Home
ಸುದ್ದಿಜಾಲ

ಟ್ರಾಯ್: 4G ಡೌನ್‌ಲೋಡ್‌ ಸ್ಪೀಡ್‌ನಲ್ಲಿ ರಿಲಯನ್ಸ್ ಜಿಯೋ ಎಲ್ಲರಿಗಿಂತ ಮುಂದೆ!

ರಿಲಯನ್ಸ್ ಜಿಯೋ, ಪ್ರತಿ ಸೆಕೆಂಡ್‌ಗೆ 20.1 ಮೆಗಾಬೈಟ್ ಡೇಟಾ ಡೌನ್‌ಲೋಡ್‌ ಪ್ರಮಾಣದಲ್ಲಿ 4ಜಿ ಸ್ಪೀಡ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಏಪ್ರಿಲ್ ತಿಂಗಳ ಅಪ್‌ಲೋಡ್ ವೇಗದ ವಿಭಾಗದಲ್ಲಿ ವೊಡಾಫೋನ್ 6.7 Mbpsನೊಂದಿಗೆ ಇತರೆ ಕಂಪೆನಿಗಳಿಗಿಂತ ಮುಂಚೂಣಿಯಲ್ಲಿದೆ ಎಂದು ದೂರಸಂಪರ್ಕ ನಿಯಂತ್ರಕ ಸಂಸ್ಥೆ ಟ್ರಾಯ್‌ನ ಇತ್ತೀಚಿನ ಮಾಹಿತಿ ತಿಳಿಸಿದೆ. ತನ್ನ ಅತ್ಯಂತ ನಿಕಟ ಸ್ಪರ್ಧಿ ವೊಡಾಫೋನ್‌ಗಿಂತಲೂ ಮೂರು ಪಟ್ಟು ಅಧಿಕ ಡೌನ್‌ಲೋಡ್ ವೇಗವನ್ನು ರಿಲಯನ್ಸ್ ಜಿಯೋ ಹೊಂದಿದೆ.

ಟ್ರಾಯ್: 4G ಡೌನ್‌ಲೋಡ್‌ ಸ್ಪೀಡ್‌ನಲ್ಲಿ ರಿಲಯನ್ಸ್ ಜಿಯೋ ಎಲ್ಲರಿಗಿಂತ ಮುಂದೆ!

ವೊಡಾಫೋನ್ ಮತ್ತು ಐಡಿಯಾ ಸೆಲ್ಯುಲರ್‌ಗಳು ತಮ್ಮ ಮೊಬೈಲ್ ಉದ್ಯಮಗಳನ್ನು ವೊಡಾಫೋನ್ ಐಡಿಯಾ ಲಿಮಿಟೆಡ್ ಎಂಬ ಹೆಸರಿನಲ್ಲಿ ವಿಲೀನಗೊಳಿಸಿದ್ದರೂ, ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರಿ (ಟ್ರಾಯ್) ಈಗಲೂ ಎರಡೂ ಸಂಸ್ಥೆಗಳ ಪ್ರತ್ಯೇಕ ನೆಟ್‌ವರ್ಕ್ ವೇಗದ ದತ್ತಾಂಶಗಳನ್ನು ಬಿಡುಗಡೆ ಮಾಡುತ್ತಿದೆ.

ಏಪ್ರಿಲ್‌ನಲ್ಲಿ ವೊಡಾಫೋನ್ 7Mbps ಡೌನ್‌ಲೋಡ್ ವೇಗವನ್ನು ದಾಖಲಿಸಿದೆ ಎಂದು ಟ್ರಾಯ್ ಮೇ 11ರಂದು ನೀಡಿರುವ ಮಾಹಿತಿ ತಿಳಿಸಿದೆ. ಇದರ ಬಳಿಕ ಐಡಿಯಾ 5.8 Mbps ಮತ್ತು ಏರ್‌ಟೆಲ್ 5Mbps ಡೌನ್‌ಲೋಡ್ ವೇಗದೊಂದಿಗೆ ನಂತರದ ಸ್ಥಾನಗಳಲ್ಲಿವೆ.

