹೆಚ್ಚು ಬೇಡಿಕೆ ಪಡೆದುಕೊಂಡಿವೆ. ಹಾಗಾದ್ರೆ OTT ಪ್ರಯೋಜನ ನೀಡುವ ಜಿಯೋ ಟೆಲಿಕಾಂ ಅಲ್ಪಾವಧಿ ಮಾನ್ಯತೆಯ ಪ್ರಿಪೇಯ್ಡ್ ಪ್ಲಾನ್‌ಗಳ ವಿವರಗಳನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ 499ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 499ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂನ 499ರೂ. ಪ್ರಿಪೇಯ್ಡ್ ಪ್ಲಾನ್‌ ದೈನದಿನ 2GB ಡೇಟಾ ಮತ್ತು ಡೈಲಿ 100 SMS ಪ್ರಯೋಜನ ನೀಡಲಿದೆ. ಇದು 28 ದಿನಗಳ ಮಾನ್ಯತೆಯನ್ನು ಹೊಂದಿದ್ದು, ಜಿಯೋ ಪ್ರೈಮ್ ಸದಸ್ಯತ್ವದೊಂದಿಗೆ ಅನಿಯಮಿತ ಕರೆ ಪ್ರಯೋಜನವನ್ನು ನೀಡಲಿದೆ. ಇದಲ್ಲದೆ ಈ ಪ್ಲಾನ್‌ ನಿಮಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ನೀಡಲಿದೆ. ಇದು ನಿಮಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಡಿಸ್ನಿ + ಹಾಟ್‌ಸ್ಟಾರ್ ಪ್ಲಾಟ್‌ಫಾರ್ಮ್‌ಗೆ ಒಂದು ವರ್ಷದ ಪ್ರವೇಶವನ್ನು ನೀಡುತ್ತದೆ. ಹಾಗೆಯೇ ಜಿಯೋ ಸಿನಿಮಾ ಮತ್ತು ಜಿಯೋಟಿವಿ ಅಂತಹ ಜಿಯೋ ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ನೀಡಲಿದೆ.

ಜಿಯೋ 601ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 601ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂನ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6 GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಜಿಯೋ ಸಿನಿಮಾ, ಜಿಯೋ ಟಿವಿ ಮತ್ತು ಹೆಚ್ಚಿನವುಗಳಂತಹ ವಿವಿಧ ಜಿಯೋ ಅಪ್ಲಿಕೇಶನ್‌ಗಳನ್ನು ಬಳಕೆದಾರರು ಆನಂದಿಸಬಹುದು.

ಜಿಯೋ 799ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 799ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂ ಈ ಪ್ಲಾನ್‌ ನಿಮಗೆ ವಾರ್ಷಿಕ ಚಂದಾದಾರಿಕೆ ನೀಡುವ ಡಿಸ್ನಿ+ ಹಾಟ್‌ಸ್ಟಾರ್‌ ಪ್ರಯೋಜನ ನೀಡಲಿದೆ. ಇನ್ನು ಈ ಪ್ಲಾನ್‌ ಪ್ರತಿನಿತ್ಯ 2GB ಡೇಟಾವನ್ನು ನೀಡುತ್ತದೆ. ಇದು ಅನಿಯಮಿತ ಧ್ವನಿ ಕರೆ ಪ್ರಯೋಜನದ ಜೊತೆಗೆ, ದೈನಂದಿನ 100 SMS ಸೌಲಭ್ಯ ನೀಡಲಿದೆ. ಈ ಪ್ಲಾನ್‌ 56 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಯೋಜನೆಯು ಜಿಯೋ ಸಿನಿಮಾ, ಜಿಯೋ ಟಿವಿ ಮತ್ತು ಹೆಚ್ಚಿನವುಗಳಂತಹ ಕೆಲವು ಇತರ ಜಿಯೋ ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ನೀಡಲಿದೆ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

Best Mobiles in India

English summary
List Of Jio Prepaid Plans With OTT Benefits That Have Short, Medium Term Validity
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+