Home
ಸುದ್ದಿಜಾಲ

ಭಾರತದಲ್ಲಿ ಸೌಂಡ್‌ ಮಾಡ್ತಿರುವ ಪ್ರೀಮಿಯಂ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ

ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಕ್ರೇಜ್‌ ಇದೆ. ಅತ್ಯಾಕರ್ಷಕ ಫೀಚರ್ಸ್‌, ವೃತ್ತಿಪರ ದರ್ಜೆಯ ಕ್ಯಾಮೆರಾಗಳು, ವಾಯರ್‌ಲೆಸ್‌ ಚಾರ್ಜಿಂಗ್‌ನಂತಹ ಆಯ್ಕೆಗಳಿಂದ ಗಮನಸೆಳೆದಿವೆ. ಸದ್ಯ ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ಅನೇಕ ಪ್ರೀಮಿಯಂ ಫ್ಲ್ಯಾಗ್‌ಶಿಪ್‌ ಸ್ಮಾರ್ಟ್‌ಫೋನ್‌ಗಳು ರೂಲ್‌ ಮಾಡುತ್ತಿವೆ.

ಹೌದು, ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ಹಲವು ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳು ಸಖತ್‌ ಸೌಂಡ್‌ ಮಾಡುತ್ತಿವೆ. ಇದರಲ್ಲಿ ಸ್ಯಾಮ್‌ಸಂಗ್‌, ಒನ್‌ಪ್ಲಸ್‌, ಆಪಲ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಭಾರಿ ಸಂಚಲನ ಸೃಷ್ಟಿಸಿವೆ. ಹಾಗಾದ್ರೆ ಇತ್ತೀಚಿಗೆ ಮಾರುಕಟ್ಟೆಯಲ್ಲಿ ಟ್ರೆಂಡ್‌ ಹುಟ್ಟುಹಾಕಿರುವ ಅತ್ಯುತ್ತಮ ಪ್ರೀಮಿಯಂ ಫ್ಲ್ಯಾಗ್‌ಶಿಪ್‌ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಸೌಂಡ್‌ ಮಾಡ್ತಿರುವ ಪ್ರೀಮಿಯಂ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 5 5G
ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 5 5G ಸ್ಮಾರ್ಟ್‌ಫೋನ್‌ ಅತ್ಯುತ್ತಮ ಫ್ಲ್ಯಾಗ್‌ಶಿಪ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದೆನಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಡೈನಾಮಿಕ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ 3.4 ಇಂಚಿನ ಸೂಪರ್ ಅಮೋಲೆಡ್‌ ಕವರ್ ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 Gen 2SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರ ಬೆಲೆ ಭಾರತದಲ್ಲಿ 99,999ರೂ.ಗಳಿಂದ ಪ್ರಾರಂಭವಾಗಲಿದೆ.

ಐಫೋನ್‌ 14ಪ್ರೊ
ಐಫೋನ್‌ 14ಪ್ರೊ ಅತ್ಯುತ್ತಮ ಫ್ರೀಮಿಯಂ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದರ ವಿನ್ಯಾಸ, ಅಸಾಧಾರಣ ಕಾರ್ಯಕ್ಷಮತೆ ಮತ್ತು ಅಸಾಧಾರಣ ಕ್ಯಾಮೆರಾ ಸೆಟಪ್‌ನಿಂದಾಗಿ ಟೆಕ್‌ ವಲಯದಲ್ಲಿ ಸಖತ್‌ ಸೌಂಡ್‌ ಮಾಡ್ತಿದೆ. ಇನ್ನು ಐಫೋನ್ 14 ಪ್ರೊ 6.1 ಇಂಚಿನ ಸೂಪರ್ ರೆಟಿನಾ ಎಕ್ಸ್‌ಡಿಆರ್ ಡಿಸ್‌ಪ್ಲೇ ಹೊಂದಿದೆ. ಇದು A16 ಬಯೋನಿಕ್ ಚಿಪ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಮುಖ್ಯ ಕ್ಯಾಮೆರಾ 48MP ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಆಟೋಫೋಕಸ್, ಕ್ರ್ಯಾಶ್ ಡಿಟೆಕ್ಷನ್ ಮತ್ತು Emergency SOS via satellite ಸಂಪರ್ಕವನ್ನು ಸಹ ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಇಂದಿಗೂ ಕೂಡ ಪ್ರೀಮಿಯಂ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ 6.8 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 200ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ ಸಂಪೂರ್ಣ ದಿನದ ಬಳಕೆಯನ್ನು ನೀಡಲಿದೆ.

ಒನ್‌ಪ್ಲಸ್‌ 11 5G
ಒನ್‌ಪ್ಲಸ್‌ 11 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಕ್ವಾಡ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಹೈಪರ್‌ಬೂಸ್ಟ್ ಗೇಮಿಂಗ್ ಎಂಜಿನ್ ಅನ್ನು ಸಹ ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 100W ವೇಗದ ಚಾರ್ಜರ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Top premium flagship smartphones to buy in India right now
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+