ಟೆಲಿಕಾಂ ಗ್ರಾಹಕರೇ ಈ ಪ್ಲ್ಯಾನ್‌ಗಳಲ್ಲಿ 84 ದಿನ ವ್ಯಾಲಿಡಿಟಿ ಜೊತೆಗೆ ಭರ್ಜರಿ ಡೇಟಾ ಸೌಲಭ್ಯ!
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ, ಏರ್‌ಟೆಲ್ ಹಾಗೂ ವೊಡಾಫೋನ್-ಐಡಿಯಾ (ವಿ ಟೆಲಿಕಾಂ) ಸಂಸ್ಥೆಗಳು ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ಸೆಳೆದಿವೆ. ಆ ಪೈಕಿ ಅಧಿಕ ಡೇಟಾ, ಅನಿಯಮಿತ ವಾಯಿಸ್ ಕರೆ ಪ್ರಯೋಜನ ಮತ್ತು ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿರುವ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಹೆಚ್ಚು ಆಕರ್ಷಿಸಿವೆ. ಬಹುತೇಕ ಚಂದಾದಾರರು ವ್ಯಾಲಿಡಿಟಿ ಹಾಗೂ ಡೇಟಾ ಹೆಚ್ಚಿರುವ ಯೋಜನೆಗಳನ್ನು ರೀಚಾರ್ಜ್ ಮಾಡಬಯಸುತ್ತಾರೆ.

ಜಿಯೋದ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.
ಜಿಯೋದ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.


Click it and Unblock the Notifications








