ಶೀಘ್ರದಲ್ಲೇ ಲಾಂಚ್ ಆಗಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಫೋನ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದುಕೊಂಡಿದೆ. ಅದರಲ್ಲೂ ಸ್ಯಾಮ್‌ಸಂಗ್ ಕಂಪೆನಿಯ ಫೋಲ್ಡ್‌ಬಲ್ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಪ್ರಸಿದ್ಧಿಯನ್ನು ಪಡೆದುಕೊಂಡಿವೆ. ಸದ್ಯ ಸ್ಯಾಮ್‌ಸಂಗ್ ಕಂಪೆನಿ ಹೊಸ ತಲೆಮಾರಿನ ಫೋಲ್ಡಬಲ್ ಸ್ಮಾರ್ಟ್‌ಫೋನ್ ಪರಿಚಯಿಸುವುದಕ್ಕೆ ಈಗಾಗಲೇ ಸಿದ್ಧತೆ ನಡೆಸಿದೆ. ಇದರಲ್ಲಿ ಬಹು ನಿರೀಕ್ಷಿತ ಗ್ಯಾಲಕ್ಸಿ Z ಫೋಲ್ಡ್ 4 ಮತ್ತು ಗ್ಯಾಲಕ್ಸಿ Z ಫ್ಲಿಪ್ 4 ಫೋನ್‌ಗಳನ್ನು ನಿರೀಕ್ಷಿಸಲಾಗಿದೆ. ಈ ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗಳು ಆಗಸ್ಟ್ ತಿಂಗಳಿನಲ್ಲಿ ಲಾಂಚ್ ಆಗಲಿದೆ ಎಂದು ಅಂದಾಜಿಸಲಾಗಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ತನ್ನ ಹೊಸ ತಲೆಮಾರಿನ ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಈ ಪೋಲ್ಡಬಲ್ ಸ್ಮಾರ್ಟ್‌ಫೋನ್‌ಗಳು ಇ-ಸಿಮ್ ಬೆಂಬಲವನ್ನು ಹೊಂದಿವೆ ಎಂದು ವರದಿಯಾಗಿದೆ. ಇಲ್ಲಿಯವರೆಗೆ ದಕ್ಷಿಣ ಕೊರಿಯಾದಲ್ಲಿ ನೆಟ್‌ವರ್ಕ್ ಆಪರೇಟರ್‌ಗಳು eSIM ಸೇವೆಗಳನ್ನು ಹೊರತಂದಿಲ್ಲ. ಆದರೆ ಸ್ಯಾಮ್‌ಸಂಗ್ ಪೋಲ್ಡಬಲ್ ಸ್ಮಾರ್ಟ್‌ಫೋನ್‌ಗಳ ಮೂಲಕ ಇ-ಸಿಮ್ ಬೆಂಬಲವನ್ನು ಮೊದಲಬಾರಿಗೆ ಪರಿಚಯಿಸಲಿದೆ ಎನ್ನಲಾಗಿದೆ.

ಇನ್ನು ಈ ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗಳು ಲಾಂಚ್ ಆಗುವ ಮುನ್ನವೇ ಕೆಲವೊಂದು ವಿಚಾರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ಗಳು FCC ಪ್ರಮಾಣೀಕರಣವನ್ನು ಹೊಂದಿವೆ ಎನ್ನಲಾಗಿದೆ. ಇದರಲ್ಲಿ SM-F936U ಮಾದರಿ ಸಂಖ್ಯೆ ಹೊಂದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಡಿವೈಸ್ ಎಲ್ಲಾ ಅಗತ್ಯ ಕನೆಕ್ಟಿವಿಟಿ ಆಯ್ಕೆಗಳೊಂದಿಗೆ ಬರಲಿದೆ. ಇದನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಎಂದು ಗುರುತಿಸಲಾಗಿದೆ. ಇನ್ನು ಈ ಫೋನ್ ಕ್ವಾಲ್ಕಾಮ್‌ನ Gen 2 ಸ್ಮಾರ್ಟ್ ಟ್ರಾನ್ಸಿಟ್ ಫೀಚರ್ಸ್‌ನೊಂದಿಗೆ ಬರಲಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳಲ್ಲಿ ಯಾವೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರುವ ನಿರೀಕ್ಷೆಯಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲವನ್ನು ಹೊಂದಿರುತ್ತದೆ. ಇನ್ನು ಮುಖ್ಯ ಡಿಸ್‌ಪ್ಲೇ ಆಗಿರುವ ಸೆಕೆಂಡರಿ ಸ್ಕ್ರೀನ್ 2.1 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜನ್ 1 ಪ್ರೊಸೆಸರ್ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ 12GB RAM ಮತ್ತು 128GB/256GB ಇಂಟರ್ ಸ್ಟೋರೇಜ್ ಅನ್ನು ಹೊಂದಿರಲಿದೆ.

