Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ನಲ್ಲಿ ಈ ಕಡಿಮೆ ಬೆಲೆಯ ಸ್ಮಾರ್ಟ್‌ಫೋನಿಗೂ ಭರ್ಜರಿ ಡಿಸ್ಕೌಂಟ್‌!

ಫ್ಲಿಪ್‌ಕಾರ್ಟ್‌ (Flipkart) ಇ ಕಾಮರ್ಸ್‌ ತಾಣವು ಫೋನ್‌ಗಳಿಗೆ ಒಂದಿಲ್ಲೊಂದು ಆಫರ್‌ ಅಥವಾ ರಿಯಾಯಿತಿ ನೀಡಿರುತ್ತದೆ. ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ಕೆಲವು ಮೊಬೈಲ್‌ಗಳು ಆಕರ್ಷಕ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಇನ್ಫಿನಿಕ್ಸ್‌ ಕಂಪನಿಯ ಇನ್ಫಿನಿಕ್ಸ್‌ ನೋಟ್‌ 40X 5G (Infinix Note 40X 5G) ಮೊಬೈಲ್‌ ಭಾರೀ ಆಫರ್‌ ಪಡೆದಿದ್ದು, ಗ್ರಾಹಕರು ಈ ಫೋನಿನತ್ತ ಹಿಂತಿರುಗಿ ನೋಡುವಂತೆ ಆಗಿದೆ.

ಹೌದು, ಇ ಕಾಮರ್ಸ್‌ ದೈತ್ಯ ಫ್ಲಿಪ್‌ಕಾರ್ಟ್‌ನಲ್ಲಿ ಪ್ರಸ್ತುತ ಇನ್ಫಿನಿಕ್ಸ್‌ ನೋಟ್‌ 40X 5G (Infinix Note 40X 5G) ಮೊಬೈಲ್‌ ಶೇ. 35% ರಷ್ಟು ಆಫರ್‌ ದರದಲ್ಲಿ ಪಡೆದುಕೊಂಡಿದೆ. ಈ ಫೋನಿನ 8 GB RAM + 256 GB ಸ್ಟೋರೇಜ್ ವೇರಿಯಂಟ್‌ 12,999ರೂ. ಗಳ ಸಖತ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಎಕ್ಸ್‌ಚೇಂಜ್ ಆಫರ್‌ ಸಹ ಪಡೆದುಕೊಂಡರೆ, ಈ ಫೋನ್‌ ಅನ್ನು ಮತ್ತಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಬಹುದು.

ಫ್ಲಿಪ್‌ಕಾರ್ಟ್‌ನಲ್ಲಿ ಈ ಕಡಿಮೆ ಬೆಲೆಯ ಸ್ಮಾರ್ಟ್‌ಫೋನಿಗೂ ಭರ್ಜರಿ ಡಿಸ್ಕೌಂಟ್‌!

ಇನ್ನು ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 6nm ಪ್ರೊಸೆಸರ್ ಸೌಲಭ್ಯ ಪಡೆದಿದ್ದು, 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದೆ. ಹಾಗೆಯೇ ಇದರ ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಹಾಗಾದರೇ ಇನ್ಫಿನಿಕ್ಸ್‌ ನೋಟ್‌ 40X 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇನ್ಫಿನಿಕ್ಸ್‌ ನೋಟ್‌ 40X 5G - ಫೀಚರ್ಸ್‌

ಇನ್ಫಿನಿಕ್ಸ್‌ ನೋಟ್‌ 40X 5G ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಈ ಡಿಸ್‌ಪ್ಲೇ 2436×1080 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಒಳಗೊಂಡಿದೆ ಜೊತೆಗೆ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. ಅಲ್ಲದೇ ಇದು 1300nits ಗರಿಷ್ಠ ಬ್ರೈಟ್‌ನೆಸ್ ಸೌಲಭ್ಯ ಸಹ ಪಡೆದಿದೆ.

ಇನ್ಫಿನಿಕ್ಸ್‌ ನೋಟ್‌ 40X 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 6nm ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದು ಆಂಡ್ರಾಯ್ಡ್ 14 ಆಧಾರಿತ XOS 14 ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಅಂದಹಾಗೆ ಇದು 8 GB/12 GB RAM + 256 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌ ನೋಟ್‌ 40X 5G ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 2 ಮೆಗಾಪಿಕ್ಸಲ್‌ ಮೈಕ್ರೋ ಹಾಗೂ 2 ಮೆಗಾ ಪಿಕ್ಸಲ್‌ ಡೆಪ್ತ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ ಪಡೆದಿವೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌ ನೋಟ್‌ 40X 5G ಮೊಬೈಲ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯದಲ್ಲಿ ಇದ್ದು, ಇದಕ್ಕೆ ಪೂರಕವಾಗಿ 18 W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್, ಜೆಬಿಎಲ್‌ ಸ್ಟಿರಿಯೊ ಸ್ಪೀಕರ್ ಸೆಟ್‌ಅಪ್‌ ಸೌಲಭ್ಯಗಳು ಇವೆ. ಅಲ್ಲದೇ ಇದು 5G, 4G, Wi-Fi, ಬ್ಲೂಟೂತ್, GPS, NFC, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್ C ಪೋರ್ಟ್ ಆಯ್ಕೆ ಇವೆ.

Best Mobiles in India

English summary
Unbelievable Price Cut on Infinix Note 40X 5G on Flipkart website. check Offer Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+