ಕಡಿಮೆ ಬೆಲೆಗೆ ಅತ್ಯುತ್ತಮ 5G ಫೋನ್ ಖರೀದಿಗೆ ಇದು ಬೆಸ್ಟ್ ಆಫರ್!
ಇ ಕಾಮರ್ಸ್ ದೊಡ್ಡಣ್ಣ ಫ್ಲಿಪ್‌ಕಾರ್ಟ್‌ನಲ್ಲಿ ( Flipkart ) ಇದೀಗ ಬಿಗ್ ಸೇವಿಂಗ್ ಡೇಸ್ ಮಾರಾಟ ಚಾಲ್ತಿ ಇದೆ. ಈ ಸ್ಪೆಷಲ್ ಮಾರಾಟದಲ್ಲಿ ಕೆಲವು ಆಯ್ದ ಮೊಬೈಲ್‌ಗಳಿಗೆ ಬಲು ಆಕರ್ಷಕ ಡಿಸ್ಕೌಂಟ್ ಘೋಷಿಸಲಾಗಿದೆ. ಎಲ್ಲ ವಿಭಾಗದ ಫೋನ್‌ಗಳು ಸಹ ಭಾರೀ ರಿಯಾಯಿತಿ ದರದಲ್ಲಿ ಗ್ರಾಹಕರನ್ನು ಸೆಳೆಯುವಂತೆ ಇವೆ. ಆ ಪೈಕಿ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಪೊಕೊ M6 ಪ್ರೊ 5G (POCO M6 Pro 5G) ಮೊಬೈಲ್ ಬೆಸ್ಟ್ ಡಿಸ್ಕೌಂಟ್ ಪಡೆದಿದೆ.
ಹೌದು, ಫ್ಲಿಪ್‌ಕಾರ್ಟ್ ನಲ್ಲಿ ಪೊಕೊ M6 ಪ್ರೊ 5G (POCO M6 Pro 5G) ಫೋನ್ ಶೇ. 23% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ನ 4GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 12,999ರೂ. ಗಳ ಕೊಡುಗೆಯ ಬೆಲೆಯಲ್ಲಿ ಖರೀದಿಸಲು ಚಾನ್ಸ್ ಇದೆ. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್ ಪಡೆದುಕೊಂಡರೆ, ಇನ್ನಷ್ಟು ರಿಯಾಯಿತಿ ಸಿಗಲಿದೆ.

ಪೊಕೊ M6 ಪ್ರೊ 5G ಮೊಬೈಲ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್ ಸೌಲಭ್ಯ ಹೊಂದಿದ್ದು, ಇದು ಪವರ್ ಬ್ಲ್ಯಾಕ್ ಹಾಗೂ ಫಾರೆಸ್ಟ್ ಗ್ರೀನ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಅಲ್ಲದೇ ಈ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಪಡೆದಿದ್ದು, 50 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಪಡೆದಿದೆ. ಇನ್ನುಳಿದಂತೆ ಪೊಕೊ M6 ಪ್ರೊ 5G ಮೊಬೈಲ್‌ನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಪೊಕೊ M6 ಪ್ರೊ 5G ಮೊಬೈಲ್ ಫೀಚರ್ಸ್
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ 6.79 ಇಂಚಿನ ಫುಲ್ ಹೆಚ್‌ಡಿ + LCD ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2460 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಹಾಗೆಯೇ ಇದರ ಜೊತೆಗೆ 90Hz ಅಡಾಪ್ಟಿವ್ ರಿಫ್ರೆಶ್ ರೇಟ್ ಪಡೆದಿದ್ದು, 91% ಸ್ಕ್ರೀನ್ ಟು ಬಾಡಿ ಅನುಪಾತ ಹಾಗೂ 550 nits ಬ್ರೈಟ್‌ನೆಸ್ ಸೌಲಭ್ಯ ಹೊಂದಿದೆ. ಹಾಗೆಯೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಸೌಲಭ್ಯ ಇದೆ.
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್ ಸೌಲಭ್ಯದಲ್ಲಿ ಕಾರ್ಯ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಒಳಗೊಂಡಿದೆ. ಹಾಗೆಯೇ ಇದು 6GB + 64GB ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ. ಇದರ ಜೊತೆಗೆ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಸೌಲಭ್ಯ ಇದೆ.
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿರುವ ಜೊತೆಗೆ ಎಲ್‌ಇಡಿ ಫ್ಲಾಶ್ ಲೈಟ್ ಆಯ್ಕೆ ಕೂಡಾ ಒಳಗೊಂಡಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಆಯ್ಕೆ ಪಡೆದಿದೆ. ಅಲ್ಲದೇ ಇದರ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸಾಮರ್ಥ್ಯದಲ್ಲಿ ಇದೆ.
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್‌ಗೆ ಸಪೋರ್ಟ್ ಪಡೆದುಕೊಂಡಿದೆ. ಇದರ ಜೊತೆಗೆ ಈ ಫೋನ್ 8.17mm ಸ್ಲಿಮ್ ರಚನೆ ಹೊಂದಿದ್ದು, ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP53 ರೇಟಿಂಗ್ ಆಯ್ಕೆ ಸೌಲಭ್ಯ ಒಳಗೊಂಡಿದೆ.


Click it and Unblock the Notifications








