2022ರಲ್ಲಿ ಸಂಚಲನ ಮೂಡಿಸಿದ ಈ ಸ್ಮಾರ್ಟ್‌ಫೋನ್‌ಗಳ ಬೆಲೆ ಈಗ ಎಷ್ಟಿದೆ?

|

ಪ್ರಸ್ತುತ ನಾವು 2022ರ ಕೊನೆ ಹಂತದಲ್ಲಿದ್ದೇವೆ, 2023ಕ್ಕೆ ಕಾಲಿಡುವುದಕ್ಕೆ ಕೆಲ ದಿನಗಳಷ್ಟೇ ಬಾಕಿ ಉಳಿದಿವೆ. ಈ ಒಂದು ವರ್ಷದ ಅವಧಿಯಲ್ಲಿ ಟೆಕ್‌ ಮಾರುಕಟ್ಟೆಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗಿವೆ. ಜನಪ್ರಿಯ ಬ್ರ್ಯಾಂಡ್‌ಗಳು ಪರಿಚಯಿಸಿರುವ ಹಲವು ಮೊಬೈಲ್‌ಗಳು ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸೌಂಡ್‌ ಮಾಡಿವೆ. ಅದರಲ್ಲೂ 25,000ರೂ. ಒಳಗೆ ಬಿಡುಗಡೆಗೊಂಡ ಅನೇಕ ಸ್ಮಾರ್ಟ್‌ಫೋನ್‌ ಈ ವರ್ಷ ಭಾರಿ ಸಂಚಲನ ಸೃಷ್ಟಿಸಿವೆ.

2022ರಲ್ಲಿ

ಹೌದು, 2022ರಲ್ಲಿ ಎಂಟ್ರಿ ನೀಡಿರುವ ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಸದ್ದು ಮಾಡಿವೆ. 25,000ರೂ. ಒಳಗೆ ಬಿಡುಗಡೆಯಾಗಿದ್ದ ಹಲವು ಸ್ಮಾರ್ಟ್‌ಫೋನ್‌ಗಳು ಸ್ಮಾರ್ಟ್‌ಫೋನ್‌ ಪ್ರಿಯರ ಗಮನಸೆಳೆದಿವೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ಗಳು 25,000ರೂ ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುತ್ತಿವೆ. ಅಲ್ಲದೆ ಬಿಡುಗಡೆಗೊಂಡಾಗ ಇದ್ದ ಕ್ರೇಜ್‌ ಅನ್ನು ಇಂದಿಗೂ ಉಳಿಸಿಕೊಂಡಿದ್ದು, ಮಾರುಕಟ್ಟೆಯಲ್ಲಿ ಭಾರಿ ಜನಪ್ರಿಯತೆ ಪಡೆದುಕೊಂಡಿವೆ. ಹಾಗಾದ್ರೆ 2022ರಲ್ಲಿ ಸಾಕಷ್ಟು ಟ್ರೆಂಡ್‌ ಸೆಟ್‌ ಮಾಡಿದ್ದ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೊಟೊ G82 5G

ಮೊಟೊ G82 5G

ಮೊಟೊ G82 5G ಸ್ಮಾರ್ಟ್‌ಫೋನ್‌ ಈ ವರ್ಷ ಹೆಚ್ಚು ಸೌಂಡ್‌ ಮಾಡಿದ ಸ್ಮಾರ್ಟ್‌ಫೋನ್‌ಗಳಲ್ಲಿ ಮುಂಚೂಣಿಯಲ್ಲಿದೆ. ಆಕರ್ಷಕ ಡಿಸೈನ್‌, ಸ್ಟೈಲಿಶ್‌ ಲುಕ್‌ನಿಂದ ಗಮನಸೆಳೆದಿದ್ದ ಈ ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 19,999ರೂ. ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ.

ರಿಯಲ್‌ಮಿ 9 ಪ್ರೊ+ 5G

ರಿಯಲ್‌ಮಿ 9 ಪ್ರೊ+ 5G

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 24,999ರೂ. ಆರಂಭಿಕ ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಆಧಾರಿತ ರಿಯಲ್‌ಮಿ UI 3.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಒನ್‌ಪ್ಲಸ್‌ ನಾರ್ಡ್‌ CE 2 5G

ಒನ್‌ಪ್ಲಸ್‌ ನಾರ್ಡ್‌ CE 2 5G

ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ ಈ ವರ್ಷ ಬಿಡುಗಡೆಗೊಂಡ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 6GB RAM + 128GB ಸ್ಟೋರೇಜ್‌ ಆಯ್ಕೆಯು 23,999ರೂ. ಬೆಲೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ 6.43-ಇಂಚಿನ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ರೆಡ್ಮಿ K50i 5G

ರೆಡ್ಮಿ K50i 5G

ಈ ವರ್ಷ ಸಾಕಷ್ಟು ಜನರನ್ನು ಆಕರ್ಷಿಸಿದ ಪ್ರಮುಖ ಫೋನ್‌ಗಳಲ್ಲಿ ರೆಡ್ಮಿ K50i 5G ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ನ ಬೇಸ್‌ ಮಾಡೆಲ್‌ 6GB RAM + 128GB ಸ್ಟೋರೇಜ್ ಆಯ್ಕೆಯು ಪ್ರಸ್ತುತ 23,999ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್‌ ಎಲ್‌ಸಿಡಿ ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಮೀಡಿಯಾ ಟೆಕ್‌ ಡೈಮೆನ್ಸಿಟಿ 8100 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲ ಪಡೆದಿದೆ.

ಐಕ್ಯೂ Z6 ಪ್ರೊ 5G

ಐಕ್ಯೂ Z6 ಪ್ರೊ 5G

ಐಕ್ಯೂ Z6 ಪ್ರೊ 5G ಸ್ಮಾರ್ಟ್‌ಫೋನ್‌ ಈ ವರ್ಷ 25,000ರೂ ಒಳಗೆ ಬಿಡುಗಡೆಗೊಂಡ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನಿನ 6GB RAM + 128GB ಸ್ಟೋರೇಜ್ ಆಯ್ಕೆಯು ಅಮೆಜಾನ್‌ನಲ್ಲಿ 22,999ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

Best Mobiles in India

Read more about:
English summary
Top Smartphones for under Rs 25,000 that ruled this year

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X