ಜೂನ್‌ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆ ಆಗಲಿರುವ ಸ್ಮಾರ್ಟ್‌ಫೋನ್‌ಗಳು!

|

ಭಾರತದ ಸ್ಮಾರ್ಟ್‌ಫೋನ್‌ ವಲಯ ಸಾಕಷ್ಟು ವಿಸ್ತಾರವಾಗಿದೆ. ಹಲವು ಕಂಪೆನಿಗಳು ತಮ್ಮ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿವೆ. ಕಳೆದ ತಿಂಗಳು ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಇನ್ನು ಸಹಜವಾಗಿ ಈ ತಿಂಗಳು ಕೂಡ ಹಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಲು ಸಿದ್ಧತೆ ನಡೆಸಿವೆ. ಕೊರೊನಾ ಎರಡನೇ ಅಲೆ ವ್ಯಾಪಕವಾಗಿದ್ದರಿಂದ ಕಳೆದ ತಿಂಗಳು ಹಲವು ಲಾಂಚ್‌ ಈವೆಂಟ್‌ಗಳು ಮುಂದೂಡಲ್ಪಟ್ಟಿದ್ದವು. ಆದರೆ ಈ ತಿಂಗಳು ಹೊಸ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ಕೊಡೋದು ಪಕ್ಕಾ ಎನಿಸಿದೆ.

ಸ್ಮಾರ್ಟ್‌ಫೋನ್‌

ಹೌದು, ಕಳೆದ ತಿಂಗಳು ಭಾರತದ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್ ಆಗಿದ್ದರಿಂದ ಅನೇಕ ಸ್ಮಾರ್ಟ್‌ಫೋನ್‌ಗಳ ಬಿಡುಗಡೆ ಕಾರ್ಯಕ್ರಮ ಮುಂದೂಡಲಾಗಿತ್ತು. ಈಗ ಪರಿಸ್ಥಿತಿ ಉತ್ತಮಗೊಂಡಿದೆ. ಆದರಿಂದ ಜೂನ್ ತಿಂಗಳಲ್ಲಿ, ಹೊಸ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುವುದು ಪಕ್ಕಾ ಆಗಿದೆ. ಸ್ಮಾರ್ಟ್‌ಫೋನ್‌ ಪ್ರಿಯರು ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳ ಮೇಲೆ ಭರವಸೆಯನ್ನು ಇಟ್ಟುಕೊಂಡಿದ್ದಾರೆ. ಹಾಗಾದ್ರೆ ಈ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆ ಆಗಲಿರುವ ಹೊಸ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ Z3 5G

ಐಕ್ಯೂ Z3 5G

ಐಕ್ಯೂ Z3 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಜೂನ್ 8 ರಂದು ಬಿಡುಗಡೆ ಆಗುವುದು ಅಧಿಕೃತವಾಗಿದೆ. ಈ ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G 5G ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ. ಇದರ ಬೆಲೆ 19,000 ರೂ. ಇರಬಹುದು ಎಂದು ಅಂದಾಜಿಸಲಾಗಿದೆ.

ಇನ್ಫಿನಿಕ್ಸ್ ನೋಟ್‌ 10

ಇನ್ಫಿನಿಕ್ಸ್ ನೋಟ್‌ 10

ಇನ್‌ಫಿನಿಕ್ಸ್‌ ಕಂಪೆನಿ ತನ್ನ ನೂತನ ನೋಟ್‌ 10 ಮತ್ತು ನೋಟ್‌ 10 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ದೇಶಿಯ ಮಾರುಕಟ್ಟೆಗೆ ಇದೇ ಜೂನ್‌ 7 ರಂದು ಅಧಿಕೃತವಾಗಿ ಬಿಡುಗಡೆ ಮಾಡಲು ಸಜ್ಜಾಗಿದೆ. ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿರುವ ಈ ಎರಡು ಫೋನ್‌ಗಳು 20,000ರೂ.ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಳ್ಳಲಿವೆ ಎಂದು ಹೇಳಲಾಗಿದೆ. ಇನ್ಫಿನಿಕ್ಸ್‌ ನೋಟ್‌ 10 ಸ್ಮಾರ್ಟ್‌ಫೋನ್‌ 720 x 1640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.95 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಒನ್‌ಪ್ಲಸ್ ನಾರ್ಡ್ CE

ಒನ್‌ಪ್ಲಸ್ ನಾರ್ಡ್ CE

ಒನ್‌ಪ್ಲಸ್ ನಾರ್ಡ್ ಸರಣಿಯಲ್ಲಿ ಒನೆಪ್ಲಸ್ ನಾರ್ಡ್ CE ಫೋನ್ ಅನ್ನು ಬಿಡುಗಡೆ ಮಾಡಲಿದೆ. ಇಲ್ಲಿ ಸಿಇ ಎಂದರೆ ಕೋರ್ ಆವೃತ್ತಿಯನ್ನು ಸೂಚಿಸಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ದರವನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 750ಜಿ ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ 64ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ಹೊಂದಿರಲಿದೆ. ಇದು 4500mAh ಬ್ಯಾಟರಿಯನ್ನು ಹೊಂದಿದ್ದು, 30W ಫಾಸ್ಟ್ ಚಾರ್ಜಿಂಗ್ ಅನ್ನು ಹೊಂದಿರುತ್ತದೆ.

