ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G ಫೋನಿಗೆ ಆಕರ್ಷಕ ಡಿಸ್ಕೌಂಟ್; ಆಫರ್ ಬೆಲೆ ಎಷ್ಟು?
ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ತನ್ನ ಗ್ಯಾಲಕ್ಸಿ ಸರಣಿಯ ಮೂಲಕ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G ಫೋನ್ ಬಜೆಟ್ ಪ್ರೈಸ್‌ಟ್ಯಾಗ್‌ನಲ್ಲಿ ಗ್ರಾಹಕರನ್ನು ಸೆಳೆದಿರುವ ಜೊತೆಗೆ ಅತ್ಯುತ್ತಮ ಫೀಚರ್ಸ್ ಮೂಲಕವೂ ಸಹ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್ ಈಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಗಮನಾರ್ಹ ಬೆಲೆ ಇಳಿಕೆ ಪಡೆದಿದ್ದು, ಮತ್ತೇ ಗ್ರಾಹಕರನ್ನು ಆಕರ್ಷಿಸಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ನಲ್ಲಿ ಸದ್ಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G (Samsung Galaxy A15 5G) ಮೊಬೈಲ್ ಶೇ. 17% ರಷ್ಟು ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 16,499ರೂ. ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಕೂಡಾ ಪಡೆಯುವ ಚಾನ್ಸ್ ಇದೆ.

ಇನ್ನು ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಅಲ್ಲದೇ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದ್ದು, ಬ್ಲೂ, ಲೈಟ್ ಬ್ಲೂ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಸಿಗಲಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A15 5G ಮೊಬೈಲ್ ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 - ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಮೊಬೈಲ್ 6.5 ಇಂಚಿನ S AMOLED ಇನ್ಫಿನಿಟಿ U ನಾಚ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್ ಇದ್ದು, ಇದು 800 ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಮೊಬೈಲ್ 4G ಮಾದರಿಯು ಮೀಡಿಯಾ ಟೆಕ್ ಹಿಲಿಯೊ G99 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 14 ಓಎಸ್ ಸಫೋರ್ಟ್ ಜೊತೆಗೆ ರನ್ ಆಗಲಿದೆ. ಹಾಗೆಯೇ ಇದು 8GB RAM ಮತ್ತು 128 GB ಹಾಗೂ 8 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದಲ್ಲಿ ಲಭ್ಯ ಇದೆ. ಇದರ 5G ಆವೃತ್ತಿಯು 8GB RAM ಮತ್ತು 256GB ಸ್ಟೋರೇಜ್ ಸಾಮರ್ಥ್ಯದಲ್ಲಿ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್, ದ್ವಿತೀಯ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದರ ಜೊತೆಗೆ 13 ಮೆಗಾ ಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A15 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್ 25W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಈ ಡಿವೈಸ್ ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಪಡೆದಿದೆ.


Click it and Unblock the Notifications