ಟ್ರಾಯ್: 4G ಡೌನ್‌ಲೋಡ್‌ ಸ್ಪೀಡ್‌ನಲ್ಲಿ ರಿಲಯನ್ಸ್ ಜಿಯೋ ಎಲ್ಲರಿಗಿಂತ ಮುಂದೆ!

ಅಪ್‌ಲೋಡ್ ವಿಭಾಗದಲ್ಲಿ 6.7 Mbpsನೊಂದಿಗೆ ವೊಡಾಫೋನ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ 6.1 Mbps ಇರುವ ಐಡಿಯಾ ಇದೆ. ಜಿಯೋ 4.2 Mbps ಮತ್ತು ಏರ್‌ಟೆಲ್ 3.9 Mbps ಹೊಂದಿವೆ.

ಡೌನ್‌ಲೋಡ್ ವೇಗವು ಗ್ರಾಹಕರು ಅಂತರ್ಜಾಲದಿಂದ ಮಾಹಿತಿಗಳನ್ನು ಪಡೆದುಕೊಳ್ಳಲು ನೆರವಾಗುತ್ತದೆ. ಅಪ್‌ಲೋಡ್ ವೇಗವು ತಮ್ಮ ಸಂಪರ್ಕದಲ್ಲಿರುವವರಿಗೆ ಚಿತ್ರಗಳು ಮತ್ತು ವಿಡಿಯೋಗಳನ್ನು ತ್ವರಿತವಾಗಿ ರವಾನಿಸಲು ನೆರವಾಗುತ್ತದೆ. ಮೈಸ್ಪೀಡ್ ಆಪ್‌ನ ಸಹಾಯದೊಂದಿಗೆ ದೇಶಾದ್ಯಂತ ರಿಯಲ್ ಟೈಮ್ ಆಧಾರದಲ್ಲಿ ದತ್ತಾಂಶಗಳನ್ನು ಸಂಗ್ರಹಿಸುವ ಟ್ರಾಯ್, ಅದರ ಮೂಲಕ ಸರಾಸರಿ ವೇಗವನ್ನು ಲೆಕ್ಕ ಹಾಕುತ್ತದೆ.

ಟ್ರಾಯ್: 4G ಡೌನ್‌ಲೋಡ್‌ ಸ್ಪೀಡ್‌ನಲ್ಲಿ ರಿಲಯನ್ಸ್ ಜಿಯೋ ಎಲ್ಲರಿಗಿಂತ ಮುಂದೆ!

ಜಿಯೋ 4G ಡಾಟಾ ವೋಚರ್ಸ್‌
ಜಿಯೋ ಸಂಸ್ಥೆಯು ಹೆಚ್ಚುವರಿ ಡಾಟಾ ಬಳಕೆಗಾಗಿ ಅಗತ್ಯವಿರುವ ಗ್ರಾಹಕರಿಗಾಗಿ ಹಾಗೂ 4G ಡಾಟಾ ಬಳಕೆಗಾಗಿ ಕೆಲವು 4G ಡಾಟಾ ವೋಚರ್ಸ್‌ ಆಯ್ಕೆಗಳು ಪರಿಚಯಿಸಿದೆ. ಜಿಯೋದ ಡೇಟಾ ವೋವರ್ಸ್‌ ಜಸ್ಟ್‌ 11ರೂ. ಬೆಲೆಯಿಂದ ಆರಂಭವಾಗುತ್ತವೆ. ಆರಂಭಿಕ ಜಿಯೋ 11ರೂ. ಡಾಟಾ ವೋಚರ್ ನಲ್ಲಿ 1GB ಡಾಟಾ ಲಭ್ಯ, 21ರೂ. ವೋಚರ್‌ನಲ್ಲಿ 2GB ಡಾಟಾ, 51ರೂ. ನಲ್ಲಿ 6GB ಡಾಟಾ, ಹಾಗೂ 101ರೂ. ಡಾಟಾ ವೋಚರ್ ಪ್ಲ್ಯಾನಿನಲ್ಲಿ ಒಟ್ಟು 12GB ಡಾಟಾ ಸಿಗಲಿದೆ.

Best Mobiles in India

English summary
Trai: Jio Tops In 4G Download Speed In April.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+