premium smartphones: ವಿಶ್ವದಲ್ಲೇ ಅತ್ಯಂತ ಜನಪ್ರಿಯ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಲಿಸ್ಟ್ ಇಲ್ಲಿದೆ!
ಜಾಗತಿಕ ಮೊಬೈಲ್ ಮಾರುಕಟ್ಟೆ ಇತ್ತೀಚಿಗೆ ಕುಸಿತವನ್ನು ಅನುಭವಿಸುತ್ತಿದೆ ಅಂತಾ ವರದಿಯಾಗಿತ್ತು. ಇದರ ನಡುವೆಯು ಪ್ರೀಮಿಯಂ ಪ್ರೈಸ್‌ಟ್ಯಾಗ್ ಸ್ಮಾರ್ಟ್‌ಫೋನ್‌ಗಳು (premium smartphones) ಮಾತ್ರ ಹೆಚ್ಚಿನ ಬೆಳವಣಿಗೆಯನ್ನು ಸಾಧಿಸಿವೆ ಅಂತಾ ಹೊಸ ವರದಿಯೊಂದು ಹೇಳಿದೆ. ಕ್ಯಾನಲಿಸ್‌ನ ಹೊಸ ವರದಿಯ ಪ್ರಕಾರ ಉನ್ನತ ಮಟ್ಟದ ವಿಭಾಗದ ಸ್ಮಾರ್ಟ್‌ಫೋನ್‌ಗಳ ಮಾರಾಟದಲ್ಲಿ ಹೆಚ್ಚಳವಾಗಿದೆ.
ಹೌದು, ಉನ್ನತ ಮಟ್ಟದ ಸ್ಮಾರ್ಟ್‌ಫೋನ್‌ಗಳ ಮಾರಾಟ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಹೆಚ್ಚಳವಾಗಿದೆ ಎಂದು ವರದಿಯಾಗಿದೆ. ಅಂದರೆ 2023 ರ ಮೊದಲ ತ್ರೈಮಾಸಿಕದಲ್ಲಿ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಬೆಳವಣಿಗೆ ದರ 4.7% ರಷ್ಟು ಇದೆ ಎಂದು ಹೇಳಲಾಗಿದೆ. ಹಾಗಾದ್ರೆ ಪ್ರಸ್ತುತ ವಿಶ್ವದಲ್ಲೇ ಅತಿ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿರುವ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಫೋನ್ 14 ಪ್ರೊ ಮ್ಯಾಕ್ಸ್: ವಿಶ್ವದಲ್ಲೇ ಅತ್ಯಂತ ಜನಪ್ರಿಯ ಪ್ರೀಮಿಯಂ ಫೋನ್‌ಗಳ ಪಟ್ಟಿಯಲ್ಲಿ ಆಪಲ್‌ನ ಐಫೋನ್ 14 ಪ್ರೊ ಮ್ಯಾಕ್ಸ್ ಮೊದಲ ಸ್ಥಾನಪಡೆದುಕೊಂಡಿದೆ. ಇದು ಆಪಲ್ ಸಂಸ್ಥೆಯ ಅತ್ಯಂತ ದುಬಾರಿ ಸ್ಮಾರ್ಟ್‌ಫೋನ್ ಕೂಡ ಆಗಿದೆ. ಇನ್ನು ಐಫೋನ್ 14 ಪ್ರೊ ಮ್ಯಾಕ್ಸ್ ಫೋನ್ 6.7 ಇಂಚಿನ ರೆಟಿನಾ XDR ಡಿಸ್‌ಪ್ಲೇ ಹೊಂದಿದೆ. ಇದರ ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಕ್ಯಾಮೆರಾವನ್ನು 65 ಪ್ರತಿಶತ ದೊಡ್ಡ ಸಂವೇದಕವನ್ನು ಹೊಂದಿದೆ. 48 ಮೆಗಾ ಪಿಕ್ಸೆಲ್ ಅಗಲದ ಕ್ಯಾಮೆರಾ 2x ಟೆಲಿಫೋಟೋ ವೀಕ್ಷಣೆಯನ್ನು ಸಹ ನೀಡುತ್ತದೆ.
ಐಫೋನ್ 14 ಪ್ರೊ: ಐಫೋನ್ 14 ಪ್ರೊ ಕೂಡ ವಿಶ್ವದ ಜನಪ್ರಿಯ ಫೋನ್‌ಗಳ ಸಾಲಿನಲ್ಲಿ ಸೇರಿದೆ. ಐಫೋನ್ 14 ಪ್ರೊ ಫೋನ್ 6.1 ಇಂಚಿನ ಸೂಪರ್ ರೆಟಿನಾ ಎಕ್ಸ್‌ಡಿಆರ್ ಡಿಸ್‌ಪ್ಲೇ ಹೊಂದಿದ್ದು, ಮೊದಲ ಬಾರಿಗೆ ಆಲ್ವೇಸ್ ಆನ್ ಡಿಸ್‌ಪ್ಲೇ ನೀಡುತ್ತದೆ. ಇನ್ನು ಈ ಐಫೋನ್ A16 ಬಯೋನಿಕ್ ಚಿಪ್ ಪ್ರೊಸೆಸರ್ ಪವರ್ ಪಡೆದಿವೆ. ಆರು-ಕೋರ್ CPU ಹೊಂದಿದ್ದು. ಅಧಿಕ ಕಾರ್ಯಕ್ಷಮತೆಯ ಕೋರ್‌ಗಳನ್ನು ಒಳಗೊಂಡಿದೆ.
ಐಫೋನ್ 14: ಜನ ಪ್ರಿಯ ಪ್ರೀಮಿಯಂ ಫೋನ್‌ಗಳಲ್ಲಿ ಐಫೋನ್ 14 ಫೋನ್ ಕೂಡ ಸೇರಿದೆ. ಇದು 6.1 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 1200nits ಬ್ರೈಟ್ನಸ್ ಸಪೋರ್ಟ್ ಒಳಗೊಂಡಿದೆ. ಇನ್ನು ಐಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ: ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ S23 ಅಲ್ಟ್ರಾ ವಿಶ್ವದ ಅತ್ಯಂತ ಜನಪ್ರಿಯ ಪ್ರೀಮಿಯಂ ಫೋನ್‌ಗಳ ಸಾಲಿನಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ನ ಕಸ್ಟಮ್ ಆವೃತ್ತಿಯನ್ನು ಹೊಂದಿದೆ. ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, 85 ಡಿಗ್ರಿ ಫೀಲ್ಡ್ ಆಫ್ ವ್ಯೂ ಅನ್ನು ನೀಡಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23: ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್ ಕೂಡ ವಿಶ್ವದ ಜನಪ್ರಿಯ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ 6.1-ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.


Click it and Unblock the Notifications








