ಭಾರತದಲ್ಲಿ 10,000ರೂ. ಒಳಗೆ ಖರೀದಿಸಬಹುದಾದ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು!

|

ಮೊಬೈಲ್‌ ಮಾರುಕಟ್ಟೆಯಲ್ಲಿ ವಿವಿಧ ಬೆಲೆಯ ಶ್ರೇಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಇದರಲ್ಲಿ ಹಲವು ಕಂಪೆನಿಗಳು ತಮ್ಮ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಈ ಸ್ಮಾರ್ಟ್‌ಫೋನ್‌ಗಳು ಬಜೆಟ್‌ ಬೆಲೆಯಲ್ಲಿ ಮಾತ್ರವಲ್ಲದೆ ಹೈ ಎಂಡ್‌ ಪ್ರೈಸ್‌ಟ್ಯಾಗ್‌ನಲ್ಲಿಯು ಕೂಡ ಬರಲಿವೆ. ಇನ್ನು ಪ್ರೀಮಿಯಂ ಬೆಲೆಯ ಸ್ಮಾರ್ಟ್‌ಫೋನ್‌ಗಳು ವಿಶೇಷ ಫೀಚರ್ಸ್‌ಗಳಿಂದ ಗಮನಸೆಳೆದಿವೆ. ಅಷ್ಟೇ ಅಲ್ಲ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಅತ್ಯಾಕರ್ಷಕ ಫೀಚರ್ಸ್‌ಗಳನ್ನು ಪಡೆದುಕೊಂಡಿವೆ.

ಸ್ಮಾರ್ಟ್‌ಫೋನ್‌ಗಳು

ಹೌದು, ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ಕೈಗೆಟಕುವ ಬೆಲೆಯ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿವೆ. ಇದರಲ್ಲಿ 10,000ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಸದ್ದು ಮಾಡ್ತಿವೆ. ಇವುಗಳಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳಾದ ಪೊಕೊ, ರೆಡ್ಮಿ, ಸ್ಯಾಮ್‌ಸಂಗ್‌ ಕಂಪೆನಿಗಳು ಕೂಡ ಸೇರಿವೆ. ಪ್ರಸ್ತುತ 10,000ರೂ. ಒಳಗೆ ನಿಮಗೆ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪೊಕೊ C31

ಪೊಕೊ C31

ಪೊಕೊ C31 ಸ್ಮಾರ್ಟ್‌ಫೋನ್ 6.53-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 540 ಗಂಟೆಗಳ ಸ್ಟ್ಯಾಂಡ್‌ಬೈ ನೀಡಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 7,499ರೂ. ಬೆಲೆಯಲ್ಲಿ ಲಭ್ಯವಾಗಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಫೋನ್ ಆಕ್ಟಾ ಕೋರ್ Exynos 850 ಪ್ರೊಸೆಸರ್‌ ಪವರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಜೊತೆಗೆ 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪ್ರಸ್ತುತ 9,499ರೂ. ಬೆಲೆಯಲ್ಲಿ ಫ್ಲಿಪ್‌ಕಾರ್ಟ್‌ನಲ್ಲಿ ದೊರೆಯಲಿದೆ.

ಇನ್ಫಿನಿಕ್ಸ್ ಹಾಟ್ 12 ಪ್ಲೇ

ಇನ್ಫಿನಿಕ್ಸ್ ಹಾಟ್ 12 ಪ್ಲೇ

ಇನ್ಫಿನಿಕ್ಸ್‌ ಹಾಟ್‌ 12 ಪ್ಲೇ ಫೋನ್ 6.82 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಯೂನಿಸೋಕ್‌ T610 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ XOS 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ಫಿನಿಕ್ಸ್‌ ಹಾಟ್‌ 12 ಪ್ಲೇ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಪ್ರಮಾಣಿತ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ 8,199ರೂ. ಬೆಲೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯವಿದೆ.

ರೆಡ್ಮಿ 10

ರೆಡ್ಮಿ 10

ರೆಡ್ಮಿ 10 ಸ್ಮಾರ್ಟ್‌ಫೋನ್‌ 6.7 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿ ಸಾಮರ್ಥ್ಯದವನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನಿನ ಪ್ರಸ್ತುತ ಬೆಲೆ ಫ್ಲಿಪ್‌ಕಾರ್ಟ್‌ನಲ್ಲಿ 8,549ರೂ. ಬೆಲೆಯನ್ನು ಹೊಂದಿದೆ.

Best Mobiles in India

English summary
Top smartphones to buy for under Rs 10,000 in india

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X