Home
ಸುದ್ದಿಜಾಲ

ಜನವರಿಯಲ್ಲಿ ನೀವು 50,000ರೂ ಒಳಗೆ ಖರೀದಿಸಬಹುದಾದ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳು!

ಟೆಕ್‌ ಮಾರುಕಟ್ಟೆಯಲ್ಲಿ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಡಿಮ್ಯಾಂಡ್‌ ಇದೆ. ಫ್ಲ್ಯಾಗ್‌ಶಿಪ್‌ ಸ್ಮಾರ್ಟ್‌ಫೋನ್‌ಗಳು ತಮ್ಮ ವೇಗದ ಚಾರ್ಜಿಂಗ್‌, ಪ್ರೀಮಿಯಂ ಫೀಚರ್ಸ್‌ಗಳಿಂದ ಗಮನಸೆಳೆದಿವೆ. ಸದ್ಯ ಈ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಇಳಿಕೆಯಾಗಿದ್ದು, 50,000ರೂ ಕ್ಕಿಂತ ಕಡಿಮೆ ಬೆಲೆಗೆ ಹಲವು ಆಕರ್ಷಕ ಫ್ಲ್ಯಾಗ್‌ಶಿಪ್‌ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದಾಗಿದೆ.

ಹೌದು, ಜನವರಿ ತಿಂಗಳಿನಲ್ಲಿ ಹಲವು ಫ್ಲ್ಯಾಗ್‌ಶಿಪ್‌ ಸ್ಮಾರ್ಟ್‌ಫೋನ್‌ಗಳ ಬೆಲೆ ಇಳಿಕೆಯಾಗಿದ್ದು, ಮೊಬೈಲ್‌ ಪ್ರಿಯರಿಗೆ ಗುಡ್‌ನ್ಯೂಸ್‌ ನೀಡಿವೆ. ಸದ್ಯ ಭಾರತದಲ್ಲಿ 50,000 ರೂ.ಒಳಗೆ ಹಲವು ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದು. ಇವುಗಳಲ್ಲಿ ಪ್ರಮುಖವಾಗಿ ಐಕ್ಯೂ, ಒನ್‌ಪ್ಲಸ್‌, ನಥಿಂಗ್‌ ಫೋನ್‌ಗಳು ಸೇರಿವೆ. ಈ ನಿಟ್ಟಿನಲ್ಲಿ ನೀವು ಖರೀದಿಸಬಹುದಾದ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ವಿವರಗಳನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನೀವು 50,000ರೂ ಒಳಗೆ ಖರೀದಿಸಬಹುದಾದ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳು!

ಐಕ್ಯೂ 12 5G
ಐಕ್ಯೂ 12 5G ಸ್ಮಾರ್ಟ್‌ಫೋನ್‌ ಪ್ರಸ್ತುತ 50,000ರೂ ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಾಗುತ್ತಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಅಮೆಜಾನ್ ವೆಬ್‌ಸೈಟ್‌ನಲ್ಲಿ 52,999ರೂ ಗಳಿಗೆ ಪಟ್ಟಿಮಾಡಲಾಗಿದೆ. ಆದರೆ ನೀವು ಬ್ಯಾಂಕ್ ಕೊಡುಗೆಗಳನ್ನು ಕ್ಲಬ್ ಮಾಡಿದರೆ 50,000ರೂ ಒಳಗಿನ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಐಕ್ಯೂ 12 ಸ್ಮಾರ್ಟ್‌ಫೋನ್‌ 6.78 ಇಂಚಿನ 1.5K LTPO OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3 SoC ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 14 ನಲ್ಲಿ ರನ್‌ ಆಗಲಿದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ.

ಐಕ್ಯೂ 12 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಐಕ್ಯೂ 12 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವರೆಗಿನ ವೇಗದ ಚಾರ್ಜಿಂಗ್ ಸಾಮರ್ಥ್ಯಗಳನ್ನು ಬೆಂಬಲಿಸುತ್ತದೆ.

ನೀವು 50,000ರೂ ಒಳಗೆ ಖರೀದಿಸಬಹುದಾದ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳು!

ನಥಿಂಗ್ ಫೋನ್ (2)
ನಥಿಂಗ್ ಫೋನ್ (2) ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 39,999ರೂ ಆರಂಭಿಕ ಬೆಲೆಯಲ್ಲಿ ಲಭ್ಯವಾಗುತ್ತಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LTPO OLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಈ ಫೋನ್‌ ಕ್ವಾಲ್ಕಾಮ್ 4nm ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ನಥಿಂಗ್ ಓಎಸ್ 2.0 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ನು ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ 60fps ನಲ್ಲಿ 4K, 30 ಅಥವಾ 60fps ನಲ್ಲಿ 1080p ಮತ್ತು 4K ಮತ್ತು 30fps ನಲ್ಲಿ ಲೈವ್ HDR ಅನ್ನು ಒಳಗೊಂಡಿದೆ. ನಥಿಂಗ್ ಫೋನ್ 2 ಸ್ಮಾರ್ಟ್‌ಫೋನ್‌ 4,700mAh ಬ್ಯಾಟರಿಯನ್ನು ಒಳಗೊಂಡಿದೆ. ಇದು 45W PPS ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ಕೇವಲ 55 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು ಎಂದು ಹೇಳಲಾಗಿದೆ.

Best Mobiles in India

English summary
Top Smartphones in India under Rs 50,000 in January 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+