ಇನ್ನು ಮಡಚಬಹುದಾದ ಈ ಸ್ಮಾರ್ಟ್‌ಫೋನಿನ ಹಿಂಭಾಗದಲ್ಲಿ ಡ್ಯುಯಲ್-ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು 12 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಸ್ನ್ಯಾಪರ್ ಅನ್ನು ಹೊಂದಿರುತ್ತದೆ. ಇದಲ್ಲದೆ 10 ಮೆಗಾಫಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ. ಈ ಸ್ಮಾರ್ಟ್‌ಫೋನ್ 25W ವೈರ್ಡ್ ಮತ್ತು 10W ವಾಯರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ 3,700mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಸ್ಮಾರ್ಟ್‌ಫೋನನ್ 7.6 ಇಂಚಿನ QXGA+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರುತ್ತದೆ ಎಂದು ಅಂದಾಜಿಸಲಾಗಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಔಟ್‌ಸೈಡ್ ಡಿಸ್‌ಪ್ಲೇ ಆಗಿರುವ ಸೆಕೆಂಡರಿ ಡಿಸ್‌ಪ್ಲೇ 6.2 ಇಂಚಿನ HD+ ಡಿಸ್‌ಪ್ಲೇ ಆಗಿರಲಿದೆ. ಈ ಡಿಸ್‌ಪ್ಲೇ ನಿಮಗೆ 120Hz ರಿಫ್ರೆಶ್ ರೇಟ್ ಅನ್ನು ನೀಡಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಹಾಗೂ 16GB RAM ಮತ್ತು 512GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಾಗಲಿದೆ.

ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮರಾ 50 ಮೆಗಾಫಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಸುಧಾರಿತ 3x ಆಪ್ಟಿಕಲ್ ಅನ್ನು ಹೊಂದಿದ್ದು, ಟೆಲಿಫೋಟೋ ಲೆನ್ಸ್ ಅನ್ನು ನೀಡಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಅಂಡರ್-ಡಿಸ್‌ಪ್ಲೇ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ. ಈ ಡಿವೈಸ್ 25W ವೇಗದ ಚಾರ್ಜಿಂಗ್ ಬೆಂಬಲಿಸುವ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ.

ಇನ್ನು ಕಳೆದ ವರ್ಷ ಸ್ಯಾಮ್‌ಸಂಗ್ ಬಿಡುಗಡೆ ಮಾಡಿದ್ದ ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗಳಿಗೆ ಹೋಲಿಕೆ ಮಾಡಿದರೆ ಈ ಸ್ಮಾರ್ಟ್‌ಫೋನ್‌ಗಳು ಭಿನ್ನ ಮಾದರಿಯ ಫೀಚರ್ಸ್‌ಗಳನ್ನು ಒಳಗೊಂಡಿದೆ. ಕಳೆದ ವರ್ಷ ಬಿಡುಗಡೆಯಾಗಿದ್ದ ಗ್ಯಾಲಕ್ಸಿ ಫೋಲ್ಡ್ 3 ಸ್ಮಾರ್ಟ್‌ಫೋನ್ ಡ್ಯುಯಲ್ ಡಿಸ್‌ಪ್ಲೇ ರಚನೆಯನ್ನು ಹೊಂದಿತ್ತು. ಇದರಲ್ಲಿ 7.6 ಇಂಚಿನ ಡೈನಾಮಿಕ್ AMOLED 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇ ಹೊಂದಿದ್ದು, 120Hz ರೀಫ್ರೇಶ್ ರೇಟ್ ಪಡೆದಿದೆ. ಹಾಗೆಯೇ ಫೋನಿನ ಕವರ್ ಸ್ಕ್ರೀನ್ 6.2-ಇಂಚಿನ HD+ (832x2,268 ಪಿಕ್ಸೆಲ್‌ಗಳು) ಡೈನಾಮಿಕ್ AMOLED 2X ಡಿಸ್‌ಪ್ಲೇ ಒಳಗೊಂಡಿದೆ.

ಇದಲ್ಲದೆ ಗ್ಯಾಲಕ್ಸಿ ಫೋಲ್ಡ್ 3 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI ಬೆಂಬಲಿತ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಇದೆ. ಇನ್ನು ಈ ಫೋನ್ 12GB + 256GB ಮತ್ತು 12GB + 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿತ್ತು. ಹಾಗೆಯೇ ಗ್ಯಾಲಕ್ಸಿ ಫೋಲ್ಡ್ 3 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮೂರು ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿವೆ. ಇನ್ನು ಸೆಲ್ಫಿ ಕ್ಯಾಮೆರಾ (ಕವರ್ ಕ್ಯಾಮೆರಾ) 10 ಎಂಪಿ ಸೆನ್ಸಾರ್‌ನಲ್ಲಿದೆ.


Click it and Unblock the Notifications








