Just In
Don't Miss
- News
ಬರಲಿವೆ ಎಲಿವೇಟೆಡ್ ಇಂಟರ್ಸಿಟಿ ಸೆಮಿ-ಹೈಸ್ಪೀಡ್ ರೈಲುಗಳು: ಭಾರತ ಹಾಗೂ ಕರ್ನಾಟಕದ ಯಾವ ನಗರಗಳ ನಡುವೆ ಸಂಚಾರ?
- Automobiles
ಗ್ರಾಹಕರೇ... ಮಾರುತಿ ಸುಜುಕಿಯಿಂದ ಮಹತ್ವದ ಘೋಷಣೆ
- Movies
ವಾಣಿ ಜಯರಾಂ ಸಾವು: ಮರಣೋತ್ತರ ಪರೀಕ್ಷೆ ವಿವರ ಬಹಿರಂಗ
- Lifestyle
ಮಕ್ಕಳನ್ನು 'ಅಮ್ಮ' ದಡಾರದಿಂದ ರಕ್ಷಿಸಲು ಇದೇ ತಿಂಗಳು ತಪ್ಪದೆ ಕೊಡಿಸಿ MR ಲಸಿಕೆ
- Sports
IND vs AUS: ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲಲು ಆಸ್ಟ್ರೇಲಿಯಾವನ್ನು ಬೆಂಬಲಿಸಿದ ಶ್ರೀಲಂಕಾ ಲೆಜೆಂಡ್
- Finance
Twitter: ಟ್ವಿಟ್ಟರ್ನಲ್ಲಿ ಗೋಲ್ಡ್ ಬ್ಯಾಡ್ಜ್ ಉಳಿಸಿಕೊಳ್ಳಬೇಕಾದರೆ ಇಷ್ಟು ಮೊತ್ತ ಪಾವತಿಸಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಒಂದು ಬಾರಿ ಈ ಪ್ಲ್ಯಾನ್ ರೀಚಾರ್ಜ್ ಮಾಡಿ, ಡೇಟಾ, ವ್ಯಾಲಿಡಿಟಿ ಟೆನ್ಷನ್ ಇರಲ್ಲ!
ದೇಶದಲ್ಲಿ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್, ವಿ ಟೆಲಿಕಾಂಗಳು ಪರಸ್ಪರ ಪೈಪೋಟಿಯಲ್ಲಿವೆ. ಅಧಿಕ ಪ್ರಯೋಜನಗಳ ಪ್ರೀಪೇಯ್ಡ್ ಪ್ಲ್ಯಾನ್ ಪರಿಚಯಿಸುವ ಮೂಲಕ ಚಂದಾದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ಪ್ರಯತ್ನ ನಡೆಸಿವೆ. ಈ ನಿಟ್ಟಿನಲ್ಲಿ ಈ ಮೂರು ಟೆಲಿಕಾಂ ಸಂಸ್ಥೆಗಳು ವಾರ್ಷಿಕ ವ್ಯಾಲಿಡಿಟಿಯ ಯೋಜನೆಗಳನ್ನು ಪರಿಚಯಿಸಿವೆ. ಆದರೆ ಅವುಗಳಲ್ಲಿ ಕೆಲವು ವ್ಯಾಲಿಡಿಟಿ ಜೊತೆಗೆ ಅಧಿಕ ದೈನಂದಿನ ಡೇಟಾ ಪಡೆದಿವೆ.

ಹೌದು, ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್, ವಿ ಟೆಲಿಕಾಂಗಳ ಕೆಲವು ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್‌ಗಳು ದೀರ್ಘಾವಧಿ ವ್ಯಾಲಿಡಿಟಿಯಲ್ಲಿ ಹೆಚ್ಚು ಗಮನ ಸೆಳೆದಿವೆ. ಗ್ರಾಹಕರು ಮುಖ್ಯವಾಗಿ ಡೇಟಾ ಜೊತೆಗೆ ದೀರ್ಘ ವ್ಯಾಲಿಡಿಟಿ ಪಡೆದ ಯೋಜನೆಗಳನ್ನು ರೀಚಾರ್ಜ್ ಮಾಡಲು ಮುಂದಾಗುತ್ತಾರೆ. ಜಿಯೋ, ಏರ್‌ಟೆಲ್ ಹಾಗೂ ವಿ ಟೆಲಿಕಾಂನ ಅಂತಹ ಕೆಲವು ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 2,999ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 2,999ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ವ್ಯಾಲಿಡಿಟಿ ಯೋಜನೆಯಾಗಿದ್ದು, 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯು ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 850 GB ಡೇಟಾ ಪ್ರಯೋಜನ ಲಭ್ಯ. ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್‌ನಲ್ಲಿ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 730 GB ಲಭ್ಯವಾಗಲಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ. ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470