ವಿ ಮತ್ತು ಏರ್‌ಟೆಲ್‌ ಗ್ರಾಹಕರೇ, ರೀಚಾರ್ಜ್ ಮುನ್ನ ಈ ಪ್ಲ್ಯಾನ್ ಚೆಕ್ ಮಾಡಿ!

|

ಪ್ರಸ್ತುತ ಭಾರತೀಯ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂಗಳ ನಡುವೆ ನೇರ ಪೈಪೋಟಿ ಇದೆ. ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಯೋ, ವಿ ಟೆಲಿಕಾಂ ಹಾಗೂ ಏರ್‌ಟೆಲ್‌ ಸಂಸ್ಥೆಗಳು ಬೊಂಬಾಟ್ ರೀಚಾರ್ಜ್ ಪ್ಲ್ಯಾನ್ ಗಳನ್ನು ಪರಿಚಯಿಸುತ್ತ ಮುನ್ನಡೆದಿವೆ. ಆ ಪೈಕಿ ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳು ಜಿಯೋ ಟೆಲಿಕಾಂಗೆ ಟಾಂಗ್ ಕೊಡುವಂತಹ ನಿಟ್ಟಿನಲ್ಲಿ ಹೆಜ್ಜೆಗಳನ್ನು ಇಟ್ಟಿವೆ. ಅಧಿಕ ದೈನಂದಿನ ಡೇಟಾ ಬಯಸುವ ಚಂದಾದಾರರಿಗಾಗಿ 2 GB ಡೇಟಾ ಗಿಂತ ಅಧಿಕ ಡೇಟಾ ಪ್ರಯೋಜನ ಹೊಂದಿವೆ. ಹಾಗಾದರೆ ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳ ಡೈಲಿ ಅಧಿಕ ಡೇಟಾ ಸೌಲಭ್ಯದ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಮತ್ತು ಏರ್‌ಟೆಲ್‌ ಗ್ರಾಹಕರೇ, ರೀಚಾರ್ಜ್ ಮುನ್ನ ಈ ಪ್ಲ್ಯಾನ್ ಚೆಕ್ ಮಾಡಿ!

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ವಿಡಿಯೊ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ವಿ ಮತ್ತು ಏರ್‌ಟೆಲ್‌ ಗ್ರಾಹಕರೇ, ರೀಚಾರ್ಜ್ ಮುನ್ನ ಈ ಪ್ಲ್ಯಾನ್ ಚೆಕ್ ಮಾಡಿ!

ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ ಜನಪ್ರಿಯ ಪ್ರೀಪೇಡ್‌ ಪ್ಯಾನ್‌ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ಡೇಟಾ ಡಿಲೈಟ್ ಪ್ರಯೋಜನ, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

Best Mobiles in India

English summary
Vi and Airtel: These Plans Offers Big Data with Validity.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X