ವಿ ಮತ್ತು ಏರ್‌ಟೆಲ್ ಗ್ರಾಹಕರೇ, ಅಧಿಕ ಡೇಟಾ ಬೇಕಿದ್ರೆ ಈ ಪ್ಲ್ಯಾನ್ ರೀಚಾರ್ಜ್ ಮಾಡಿ!
ಪ್ರಸ್ತುತ ದೇಶದ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂಗಳ ನಡುವೆ ನೇರ ಪೈಪೋಟಿ ಇದೆ. ಜಿಯೋ, ವಿ ಟೆಲಿಕಾಂ ಹಾಗೂ ಏರ್‌ಟೆಲ್ ಕಂಪನಿಗಳು ಅತ್ತುತ್ತಮ ರೀಚಾರ್ಜ್ ಯೋಜನೆ ಗಳನ್ನು ಪರಿಚಯಿಸುತ್ತ ಮುನ್ನಡೆದಿವೆ. ಅವುಗಳಲ್ಲಿ ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳು ಜಿಯೋ ಟೆಲಿಕಾಂಗೆ ನೇರ ಫೈಟ್ ನೀಡುವಂತಹ ನಿಟ್ಟಿನಲ್ಲಿ ಹೆಜ್ಜೆಗಳನ್ನು ಇಟ್ಟಿವೆ. ಅಧಿಕ ದೈನಂದಿನ ಡೇಟಾ ಬಯಸುವ ಗ್ರಾಹಕರಿಗಾಗಿ 2GB ಡೇಟಾ ಗಿಂತ ಅಧಿಕ ಡೇಟಾ ಪ್ರಯೋಜನ ಹೊಂದಿವೆ. ಹಾಗಾದರೆ ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳ 2GB ಡೇಟಾ ಗಿಂತ ಅಧಿಕ ಡೇಟಾ ಪ್ರಯೋಜನದ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ಡೇಟಾ ಡಿಲೈಟ್ ಪ್ರಯೋಜನ, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.
ಏರ್‌ಟೆಲ್ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 449 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ವಿಡಿಯೊ ME ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 699 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
ಏರ್‌ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.


Click it and Unblock the Notifications








