Home
ಸುದ್ದಿಜಾಲ

ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಒನ್‌ಪ್ಲಸ್‌ನ ಈ ಫೋನಿಗೆ ಸಖತ್‌ ಡಿಸ್ಕೌಂಟ್‌!

ವ್ಯಾಲೆಂಟೈನ್ಸ್ ಡೇ ದಿನ ಪ್ರಯುಕ್ತ ಕೆಲವು ಆನ್‌ಲೈನ್‌ ತಾಣಗಳು ಮೊಬೈಲ್‌ಗಳಿಗೆ ವಿಶೇಷ ರಿಯಾಯಿತಿ ನೀಡುತ್ತಿವೆ. ಆ ಪೈಕಿ ಅಮೆಜಾನ್‌ ಇ ಕಾಮರ್ಸ್‌ ತಾಣವು ಕೆಲವು ಆಯ್ದ ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌ ಲಭ್ಯ ಮಾಡಿದೆ. ಮುಖ್ಯವಾಗಿ ಒನ್‌ಪ್ಲಸ್‌ ಸಂಸ್ಥೆಯು ಒನ್‌ಪ್ಲಸ್‌ 11R ಸ್ಮಾರ್ಟ್‌ಫೋನ್‌ ಬೊಂಬಾಟ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಒನ್‌ಪ್ಲಸ್‌ 11R ಫೋನ್‌ ಸಖತ್‌ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಇದೀಗ 37,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಇತರೆ ಕೆಲವು ಆಫರ್‌ ಸಹ ಖರೀದಿದಾರರಿಗೆ ದೊರೆಯುತ್ತವೆ.

ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಒನ್‌ಪ್ಲಸ್‌ನ ಈ ಫೋನಿಗೆ ಸಖತ್‌ ಡಿಸ್ಕೌಂಟ್‌!

ಅಂದಹಾಗೆ ಈ ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ ಜೆನ್‌ 1 5G SoC ಪ್ರೊಸೆಸರ್‌ ಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ತ್ರಿವಳಿ ಕ್ಯಾಮೆರಾ ರಚನೆ ಇದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಮುಖ್ಯ ಕ್ಯಾಮೆರಾ ಇದೆ. ಇನ್ನುಳಿದಂತೆ ಒನ್‌ಪ್ಲಸ್‌ 11R 5G ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ 11R ಫೋನ್‌ ಫೀಚರ್ಸ್‌

ಒನ್‌ಪ್ಲಸ್‌ ಕಂಪನಿಯ ಈ ಮೊಬೈಲ್‌ 6.74 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದರ ಡಿಸ್‌ಪ್ಲೇಯು 2772 x 1240 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 40Hz-120Hz ಅಡಾಪ್ಟಿವ್ ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಇದು 1000Hz ವರೆಗೆ ಟಚ್ ರೆಸ್ಪಾನ್ಸ್, 4450 ppi ಬ್ರೈಟ್‌ನೆಸ್ ಮತ್ತು 1,450 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒದಗಿಸುತ್ತದೆ.

ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಒನ್‌ಪ್ಲಸ್‌ನ ಈ ಫೋನಿಗೆ ಸಖತ್‌ ಡಿಸ್ಕೌಂಟ್‌!

ಒನ್‌ಪ್ಲಸ್‌ 11R ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್‌ ಕಾರ್ಯವೈಖರಿ ಅನ್ನು ಒಳಗೊಂಡಿದ್ದು, ಇದು ಆಂಡ್ರಾಯ್ಡ್ 13 ಓಎಸ್‌ ಬೆಂಬಲ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು 8GB RAM + 256GB ಹಾಗೂ 16GB RAM ಮತ್ತು 256GB ವೇರಿಯೆಂಟ್‌ ಆಯ್ಕೆಯ ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಈ ಫೋನ್‌ ಮೂರು ರಿಯರ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX890 ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾ 4cm ಮ್ಯಾಕ್ರೋ ಲೆನ್ಸ್‌ ಹೊಂದಿದ್ದು, 120-ಡಿಗ್ರಿ ಅಲ್ಟ್ರಾ-ವೈಡ್ ಲೆನ್ಸ್‌ ಪಡೆದಿದೆ. ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಒನ್‌ಪ್ಲಸ್‌ನ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದಿದ್ದು, 100W SUPERVOOC S ಫ್ಲಾಶ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G, Wi-Fi, ಬ್ಲೂಟೂತ್ 5.3 ಅನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಉತ್ತಮ ಡಿಸ್ಚಾರ್ಜ್ ಮತ್ತು ಸುರಕ್ಷಿತ ರೀಬೂಟ್ ಸೌಲಭ್ಯ ಪಡೆದಿದೆ.

ಈ ಟ್ರೆಂಡಿಂಗ್‌ ಫೋನ್‌ ಭಾರತದಲ್ಲಿ 8GB + 256 GB ಮತ್ತು 16GB + 256 GB ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಸೋನಿಕ್‌ ಬ್ಲ್ಯಾಕ್‌ ಮತ್ತು ಗಾಲಾಟಿಕ್‌ ಸಿಲ್ವರ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ.

Best Mobiles in India

English summary
Valentine’s Day 2024: Best Deal on This OnePlus Smartphone. check offers and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+