Top Smartphones: ಫೆಬ್ರವರಿಯಲ್ಲಿ 15,000ರೂ ಒಳಗೆ ಖರೀದಿಸಬಹುದಾದ ಬೆಸ್ಟ್ ಫೋನ್‌ಗಳು!
ಹೊಸ ವರ್ಷದ ಸಂಭ್ರಮದ ನೆನಪುಗಳು ಮರೆಯಾಗುವ ಮುನ್ನವೇ ಫೆಬ್ರವರಿ ತಿಂಗಳಿಗೆ ಕಾಲಿಟ್ಟಾಗಿದೆ. 2024ರ ಆರಂಭದಿಂದಲೂ ಹೊಸ ಸ್ಮಾರ್ಟ್‌ಫೋನ್‌ಗಳ ಆರ್ಭಟ ಜೋರಾಗಿದ್ದು, ಫೆಬ್ರವರಿಯಲ್ಲಿಯೂ ಸಹ ಮುಂದುವರೆಯುವ ಸೂಚನೆ ಸಿಕ್ಕಿದೆ. ಅದರಲ್ಲೂ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಸದ್ದು ಮಾಡುತ್ತಿವೆ.
ಹೌದು, ಫೆಬ್ರವರಿ ತಿಂಗಳು ಆರಂಭವಾಗುತ್ತಿದ್ದ ಹಾಗೇ ಮಾರುಕಟ್ಟೆಯಲ್ಲಿ ಬಜೆಟ್ ಫೋನ್‌ಗಳ (Smartphones) ಅರ್ಭಟ ಶುರುವಾಗಿದೆ. ಇದರಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳ ಫೋನ್‌ಗಳು ಕೂಡ ಸೇರಿವೆ. ಹಾಗಾದ್ರೆ ಫೆಬ್ರವರಿಯಲ್ಲಿ ನೀವು ಖರೀದಿಸಬಹುದಾದ 15,000 ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Poco M6 5G
Poco M6 5G ಸ್ಮಾರ್ಟ್‌ಫೋನ್ ಪ್ರಸ್ತುತ ಕೇವಲ 10,499 ರೂ.ಬೆಲೆಯಲ್ಲಿ ಮಾರಾಟವಾಗುತ್ತಿದೆ. ಅದರಲ್ಲೂ ಬ್ಯಾಂಕ್ ಆಫರ್‌ಗಳನ್ನು ಸೇರಿಸಿದರೆ ಇದರ ಬೆಲೆ ಇನ್ನಷ್ಟು ಕಡಿಮೆ ಆಗಲಿದೆ. ಇನ್ನು ಈ ಸ್ಮಾರ್ಟ್‌ಪೋನ್ ಸ್ಮಾರ್ಟ್‌ಫೋನ್ 6.74 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಸ್ಟೋರೇಜ್ ಅಯ್ಕೆಯಲ್ಲಿ ಬರಲಿದೆ. ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.

Tecno Pova 5 Pro 5G
Tecno Pova 5 Pro 5G ಸ್ಮಾರ್ಟ್‌ಫೋನ್ 15,000 ರೂ.ಒಳಗಿನ ಆಯ್ಕೆಗಳಲ್ಲಿ ಬೆಸ್ಟ್ ಎನಿಸಿದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಟೆಕ್ನೋ ಪೋವಾ 5 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು 68W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, NFC, GPS ಮತ್ತು A-GPS ಅನ್ನು ಒಳಗೊಂಡಿದೆ. ಇದಲ್ಲದೆ 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಸಹ ಹೊಂದಿದೆ.

ಲಾವಾ ಸ್ಟಾರ್ಮ್ 5G
ಲಾವಾ ಸ್ಟಾರ್ಮ್ 5G ಸ್ಮಾರ್ಟ್‌ಫೋನ್ ಕೂಡ 15,000 ರೂ ಒಳಗಿನ ಬೆಲೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ನಲ್ಲಿ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾದೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಒಟಿಜಿ ಸಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ 5.0, ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಸಾಫ್ಟ್‌ವೇರ್ ಆಧಾರಿತ ಫೇಸ್ ಅನ್‌ಲಾಕ್ ಹೊಂದಿದೆ.


Click it and Unblock the Notifications