ASUS 8Z

ASUS 8Z

ಆಸುಸ್ 8Z ಮತ್ತು ಆಸುಸ್ 8Z ಫ್ಲಿಪ್ ಸ್ಮಾರ್ಟ್‌ಫೋನ್‌ಗಳು ಕೂಡ ಇದೇ ತಿಂಗಳು ಭಾರತಕ್ಕೆ ಎಂಟ್ರಿ ಕೊಡುವುದು ಪಕ್ಕಾ ಆಗಿದೆ. ಇದರಲ್ಲಿ ಆಸುಸ್ 8Z ಸ್ಮಾರ್ಟ್‌ಫೋನ್‌ 5.9-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿರಲಿದೆ. ಇದು ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು 30W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎನ್ನಲಾಗಿದೆ. ಇನ್ನು ಆಸುಸ್ 8Z ಫ್ಲಿಪ್ ಸ್ಮಾರ್ಟ್‌ಫೋನ್‌ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾ ಹೊಂದಿರಲಿದೆ. ಇದು 30W ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿ ಹೊಂದಿರಲಿದೆ.

ಶಿಯೋಮಿ ಮಿ 11 ಲೈಟ್‌

ಶಿಯೋಮಿ ಮಿ 11 ಲೈಟ್‌

ಭಾರತದಲ್ಲಿ ಶಿಯೋಮಿ ಮಿ 11 ಲೈಟ್ ಈ ತಿಂಗಳಲ್ಲಿ ಬಿಡುಗಡೆ ಆಗುವ ಸಾದ್ಯತೆ ಉದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.55-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 732G ಪ್ರೊಸೆಸರ್ ಹೊಂದಿರಲಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ ಇದು 33W ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 4250mAh ಸಾಮರ್ಥ್ಯದ ಬ್ಯಾಟರಿ ಹೊಂದಿರಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ಯಾಲಕ್ಸಿ A22 4G/5G

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ಯಾಲಕ್ಸಿ A22 4G/5G

ಸ್ಯಾಮ್‌ಸಂಗ್ ಸಂಸ್ಥೆ ಕೂಡ ಜೂನ್‌ ತಿಂಗಳಲ್ಲಿ ಎಂ ಮತ್ತು ಎ ಸರಣಿಯಡಿ ಕನಿಷ್ಠ ಮೂರು ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಇದರಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿರಲಿದೆ. ಇದು ಡೈಮೆನ್ಸಿಟಿ 700 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.ಚಿಪ್‌ಸೆಟ್‌ನೊಂದಿಗೆ ಬರಲಿದೆ ಎಂದು ಸೂಚಿಸುತ್ತದೆ. ಇದು 15W ಫಾಸ್ಟ್ ಚಾರ್ಜರ್ ಬೆಂಬಲಿತ 5,000mAh ಬ್ಯಾಟರಿ ಇರುತ್ತದೆ ಎನ್ನಲಾಗಿದೆ. ಇದರ 4Gಆವೃತ್ತಿಯು ಅದೇ 6.4-ಇಂಚಿನ ಪರದೆಯೊಂದಿಗೆ ಬರುತ್ತದೆ ಎಂದು ಹೇಳಲಾಗಿದೆ.

ರಿಯಲ್‌ಮಿ ನಾರ್ಜೊ 30 4G

ರಿಯಲ್‌ಮಿ ನಾರ್ಜೊ 30 4G

ರಿಯಲ್‌ಮಿ ನಾರ್ಜೊ 30 4G ಸ್ಮಾರ್ಟ್‌ಫೋನ್‌ಗಳು ಜೂನ್‌ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆ ಆಗುವ ಸಾದ್ಯತೆ ಇದೆ. ಇದರಲ್ಲಿ ರಿಯಲ್‌ಮಿ ನಾರ್ಜೊ 30 4G ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿರಲಿದೆ. ಇದು ಮೀಡಿಯಾ ಟೆಕ್ ಹಿಲಿಯೊG 95 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸಾದ್ಯತೆ ಇದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 30W ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ.

ಪೊಕೊ ಎಂ 3 ಪ್ರೊ 5G

ಪೊಕೊ ಎಂ 3 ಪ್ರೊ 5G

ಪೊಕೊ ಎಂ 3 ಪ್ರೊ 5G ಸ್ಮಾರ್ಟ್‌ಫೋನ್‌ ಜೂನ್ 8 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ. ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು ಟೈಪ್-ಸಿ ಮೂಲಕ 18W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ.

Best Mobiles in India

English summary
these are the handful of smartphones that are expected to launch in India in June 2021.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X