Home
ಸುದ್ದಿಜಾಲ

ಈ 50ಎಂಪಿ ಕ್ಯಾಮೆರಾ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಹೆಚ್ಚುವರಿ 8GB RAM ಆಯ್ಕೆ!

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ಪ್ರಮುಖ ಅಡ್ಡಾ ಆಗಿ ಗುರುತಿಸಿಕೊಂಡಿರುವ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಎಲ್ಲ ಬಗೆಯ ಉತ್ಪನ್ನಗಳಿಗೂ ಅತ್ಯುತ್ತಮ ಕೊಡುಗೆ ಲಭ್ಯ ಮಾಡಿರುತ್ತದೆ. ಆ ಪೈಕಿ ಮೊಬೈಲ್‌ಗಳಿಗೂ ಸಹ ಆಕರ್ಷಕ ಆಫರ್‌ ನೀಡುವ ಮೂಲಕ ಹೊಸ ಮೊಬೈಲ್‌ ಖರೀದಿಸುವ ಗ್ರಾಹಕರನ್ನು ತನ್ನತ್ತ ಸೆಳೆಯುತ್ತದೆ. ಸದ್ಯ ಐಕ್ಯೂ ಮೊಬೈಲ್‌ ಸಂಸ್ಥೆಯ ಇತ್ತೀಚಿನ ಐಕ್ಯೂ Z9 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ ಭಾರೀ ರಿಯಾಯಿತಿ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಹಿಂತಿರುಗಿ ನೋಡುವಂತಾಗಿದೆ.

ಹೌದು, ಇ ಕಾಮರ್ಸ್‌ ದಿಗ್ಗಜ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಐಕ್ಯೂ Z9 5G ಮೊಬೈಲ್‌ ಶೇ. 20% ರಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ 8GB RAM + 128GB ವೇರಿಯಂಟ್‌ ಫೋನ್‌ ಅನ್ನು 19,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರೊಂದಿಗೆ ಈ ಮೊಬೈಲ್‌ಗೆ ಕೆಲವು ಆಯ್ದ ಬ್ಯಾಂಕ್‌ ಆಫರ್‌ ಸಹ ಲಭ್ಯ ಇವೆ.

ಈ 50ಎಂಪಿ ಕ್ಯಾಮೆರಾ ಫೋನ್‌ ಬೆಲೆಯಲ್ಲಿ ಇಳಿಕೆ; ಹೆಚ್ಚುವರಿ 8GB RAM ಆಯ್ಕೆ!

ಐಕ್ಯೂ Z9 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗಾದರೇ ಈ ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಕ್ಯೂ Z9 5G - ಫೀಚರ್ಸ್‌ ಹೀಗಿವೆ

ಐಕ್ಯೂ Z9 5G ಮೊಬೈಲ್‌ 6.67 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಹಾಗೆಯೇ ಇದು 1,800 ನಿಟ್ಸ್‌ ಬ್ರೈಟ್‌ನೆಸ್ ಆಯ್ಕೆ ಹಾಗೂ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ ಜೊತೆಗೆ 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿದೆ. ಇದು ಮೊಬೈಲ್‌ನಲ್ಲಿ ಪ್ರೀಮಿಯಂ ಅನುಭವ ಒದಗಿಸಬಲ್ಲದು.

ಐಕ್ಯೂ Z9 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಅಲ್ಲದೇ ಈ ಫೋನ್‌ ಆಂಡ್ರಾಯ್ಡ್ 14 ಆಧಾರಿತ ಫನ್‌ಟಚ್‌ 14 ಓಎಸ್‌ ಸಪೋರ್ಟ್‌ ಪಡೆದಿದೆ. ಇದರ ಜೊತೆಗೆ 8GB RAM ಹಾಗೂ 128GB/256GB UFS 2.2 ಆಂತರೀಕ ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಅಲ್ಲದೆ ಬಾಹ್ಯ ಸ್ಟೋರೇಜ್‌ ವಿಸ್ತರಣೆ ಮಾಡಿಕೊಳ್ಳಲು ಮೈಕ್ರೊ ಎಸ್‌ಡಿ ಕಾರ್ಡ್ ಆಯ್ಕೆ ಸಹ ಪಡೆದಿದೆ.

ಐಕ್ಯೂ Z9 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, 50 ಮೆಗಾ ಪಿಕ್ಸೆಲ್‌ ಸೋನಿ IMX882 ಮುಖ್ಯ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಇದರ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಆಗಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ನೀಡಲಾಗಿದೆ.

ಐಕ್ಯೂ Z9 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬೆಂಬಲ ಪಡೆದಿದ್ದು, ಇದಕ್ಕೆ ಪೂರಕವಾಗಿ 44W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಹೊಂದಿದೆ. ಉಳಿದಂತೆ ಈ ಫೋನ್ ಫಿಂಗರ್‌ಪ್ರಿಂಟ್ ಸೆನ್ಸರ್‌, IP54 ರೇಟಿಂಗ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ ಸೌಲಭ್ಯ ಒಳಗೊಂಡಿದೆ. ಇನ್ನು ಐಕ್ಯೂ Z9 5G ಫೋನ್‌ ಅನ್ನು 8GB + 128GB ವೇರಿಯಂಟ್‌ ಹಾಗೂ 8GB + 256GB ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Very Attractive Discount on iQOO Z9 5G on Amazon website. check out offer Price, specifications and more information.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+