Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ ತಾಣದಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ರಿಯಾಯಿತಿ!

ಜನಪ್ರಿಯ ಇ-ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ ಹೊಸ ವರ್ಷದ ಮೊದಲ ವಿಶೇಷ ಸೇಲ್‌ ಫ್ಲಿಪ್‌ಕಾರ್ಟ್ "ಬಿಗ್ ಬಚಾತ್ ಧಮಾಲ್" ನಡೆಯುತ್ತಿದೆ. ಈ ಸೇಲ್‌ನಲ್ಲಿ ಹಲವು ಜನಪ್ರಿಯ ಬ್ರ್ಯಾಂಡ್‌ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ ನೀಡಲಾಗುತ್ತಿದೆ. ಇದರಲ್ಲಿ ಪ್ರಮುಖವಾಗಿ ಐಫೋನ್ 15, ಗ್ಯಾಲಕ್ಸಿ S23 ಮೇಲೆ ನೀಡುತ್ತಿರುವ ಡಿಸ್ಕೌಂಟ್‌ ಸಾಕಷ್ಟು ಗಮನಸೆಳೆದಿದೆ.

ಹೌದು, ಫ್ಲಿಪ್‌ಕಾರ್ಟ್‌ ಬಿಗ್ ಬಚತ್ ಧಮಾಲ್ ಸೇಲ್‌ನಲ್ಲಿ ಭಾರಿ ರಿಯಾಯಿತಿಯನ್ನು ನೀಡಲಾಗುತ್ತಿದೆ. ಇದರಿಂದ 2023ರಲ್ಲಿ ಸಾಕಷ್ಟು ಸೌಂಡ್‌ ಮಾಡಿದ್ದ ಫೋನ್‌ಗಳು ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿವೆ. ಈ ಸ್ಮಾರ್ಟ್‌ಫೋನ್‌ಗಳು ಟೆಕ್‌ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದವು ಅನ್ನೋದು ವಿಶೇಷ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಬಿಗ್‌ ಬಚತ್‌ ಧಮಾಲ್‌ ಸೇಲ್‌ನಲ್ಲಿ ಯಾವೆಲ್ಲಾ ಫೋನ್‌ಗಳು ರಿಯಾಯಿತಿ ಪಡೆದುಕೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫ್ಲಿಪ್‌ಕಾರ್ಟ್‌ ತಾಣದಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ರಿಯಾಯಿತಿ!

ಆಪಲ್‌ ಐಫೋನ್‌ 15
ಫ್ಲಿಪ್‌ಕಾರ್ಟ್ ಬಿಗ್ ಬಚತ್ ಧಮಾಲ್ ಸೇಲ್‌ನಲ್ಲಿ ಆಪಲ್‌ ಐಫೋನ್‌ 15 ಭಾರಿ ರಿಯಾಯಿತಿಯನ್ನು ಪಡೆದುಕೊಂಡಿದೆ. ಇದು ರಿಯಾಯಿತಿ ದರದಲ್ಲಿ ಕೇವಲ 69,999ರೂಗಳಿಗೆ ಲಭ್ಯವಾಗುತ್ತಿದೆ. ಐಫೋನ್ 15 6.1 ಇಂಚಿನ ಡಿಸ್‌ಪ್ಲೇ ಆಯ್ಕೆ ಪಡೆದಿದೆ. ಇದು 48 MP ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾವನ್ನು ಒಳಗೊಂಡಿದೆ. ಐಫೋನ್ 15 ಮುಂಭಾಗದಲ್ಲಿ ಡೈನಾಮಿಕ್ ಐಸ್‌ಲ್ಯಾಂಡ್‌ ಅನ್ನು ಹೊಂದಿದೆ. ಇದು ಮ್ಯಾಗ್‌ಸೇಫ್‌ಗೆ ಬೆಂಬಲದೊಂದಿಗೆ ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ.

ಗೂಗಲ್ ಪಿಕ್ಸೆಲ್ 8
ಕಳೆದ ವರ್ಷ ಸಾಕಷ್ಟು ಸದ್ದು ಮಾಡಿದ್ದ ಗೂಗಲ್ ಪಿಕ್ಸೆಲ್ 8 ಕೂಡ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಇದೀಗ ಕೇವಲ 59,999 ರೂಗಳಲ್ಲಿ ಲಭ್ಯವಿದೆ. ಈ ಫೋನ್ 6.2 ಇಂಚಿನ ಡಿಸ್ಪ್ಲೇ ಜೊತೆಗೆ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇದರೊಂದಿಗೆ 120 Hz ರಿಫ್ರೆಶ್ ರೇಟ್, ಕನಿಷ್ಠ ಬೆಜೆಲ್‌ಗಳು ಮತ್ತು ಪ್ರಕಾಶಮಾನವಾದ ಸೂರ್ಯನ ಬೆಳಕಿನಲ್ಲಿಯೂ ಸಹ ಉತ್ತಮ ಬ್ರೈಟ್ನೆಸ್‌ ಅನ್ನು ನೀಡಲಿದೆ. ಇನ್ನು ಈ ಡಿವೈಸ್‌ ಟೆನ್ಸರ್ G3 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ದೊರೆಯಲಿದೆ.

Samsung Galaxy S23
Samsung Galaxy S23 ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ಹಲವು ರಿಯಾಯಿತಿಗಳ ನಂತರ 54,999ರೂ ಬೆಲೆಗೆ ಲಭ್ಯವಿದೆ (ಬ್ಯಾಂಕ್ ರಿಯಾಯಿತಿಗಳ ನಂತರ). ಈ ಸ್ಮಾರ್ಟ್‌ಫೋನ್‌ 6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡೈನಾಮಿಕ್‌ ಅಮೋಲೆಡ್‌ 2X ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

ಒಪ್ಪೋ ಫೈಂಡ್‌ N3 ಫ್ಲಿಪ್

ಒಪ್ಪೋ ಫೈಂಡ್‌ N3 ಫ್ಲಿಪ್ ಸ್ಮಾರ್ಟ್‌ಫೋನ್‌ ಇದೀಗ ಭಾರಿ ರಿಯಾಯಿತಿಯೊಂದಿಗೆ ಕೇವಲ 86,499ರೂ ಬೆಲೆಗೆ ಸೇಲ್‌ ಆಗುತ್ತಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 9200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12 GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ.

Best Mobiles in India

English summary
Top smartphone deals from Flipkart ‘Big Bachat Dhamaal’ sale 2024: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+