ಅತ್ಯುತ್ತಮ ಕ್ಯಾಮೆರಾ ಇರುವ ಈ ಮೊಟೊರೊಲಾ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ಫ್ಲಿಪ್‌ಕಾರ್ಟ್ ಒಂದಿಲ್ಲೊಂದು ಸ್ಪೆಷಲ್ ಮಾರಾಟ ಮಾಡುವ ಮೂಲಕ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ನೀಡುತ್ತಾ ಸಾಗಿದೆ. ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ ಎಡ್ಜ್ 50 ನಿಯೋ ( Motorola Edge 50 Neo ) ಮೊಬೈಲ್ ಬೊಂಬಾಟ್ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಹುಬ್ಬೇರಿಸಿ ನೋಡುವಂತೆ ಆಗಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಮೊಟೊರೊಲಾ ಎಡ್ಜ್ 50 ನಿಯೋ (Motorola Edge 50 Neo) ಫೋನ್ ಶೇ. 30% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 8 GB RAM + 256GB ಸ್ಟೋರೇಜ್ ವೇರಿಯಂಟ್ ಅನ್ನು ಗ್ರಾಹಕರು 20,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್ ಪಡೆದುಕೊಂಡರೆ, ಇನ್ನಷ್ಟು ಕೊಡುಗೆ ಸಹ ದೊರೆಯುತ್ತದೆ.

ಇನ್ನು ಮೊಟೊರೊಲಾ ಎಡ್ಜ್ 50 ನಿಯೋ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 SoC ಪ್ರೊಸೆಸರ್ ಪವರ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಮುಂಭಾಗದಲ್ಲಿ 32 ಮೆಗಾಪಿಕ್ಸಲ್ ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಮೊಟೊರೊಲಾ ಎಡ್ಜ್ 50 ನಿಯೋ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಮೊಟೊರೊಲಾ ಎಡ್ಜ್ 50 ನಿಯೋ ಫೀಚರ್ಸ್
ಮೊಟೊರೊಲಾ ಎಡ್ಜ್ 50 ನಿಯೋ ಸ್ಮಾರ್ಟ್‌ಫೋನ್ 6.4 ಇಂಚಿನ pOLED LTPO ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 2670 x 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಮಾಡಲಿದೆ. ಇದಲ್ಲದೆ 120 Hz ರಿಫ್ರೆಶ್ ರೇಟ್ ಡಿಸ್‌ಪ್ಲೇ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ ಡಿಸ್‌ಪ್ಲೇ 3,000 nits ಬ್ರೈಟ್‌ನೆಸ್ ಸಪೋರ್ಟ್ ನೀಡಲಿದೆ. ಇದರ ಜೊತೆಗೆ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಪಡೆದಿದೆ.
ಮೊಟೊರೊಲಾ ಎಡ್ಜ್ 50 ನಿಯೋ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಪಡೆದಿದೆ. ಇದರೊಂದಿಗೆ 8 GB RAM + 256 GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಕೂಡಾ ಪಡೆದಿದೆ.
ಮೊಟೊರೊಲಾ ಎಡ್ಜ್ 50 ನಿಯೋ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಎರಡನೇ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 10 ಮೆಗಾ ಪಿಕ್ಸೆಲ್ ಸೆನ್ಸಾರ್ ಬಲದಲ್ಲಿ ಇವೆ. ಅಲ್ಲದೇ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ.
ಮೊಟೊರೊಲಾ ಎಡ್ಜ್ 50 ನಿಯೋ ಸ್ಮಾರ್ಟ್‌ಫೋನ್ 4,310 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಜೊತೆಗೆ 68 W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಹಾಗೆಯೇ 15W ವೈರ್‌ಲೆಸ್ ಚಾರ್ಜಿಂಗ್ ಆಯ್ಕೆ ಕೂಡಾ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡಾಲ್ಬಿ ಅಟ್ಮಾಸ್, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ ಪೋರ್ಟ್ ಹಾಗೂ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್‌ನೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಒಳಗೊಂಡಿದೆ.


Click it and Unblock the Notifications








