Home
ಸುದ್ದಿಜಾಲ

ಸದ್ಯ ಟ್ರೆಂಡಿಂಗ್‌ನಲ್ಲಿ ಇರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಇವೇ ನೋಡಿ!

ಪ್ರಸ್ತುತ ಮೊಬೈಲ್‌ ಪ್ರತಿಯೊಬ್ಬರಿಗೂ ಅಗತ್ಯವಾದ ಡಿವೈಸ್‌ ಎನ್ನುವುದರಲ್ಲಿ ಎರಡು ಮಾತಿಲ್ಲ. ಮೊಬೈಲ್‌ಗಳಿಗೆ ಡಿಮ್ಯಾಂಡ್‌ ಇರುವುದರಿಂದ ಮೊಬೈಲ್‌ ಸಂಸ್ಥೆಗಳು ಕೂಡಾ ಮಾರುಕಟ್ಟೆಗೆ ಹೊಸ ಅಪ್‌ಡೇಟ್‌ನೊಂದಿಗೆ ನೂತನ ಫೋನ್‌ಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಆದರೆ ಮಾರುಕಟ್ಟೆಗೆ ಬಿಡುಗಡೆ ಆಗುವ ಎಲ್ಲ ಮೊಬೈಲ್‌ಗಳು ಕೂಡಾ ಜನರ ಮನಗೆಲ್ಲುವುದಿಲ್ಲ. ಲಾಂಚ್‌ ಆಗಿರುವ ಕೆಲವೇ ಕೆಲವು ಮೊಬೈಲ್‌ಗಳು ಬೆಲೆಯಿಂದ ಇಲ್ಲವೇ ಫೀಚರ್ಸ್‌ಗಳಿಂದಾಗಿ ಜನಪ್ರಿಯವಾಗುತ್ತವೆ.

ಹೌದು, ಮೊಬೈಲ್‌ ಮಾರುಕಟ್ಟೆಯಲ್ಲಿ ದಿಗ್ಗಜ ಮೊಬೈಲ್‌ ಸಂಸ್ಥೆಗಳ ನಡುವೇ ನೇರ ಪೈಪೋಟಿ ಇದೆ. ಈ ನಿಟ್ಟಿನಲ್ಲಿ ಸಂಸ್ಥೆಗಳು ತಮ್ಮ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ ಅಪ್‌ಡೇಟ್‌ ಫೀಚರ್ಸ್ ಹಾಗೂ ನೂತನ ಆಯ್ಕೆಗಳನ್ನು ಪರಿಚಯಿಸುತ್ತವೆ. ಬೆಲೆ ಹಾಗೂ ಫೀಚರ್ಸ್‌ ಸೇರಿದಂತೆ ಡಿಸೈನ್‌, ಕ್ಯಾಮೆರಾ ಕ್ವಾಲಿಟಿ ಇಂತಹ ಅಂಶಗಳಿಂದ ಗಮನ ಸೆಳೆಯುವ ಫೋನ್‌ಗಳು ದೀರ್ಘಾವಧಿಯ ವರೆಗೂ ಮಾರುಕಟ್ಟೆಯನ್ನು ಆಳುತ್ತವೆ. ಹಾಗಾದರೆ ಪ್ರಸ್ತುತ ಈ ಅಕ್ಟೋಬರ್ ತಿಂಗಳಿನ ಕೊನೆಯಲ್ಲಿ ಮಾರುಕಟ್ಟೆಯಲ್ಲಿ ಹವಾ ಉಳಿಸಿಕೊಂಡಿರುವ ಸ್ಯಾಮ್‌ಸಂಗ್‌ ಮೊಬೈಲ್‌ಗಳ ಲಿಸ್ಟ್‌ ಇಲ್ಲಿದೆ ಮುಂದೆ ಓದಿರಿ.

ಸದ್ಯ ಟ್ರೆಂಡಿಂಗ್‌ನಲ್ಲಿ ಇರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಇವೇ ನೋಡಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ (Samsung Galaxy S24 Ultra) ಇತ್ತೀಚಿನ ಈ ದೈತ್ಯ ಮೊಬೈಲ್‌ 6.8 ಇಂಚಿನ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು ಡಿಸ್‌ಪ್ಲೇ 3120 x 1440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 8 ಜನ್‌ 3 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಕೂಡಾ ಪಡೆದಿದೆ.

ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಕ್ವಾಡ್‌ ಕ್ಯಾಮೆರಾ ರಚನೆ ಇದ್ದು, ಇದರ ಪ್ರಾಥಮಿಕ ಕ್ಯಾಮೆರಾವು 200 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 45W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 FE

ಇತ್ತೀಚಿನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ (Samsung Galaxy S24 FE) ಮೊಬೈಲ್‌ 6.7 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು ಡಿಸ್‌ಪ್ಲೇ 3120 x 1440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್‌ exynos 2400e soc ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, 8 GB RAM + 512 GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 FE ತ್ರಿವಳಿ ಕ್ಯಾಮೆರಾ ರಚನೆ ಇದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಇದರ ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ.


ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G (Samsung Galaxy A55) ಫೋನ್‌ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಅದೇ ರೀತಿ ಈ ಫೋನ್‌ ಎಕ್ಸಿನೋಸ್ 1480 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ AMD Xclipse 530 GPU ಸಪೋರ್ಟ್‌ ಹಾಗೂ ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್‌ ಕಾಣಬಹುದಾಗಿದೆ.

ಹಾಗೆಯೇ ಈ ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಈ ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ.

Best Mobiles in India

English summary
Top Trending Mobiles in India october 2024. check out mobile list and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+