ಮೊದಲ ಸೇಲ್‌ನಲ್ಲೇ ಮಾರಾಟವಾದ 'ರೆಡ್‌ಮಿ ಕೆ20 ಪ್ರೊ' ಫೋನ್‌ಗಳು ಎಷ್ಟು ಗೊತ್ತಾ?
ಚೀನಾದಲ್ಲಿ ಇತ್ತೀಚಿಗಷ್ಟೇ ಬಿಡುಗಡೆಯಾಗಿ ಮೊಟ್ಟ ಮೊದಲ ಮಾರಾಟಕ್ಕೆ ಬಂದಿದ್ದ ಜನಪ್ರಿಯ 'ರೆಡ್‌ಮಿ ಕೆ20 ಪ್ರೊ' ಸ್ಮಾರ್ಟ್‌ಫೋನ್ ಭರ್ಜರಿ ಮಾರಾಟ ಕಂಡಿದೆ. 'ರೆಡ್‌ಮಿ ಕೆ20 ಪ್ರೊ' ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಆರಂಭವಾದ ಕೇವಲ ಎರಡೇ ಗಂಟೆಗಳಲ್ಲಿ 2 ಲಕ್ಷ ಸ್ಮಾರ್ಟ್‌ಫೋನ್‌ಗಳು ಮಾರಾಟವಾಗಿದೆ ಎಂದು ಮಾಧ್ಯಮ ವರದಿಗಳಿಂದ ತಿಳಿದುಬಂದಿದೆ.
ಹೌದು, ಬಿಡುಗಡೆಗೂ ಮುಂಚಿನಿಂದಲೇ ಜನರ ನಿದ್ದೆಗೆಡಿಸಿದ್ದ 'ರೆಡ್‌ಮಿ ಕೆ20 ಪ್ರೊ' ಮೊದಲ ಸೇಲ್ ಅನ್ನು ಇದೇ ಜೂನ್ 1 ರಂದು ಆಯೋಜಿಸಲಾಗಿತ್ತು. ಈ ಸೇಲ್ ಆರಂಭವಾಗಿ ಕೇವಲ ಎರಡೇ ಗಂಟೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ರೆಡ್‌ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್‌ಗಳು ಮಾರಾಟವಾಗಿವೆ ಎಂದು ಚೀನಾದ ಜನಪ್ರಿಯ ಮೈಕ್ರೋ ಬ್ಲಾಗಿಂಗ್ ವೆಬ್‌ಸೈಟ್ 'ವೈಬೋ' ಪ್ರಕಟಿಸಿದೆ.

ಇನ್ನು 'ರೆಡ್‌ಮಿ ಕೆ20 ಪ್ರೊ' ಸ್ಮಾರ್ಟ್‌ಫೋನಿನ ಎರಡನೇ ಸೇಲ್ ಅನ್ನು ಜೂನ್ 4 ರಂದು ಆಯೋಜಿಸಲಾಗಿದ್ದು, ಈ ಸೇಲ್‌ನಲ್ಲೂ ಕೂಡ ರೆಡ್‌ಮಿ ಕೆ20 ಪ್ರೊ ಖರೀದಿಗೆ ಹೆಚ್ಚು ಒಲವು ಇದೆ ಎನ್ನುತ್ತಿವೆ ಮಾಧ್ಯಮ ವರದಿಗಳು. ಹಾಗಾದರೆ, ಇತ್ತೀಚಿಗಷ್ಟೆ ಕಾಲಿಟ್ಟಿರುವ 'ರೆಡ್‌ಮಿ ಕೆ20 ಪ್ರೊ' ಸ್ಮಾರ್ಟ್‌ಫೋನ್ ಹೇಗಿದೆ?, ಫೀಚರ್ಸ್ ಯಾವುವು? ಎಂಬುದನ್ನು ಮುಂದೆ ಓದಿ ತಿಳಿಯಿರಿ.

6.39-ಇಂಚಿನ AMOLED ಡಿಸ್‌ಪ್ಲೇ
ರೆಡ್‌ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ 19.5:9 ಆಕಾರ ಅನುಪಾತದೊಂದಿಗೆ 6.39-ಇಂಚಿನ AMOLED ಪ್ರದರ್ಶನವನ್ನು ಹೊಂದಿದೆ. 2340 x 1080 ಪಿಕ್ಸೆಲ್‌ಗಳ ಎಫ್‌ಹೆಚ್‌ಡಿ + ರೆಸೊಲ್ಯೂಷನ್ ಸಾಮರ್ಥ್ಯದಲ್ಲಿ ಬಂದಿರುವ ಡಿಸ್ಪ್ಲೇಯು ಮಲ್ಟಿಮೀಡಿಯಾ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ. ಇನ್ನು 7ನೇ ಪೀಳಿಗೆಯ ಇನ್ ಡಿಸ್‌ಪ್ಲೇ ಫಿಂಗರ್ಪ್ರಿಂಟ್ ಸಂವೇದಕದಿಂದ ಸಂಯೋಜಿಸಲ್ಪಟ್ಟಿದೆ.

ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್
ರೆಡ್‌ಮಿ ಕೆ20 ಪ್ರೊ ರೂಪಾಂತದ ಸ್ಮಾರ್ಟ್‌ಫೋನ್ 8GB RAM ನೋಂದಿಗೆ ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್ ಅನ್ನು ಹೊಂದಿದೆ. 256GB ವರೆಗಿನ ಆಂತರಿಕ ಸಂಗ್ರಹಣೆ ಸಾಮರ್ಥ್ಯ ಹೊಂದಿರುವ ಸ್ಮಾರ್ಟ್‌ಪೋನ್ ಮೆಮೊರಿ ವಿಸ್ತರಣೆಗೆ ಯಾವುದೇ ಅವಕಾಶವನ್ನು ಹೊಂದಿರುವುದಿಲ್ಲ. ಇನ್ನು ಇತ್ತೀಚಿನ MIUI 10 ಆಂಡ್ರಾಯ್ಡ್ 9 ಪೈ ರೊಂದಿಗೆ ಫೋನ್ ರನ್ ಆಗಲಿದೆ.

4,000mAh ಬ್ಯಾಟರಿ
ರೆಡ್‌ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ 4,000mAhನಷ್ಟು ಬಲಿಷ್ಟ ಬ್ಯಾಟರಿ ಶಕ್ತಿಯನ್ನು ಇದು ಹೊಂದಿದೆ. ಡಿವೈಸ್ 27W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ . ಈ ಪೋನಿನಲ್ಲಿ ದೀರ್ಘಾವಧಿಯ 2 ದಿನದ ಬ್ಯಾಟರಿ ಅವಧಿಯನ್ನು ವಿಸ್ತರಿಸುವ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವುದಾಗಿ ಕಂಪೆನಿ ಹೇಳಿಕೊಂಡಿದ್ದು, ಪ್ರೀಮಿಯಂ ಬ್ಯಾಟರಿ ತಂತ್ರಜ್ಞಾನ ಇದಾಗಿದೆ.

ಪಾಪ್‌ಅಪ್ ಸೆಲ್ಫೀ ಕ್ಯಾಮೆರಾ!
ರೆಡ್ಮಿ ಕೆ20 ಪ್ರೊನಲ್ಲಿ (ಪೊಕೊ ಫೋನ್ 2 ) 32 ಎಂಪಿ ಪಾಪ್-ಅಪ್ ಸೆಲ್ಫೀ ಕ್ಯಾಮರಾ ವ್ಯವಸ್ಥೆ ಇರುವ ವದಂತಿಗಳು ಖಚಿತವಾಗಿದೆ. ಫೋನಿನಲ್ಲಿ ಟ್ರಿಪಲ್ ಲೆನ್ಸ್ ಸೆಟಪ್ ಹಿಂಭಾಗದಲ್ಲಿದ್ದು 48ಎಂಪಿ ಪ್ರೈಮರಿ ಸೆನ್ಸರ್, 8ಎಂಪಿ ಡೆಪ್ತ್ ಸೆನ್ಸರ್ ಹಾಗೂ ವೈಡ್ ಆಂಗಲ್‌ಗೆ ಸಹಕಾರಿಯಾಗುವಂತಹ ಕ್ಯಾಮೆರಾ ಅಳವಡಿಸಲಾಗಿದೆ. ಸುಧಾರಿತ ಕ್ಯಾಮೆರಾ ತಂತ್ರಜ್ಞಾನಗಳು ಇರಲಿವೆ.

ಇತರೆ ಎಲ್ಲಾ ಫೀಚರ್ಸ್
ರೆಡ್ಮಿ ಕೆ20 ಪ್ರೊ ಫೋನಿನಲ್ಲಿ ಡ್ಯುಯಲ್-ಎಲ್ಇಡಿ ಫ್ಲ್ಯಾಷ್, AI ದೃಶ್ಯ ಗುರುತಿಸುವಿಕೆ, ಸೂಪರ್ ನೈಟ್ ಇಮೇಜ್ ಮೋಡ್ ಮತ್ತು 960fps ನಿಧಾನ-ಚಲನೆಯ ವೀಡಿಯೊ ರೆಕಾರ್ಡಿಂಗ್ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿದೆ. ಇನ್ನು ಬ್ಲೂಟೂತ್ 5.0, ಎನ್ಎಫ್ಸಿ, ಯುಎಸ್ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಆಯ್ಕೆಗಳನ್ನು ನಾವು ನೋಡಬಹುದು.

ಬೆಲೆಗಳು ಎಷ್ಟು?
ರೆಡ್‌ಮಿ ಕೆ ಪ್ರೊ ಮೂರು ಮಾದರಿಗಳಲ್ಲಿ ಪ್ರೀ ಬುಕ್ಕಿಂಗ್‌ಗೆ ಬಂದಿದ್ದು, ಬೆಲೆಗಳು ಇಂತಿವೆ. 6 ಜಿಬಿ RAM + 128 ಜಿಬಿ ಮೆಮೊರಿ- 2,599 ಯುವಾನ್ (ಅಂದಾಜು ರೂ. 26,000), 8 ಜಿಬಿ RAM + 128 ಜಿಬಿ ಮೆಮೊರಿ- 2,799 ಯುವಾನ್ (ಅಂದಾಜು ರೂ. ರೂ. 28,000), ಹಾಗೂ 8 ಜಿಬಿ RAM + 256 ಜಿಬಿ ಮೆಮೊರಿ- 2,999 ಯುವಾನ್ (ಸುಮಾರು ರೂ 30,000) ರೂ.ಗಳಾಗಿವೆ.


Click it and Unblock the Notifications