ಜೂನ್‌ ತಿಂಗಳಲ್ಲಿ 20,000 ರೂ,ಒಳಗೆ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!

|

ಸ್ಮಾರ್ಟ್‌ಫೋನ್‌ ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಸ್ಮಾರ್ಟ್‌ಫೋನ್‌ ಹೊಂದುವುದಕ್ಕೆ ಬಯಸುತ್ತಾರೆ. ತಮ್ಮ ಬಜೆಟ್‌ಗೆ ಅನುಗುಣವಾಗಿ ದೊರಕುವ ಸ್ಮಾರ್ಟ್‌ಫೋನ್‌ಗಳ ಕಡೆಗೆ ಒಲವು ತೋರುತ್ತಾರೆ. ಇದೇ ಕಾರಣಕ್ಕೆ ಹಲವು ಸ್ಮಾರ್ಟ್‌ಫೋನ್‌ ಕಂಪೆನಿಗಳು ಬಜೆಟ್‌ನಿಂದ ಹಿಡಿದು ಹೈಎಂಡ್‌ ಮಾದರಿಯವರೆಗೂ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿವೆ. ಬಜೆಟ್‌ ಬೆಲೆಯಲ್ಲೂ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಜನಪ್ರಿಯತೆ ಪಡೆದುಕೊಂಡಿವೆ.

ಸ್ಮಾರ್ಟ್‌ಫೋನ್‌

ಹೌದು, ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಇನ್ನು ಪ್ರತಿ ತಿಂಗಳು ಕೂಡ ಹೊಸ ಸ್ಮಾರ್ಟ್‌ಫೋನ್‌ಗಳು ಎಂಟ್ರಿಯಾಗುತ್ತಲೇ ಇವೆ. ಕಳೆದ ತಿಂಗಳು ಕೊರೊನಾ ಕಾರಣದಿಂದಾಗಿ ಹೆಚ್ಚಿನ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಿಲ್ಲ. ಸದ್ಯ ಜೂನ್‌ ತಿಂಗಳಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳ ಎಂಟ್ರಿ ಜೋರಾಗಿದೆ. ಇನ್ನು ಈ ತಿಂಗಳಲ್ಲಿ ನೀವು ಹೊಸ ಸ್ಮಾರ್ಟ್‌ಫೋನ್‌ ಖರೀದಿಸುವುದಾದರೆ, 20,000 ರೂ, ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ X3 ಪ್ರೊ

ಪೊಕೊ X3 ಪ್ರೊ

ಪೊಕೊ X3 ಪ್ರೊ ಸ್ಮಾರ್ಟ್‌ಫೋನ್‌ 20,000 ರೂ, ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಇದು ಕೂಡ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌-ಹೆಚ್‌ಡಿ + ಡಾಟ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 860 ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಹೊಂದಿದೆ. ಇದು 33W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5160mAh ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ 20,000 ರೂ.ಗಿಂತ ಕಡಿಮೆ ಇರುವ ಸ್ಮಾರ್ಟ್‌ಫೋನ್‌ಗಳಲ್ಲಿ ಅತ್ಯುತ್ತಮ ಆಯ್ಕೆಯಾಗಿದೆ. ರೆಡ್ಮಿ ನೋಟ್‌ 10 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 732G ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ 8 ಪ್ರೊ

ರಿಯಲ್‌ಮಿ 8 ಪ್ರೊ

ರಿಯಲ್‌ಮಿ 8 ಪ್ರೊ ಸ್ಮಾರ್ಟ್‌ಫೋನ್‌ 20,000 ವಿಭಾಗದಲ್ಲಿ ದೊರೆಯುವ ಮತ್ತೊಂದು ಸ್ಮಾರ್ಟ್‌ಫೋನ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ 6.4-ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 720G ಪ್ರೊಸೆಸರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 50W ಸೂಪರ್‌ಡಾರ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಮೋಟೋ G60

ಮೋಟೋ G60

ಮೋಟೋ G60 ಸ್ಮಾರ್ಟ್‌ಫೋನ್‌ 6.8-ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು ಟರ್ಬೊಪವರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 17,999 ರೂ.ಆಗಿದೆ.

Best Mobiles in India

English summary
These are the top four smartphones under Rs 20,000 that you can buy in June 2021.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X