Home
ಸುದ್ದಿಜಾಲ

ವಿ ಟೆಲಿಕಾಂನಿಂದ ಹೊಸ ಪ್ಲ್ಯಾನ್ ಲಾಂಚ್!..ಗ್ರಾಹಕರಿಗೆ 3 ತಿಂಗಳು ಟೆನ್ಷನ್‌ ಇರಲ್ಲ!

ಭಾರತೀಯ ಟೆಲಿಕಾಂ ವಲಯದಲ್ಲಿ ಮೂರನೇ ದೊಡ್ಡ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ (Vi) ಕೆಲವು ಅತ್ಯುತ್ತಮ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ಆಕರ್ಷಿಸಿದೆ. ಅದರ ಮುಂದುವರಿದ ಭಾಗವಾಗಿ ಹೆಚ್ಚಿನ ಚಂದಾದಾರರನ್ನು ತನ್ನತ್ತ ಆಕರ್ಷಿಸುವುದಕ್ಕೆ ಇದೀಗ ಮತ್ತೆ ಹೊಸದೊಂದು ಪ್ರೀಪೇಯ್ಡ್‌ ಪ್ಲ್ಯಾನ್‌ವೊಂದನ್ನು ಪರಿಚಯಿಸಿದೆ. ಈ ಯೋಜನೆಯು 1,000ರೂ. ಒಳಗೆ ಲಭ್ಯ.

ಹೌದು, ವಿ ಟೆಲಿಕಾಂ ನೂತನವಾಗಿ ಪ್ರೀಪೇಯ್ಡ್‌ (vi new prepaid plan) ಪ್ಲಾನ್‌ಯೊಂದನ್ನು ಲಾಂಚ್ ಮಾಡಿದ್ದು, ಅದುವೇ 902 ರೂ. ರೀಚಾರ್ಜ್‌ ಪ್ಲ್ಯಾನ್ ಆಗಿದೆ. ಈ ನೂತನ ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್‌ ಆಗಿದ್ದು, ದೈನಂದಿನ ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಸೂಕ್ತವಾಗಿದ್ದು, ಈ ಯೋಜನೆಯು ಸನ್‌ನೆಕ್ಟ್ಸ್‌ ಓಟಿಟಿ ಪ್ರಯೋಜನ ಸಹ ಪಡೆದಿದೆ. ಹಾಗಾದರೆ ವಿ ಟೆಲಿಕಾಂನ 902ರೂ. ಪ್ಲ್ಯಾನ್ ಪ್ರಯೋಜನಗಳೆನು ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನಿಂದ ಹೊಸ ಪ್ಲ್ಯಾನ್ ಲಾಂಚ್!..ಗ್ರಾಹಕರಿಗೆ 3 ತಿಂಗಳು ಟೆನ್ಷನ್‌ ಇರಲ್ಲ

ವಿ ಟೆಲಿಕಾಂನ 902ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು : ವಿ ಟೆಲಿಕಾಂನ 902ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಅದರೊಂದಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದ್ದು, ಜೊತೆಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಹೆಚ್ಚುವರಿಯಾಗಿ ಮೂರು ತಿಂಗಳ ಸನ್‌ನೆಕ್ಸ್ಟ್‌ ಓಟಿಟಿ ಚಂದಾದಾರಿಕೆ ಪ್ರಯೋಜನ ನೀಡುತ್ತದೆ ಹಾಗೂ ವಿ ಆಪ್ಸ್‌ಗಳ ಸೇವೆ ಪಡೆದಿದೆ.

ವಿ ಟೆಲಿಕಾಂನ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು : ವಿ ಟೆಲಿಕಾಂನ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರತಿದಿನ 3GB ಡೇಟಾ ಪ್ರಯೋಜನ ಪಡೆದಿದ್ದು, 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಹೆಚ್ಚುವರಿಯಾಗಿ 5GB ಡೇಟಾ ಸಿಗಲಿದೆ.

ವಿ ಟೆಲಿಕಾಂನಿಂದ ಹೊಸ ಪ್ಲ್ಯಾನ್ ಲಾಂಚ್!..ಗ್ರಾಹಕರಿಗೆ 3 ತಿಂಗಳು ಟೆನ್ಷನ್‌ ಇರಲ್ಲ

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು : ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು : ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದ್ದು, ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.

Best Mobiles in India

English summary
Vi Launches New Rs 902 Plan With 2GB per Day Data and 90 Days Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+