Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳು!

ಈಗಾಗಲೇ ಐಪಿಎಲ್‌ 2022 ಕ್ರಿಕೆಟ್‌ ಪಂದ್ಯಾವಳಿ ಶುರುವಾಗಿದೆ. ಕ್ರಿಕೆಟ್‌ ಪ್ರೇಮಿಗಳು ಸ್ಟಾರ್‌ಸ್ಪೋರ್ಟ್ಸ್‌ ಟಿವಿಯಲ್ಲಿ ಐಪಿಎಲ್‌ ಮ್ಯಾಚ್‌ಗಳನ್ನು ವೀಕ್ಷಿಸುತ್ತಿದ್ದಾರೆ. ಟಿವಿ ಮಾತ್ರವಲ್ಲದೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಮೂಲಕವೂ IPL ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ. ಇದಕ್ಕಾಗಿ ನೀವು ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಹೊಂದಿರಬೇಕಾಗುತ್ತದೆ. ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಪಡೆದುಕೊಂಡರೆ ನೀವು ನಿಮ್ಮ ಸ್ಮಾರ್ಟ್‌ಟಿವಿ, ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್‌ನಲ್ಲಿ ಕೂಡ ಕ್ರಿಕೆಟ್‌ ಪಂದ್ಯಗಳನ್ನು ನೋಡಬಹುದಾಗಿದೆ.

ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌

ಹೌದು, ಐಪಿಎಲ್‌ 2022 ಕ್ರಿಕೆಟ್‌ ಮ್ಯಾಚ್‌ಗಳನ್ನು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು. ಇದೇ ಕಾರಣಕ್ಕೆ ಐಪಿಎಲ್‌ ಶುರುವಾಗ್ತಿದ್ದ ಹಾಗೇ ಟೆಲಿಕಾಂ ಕಂಪೆನಿಗಳು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ಗೆ ಪ್ರವೇಶ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿವೆ. ಹಾಗಾದ್ರೆ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಪರಿಚಯಿಸಿರುವ 650 ರೂ.ಗಿಂತ ಕಡಿಮೆ ಬೆಲೆಯಲ್ಲಿ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಏರ್‌ಟೆಲ್‌ 599ರೂ. ಪ್ರಿಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ 599ರೂ. ಪ್ರಿಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ನಿಮಗೆ 28 ದಿನಗಳ ವ್ಯಾಲಿಡಿಟಿಯನ್ನು ನೀಡಲಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆ ಹಾಗೂ ಪ್ರತಿದಿನ 3GB ಡೇಟಾ ಪ್ರಯೋಜನ ಪಡೆಯಬಹುದು. ಜೊತೆಗೆ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಕೂಡ ಲಭ್ಯವಾಗಲಿದೆ. ಇನ್ನು ಈ ಪ್ಲಾನ್‌ನಲ್ಲಿ ನಿಮಗೆ ಒಂದು ವರ್ಷದ ಅವಧಿಯ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ದೊರೆಯಲಿದೆ.

ಏರ್‌ಟೆಲ್‌ 499ರೂ. ಪ್ರಿಪೇಯ್ಡ್‌ ಪ್ಲಾನ್.
ಏರ್‌ಟೆಲ್‌ 499ರೂ. ಪ್ರಿಪೇಯ್ಡ್‌ ಪ್ಲಾನ್ ನಲ್ಲಿ ನೀವು ಒಂದು ವರ್ಷದ ಅವಧಿಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಿಗಲಿದೆ. ಇದಲ್ಲದೆ ಈ ಪ್ಲಾನ್‌ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಮತ್ತು ಅನಿಯಮಿತ ಕರೆ ಪ್ರಯೋಜನ ಲಭ್ಯವಾಗಲಿದೆ. ಈ ಪ್ಲಾನ್‌ ನಿಮಗೆ 28 ದಿನಗಳ ಮಾನ್ಯತೆಯನ್ನು ನೀಡುತ್ತದೆ.

ಜಿಯೋ 601ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 601ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂ 601ರೂ.ಪ್ರಿಪೇಯ್ಡ್‌ ಪ್ಲಾನ್‌ ನಲ್ಲಿ ನಿಮಗೆ ಒಂದು ವರ್ಷದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯನ್ನು ನೀಡಲಿದೆ. ಈ ಪ್ಲಾನ್‌ 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ನೀಡಲಿದೆ. ಈ ಸಮಯದಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನವನ್ನು ಪಡೆಯಬಹುದು. ಅಲ್ಲದೆ ಅನಿಯಮಿತ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ 499ರೂ.ಪ್ರಿಪೇಯ್ಡ್‌ ಪ್ಲಾನ್‌
ಜಿಯೋದ 499ರೂ. ಬೆಲೆಯ ಪ್ರಿಪೇಯ್ಡ್ ಕೂಡ ಸೇರಿದೆ. ಈ ಪ್ಲಾನ್‌ನಲ್ಲಿ ಅನಿಯಮಿತ ಧ್ವನಿ ಕರೆಗಳು, ದಿನಕ್ಕೆ 100 SMS ಮತ್ತು ದೈನಂದಿನ 2GBಡೇಟಾ ಪ್ರಯೋಜನ ದೊರೆಯಲಿದ್ದು, 28 ದಿನಗಳ ಮಾನ್ಯತೆಯ ಹೊಂದಿದೆ. ಇದಲ್ಲದೆ ಈ ಪ್ಲಾನ್‌ನಲ್ಲಿ ಒಂದು ವರ್ಷದ Disney+ Hotstar ಮೊಬೈಲ್ ಚಂದಾದಾರಿಕೆಯನ್ನು ಒಳಗೊಂಡಿದೆ.

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌

ವೊಡಾಫೋನ್ ಐಡಿಯಾ ಟೆಲಿಕಾಂನ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3GB ಡೇಟಾ ಹಾಗೂ ಡೈಲಿ100 SMS ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 499ರೂ. ಪ್ರಿಪೇಯ್ಡ್‌ ಪ್ಲಾನ್‌
ವಿ ಟೆಲಿಕಾಂ 499ರೂ.ಪ್ರಿಪೇಯ್ಡ್‌ ಪ್ಲಾನ್‌ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಅವಧಿಯಲ್ಲಿ ದೈನಂದಿನ 2GB ಡೇಟಾವನ್ನು ನೀಡುತ್ತದೆ. ಅಲ್ಲದೆ ಬಳಕೆದಾರರು ಅನಿಯಮಿತ ಧ್ವನಿ ಕರೆಗಳು ಹಾಗೂ ದಿನಕ್ಕೆ 100 SMS ಪ್ರಯೋಜನ ಪಡೆಯಲಿದ್ದಾರೆ. ಇನ್ನು ಈ ಯೋಜನೆಯು ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ನೀಡಲಿದೆ.

Best Mobiles in India

English summary
Top plans under Rs 650 with Disney+ Hotstar subscription
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+