Home
ಸುದ್ದಿಜಾಲ

ಮಾರುಕಟ್ಟೆಯಲ್ಲಿ ಸದ್ಯ ಈ ಫೋನ್‌ಗಳೆ ಫುಲ್‌ ಟ್ರೆಂಡಿಂಗ್‌!..ಲಿಸ್ಟ್‌ ಇಲ್ಲಿದೆ!

ಮಾರುಕಟ್ಟೆಗೆ ಕಳೆದ ತಿಂಗಳು ಆಪಲ್‌ ಸಂಸ್ಥೆಯ ನೂತನ ಐಫೋನ್‌ 15 ಸರಣಿಯ ಲಾಂಚ್ ಆಗಿದ್ದು, ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದೆ. ಅದಾಗ್ಯೂ, ಇತರೆ ಕೆಲವು ಪ್ರಮುಖ ಬ್ರ್ಯಾಂಡ್‌ಗಳ ಆಂಡ್ರಾಯ್ಡ್‌ ಫೋನ್‌ಗಳು ಸಹ ತಮ್ಮ ಜನಪ್ರಿಯತೆ ಉಳಿಸಿಕೊಂಡು ಗ್ರಾಹಕರ ಗಮನ ಸೆಳೆದಿವೆ.

ಮಾರುಕಟ್ಟೆಗೆ ಹೊಸ ಫೋನ್‌ಗಳು ಲಗ್ಗೆ ಇಡುತ್ತಲೇ ಇರುತ್ತವೆ. ಅವುಗಳಲ್ಲಿ ಕೆಲವು ಬಹುಬೇಗನೆ ಖರೀದಿದಾರರ ಗಮನ ಸೆಳೆಯುತ್ತವೆ. ಮತ್ತೆ ಕೆಲವು ಹೇಳ ಹೆಸರಿಲ್ಲದೇ ಮಾರುಕಟ್ಟೆಯಿಂದ ಮಾಯವಾಗುತ್ತವೆ. ಮುಖ್ಯವಾಗಿ ಪ್ರಮುಖ ಬ್ರ್ಯಾಂಡ್‌ಗಳ ಫೋನ್‌ಗಳು ಹೆಚ್ಚಿನ ಸದ್ದು ಮಾಡುತ್ತವೆ. ಹಾಗಾದರೆ ಸದ್ಯ ಮಾರುಕಟ್ಟೆಯಲ್ಲಿ ಭಾರೀ ಟ್ರೆಂಡ್‌ ನಲ್ಲಿರುವ ಫೋನ್‌ಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಮಾರುಕಟ್ಟೆಯಲ್ಲಿ ಸದ್ಯ ಈ ಫೋನ್‌ಗಳೆ ಫುಲ್‌ ಟ್ರೆಂಡಿಂಗ್‌!..ಲಿಸ್ಟ್‌ ಇಲ್ಲಿದೆ!

ಆಪಲ್‌ ಐಫೋನ್‌ 15 ಪ್ರೊ ಮ್ಯಾಕ್ಸ್‌
ಆಪಲ್‌ ಐಫೋನ್‌ 15 ಪ್ರೊ ಮ್ಯಾಕ್ಸ್‌ ಫೋನ್ 6.7 ಇಂಚಿನ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ A17 ಪ್ರೊ ಬಯೋನಿಕ್ ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಅನ್ನು ಪಡೆದುಕೊಂಡಿದ್ದು, ಈ ಫೋನಿನ ಪ್ರಮುಖ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸರ್‌ ಆಯ್ಕೆ ಅನ್ನು ಒಳಗೊಂಡಿದೆ. ಹಾಗೆಯೇ ಆಕ್ಷನ್‌ ಬಟನ್‌ ಆಯ್ಕೆ ಕೂಡಾ ಹೊಸದಾಗಿ ಪಡೆದಿದೆ.

ಆಪಲ್‌ ಐಫೋನ್‌ 15
ಆಪಲ್‌ ಐಫೋನ್‌ 15 ಮೊಬೈಲ್‌ 6.1 ಇಂಚಿನ ಡಿಸ್‌ಪ್ಲೇ ಸೌಲಭ್ಯವನ್ನು ಒಳಗೊಂಡಿದ್ದು, 1600 nits ಬ್ರೈಟ್ನಸ್‌ ಸಪೋರ್ಟ್‌ ಸಹ ಹೊಂದಿದೆ. ಈ ಫೋನ್‌ A16 ಬಯೋನಿಕ್ ಚಿಪ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಇದರ ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಜೊತೆಗೆ ಡೈನಾಮಿಕ್ ಐಲ್ಯಾಂಡ್‌ ಆಯ್ಕೆ ಕೂಡಾ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ
ಸ್ಯಾಮ್‌ಸಂಗ್ ಸಂಸ್ಥೆಯ ಈ ಫೋನ್‌ QHD+ ಡೈಮಂಡ್‌ ಅಮೋಲೆಡ್‌ ಜೊತೆಗೆ 6.8 ಇಂಚಿನ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಹಾಗೆಯೇ ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 ಪ್ರೊಸೆಸರ್‌ ಅನ್ನು ಕೂಡಾ ಒಳಗೊಂಡಿದೆ. ಈ ಮೊಬೈಲ್‌ ಕ್ವಾಡ್‌ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 200 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಮೊಬೈಲ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಸಹ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G
ಗ್ಯಾಲಕ್ಸಿ A34 5G ಮೊಬೈಲ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಇದರ ಜೊತೆಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 1080 6nm ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದೆ. ಇದರ ಜೊತೆಗೆ 8GB + 128GB ಮತ್ತು 8GB + 256GB ಸ್ಟೋರೇಜ್‌ ಸೌಲಭ್ಯ ಸಹ ಹೊಂದಿದೆ. ಮೂರು ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮೊದಲ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಇದೆ.

ರೆಡ್ಮಿ ನೋಟ್‌ 13
ರೆಡ್ಮಿ ನೋಟ್‌ 13 ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ ಪವರ್‌ ಅನ್ನು ಹೊಂದಿದೆ. ಅಲ್ಲದೇ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 100 ಮೆಗಾಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಜೊತೆಗೆ 33W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
trending smartphones list is here. check all phones specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+