ಜಿಯೋ, ಏರ್‌ಟೆಲ್‌ಗೆ ಕಂಟಕವಾಗಲಿದೆಯಾ ವಿ ಟೆಲಿಕಾಂನ ಈ ಹೊಸ ಪ್ಲ್ಯಾನ್!
ದೇಶದ ಟೆಲಿಕಾಂ ವಲಯದಲ್ಲಿ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಕಾಣಿಸಿಕೊಂಡಿರುವ ವಿ ಟೆಲಿಕಾಂ (Vi) ಕೆಲವು ಅತ್ಯುತ್ತಮ ಯೋಜನೆಗಳ ಮೂಲಕ ಚಂದಾದಾರರನ್ನು ಆಕರ್ಷಿಸಿದೆ. ಹಾಗೆಯೇ ಕೆಲವು ಅಧಿಕ ಡೇಟಾ ಪ್ರಯೋಜನದ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಮೂಲಕ ಜಿಯೋ, ಏರ್‌ಟೆಲ್ ಟೆಲಿಕಾಂಗಳಿಗೆ ನೇರ ಸ್ಪರ್ಧೆ ನೀಡುತ್ತಾ ಮುನ್ನಡೆದಿದೆ. ಅದೇ ಹಾದಿಯಲ್ಲಿ ಸಾಗಿರುವ ವಿ ಟೆಲಿಕಾಂ ಈಗ ಮತ್ತೊಂದು ಹೊಸ ಪ್ಲ್ಯಾನ್ ಪರಿವಯಿಸಿದ್ದು. ಜಿಯೋ, ಏರ್‌ಟೆಲ್ ತಬ್ಬಿಬ್ಬಾಗುವಂತೆ ಮಾಡಿದೆ.

ಹೌದು, ವಿ ಟೆಲಿಕಾಂ ನೂತನವಾಗಿ 2,999ರೂ. ಪ್ರೈಸ್‌ನಲ್ಲಿ ಹೊಸ ಪ್ರೀಪೇಯ್ಡ್ ಪ್ಲಾನ್ ಅನ್ನು ಪರಿಚಯಿಸಿದೆ. ಇನ್ನು ಈ ಹೊಸ ಪ್ಲ್ಯಾನ್ ವಾರ್ಷಿಕ ವ್ಯಾಲಿಡಿಟಿಯನ್ನು ಪಡೆದಿದ್ದು, ಜೊತೆಗೆ ಜಬರ್ದಸ್ತ್ ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಇದರೊಂದಿಗೆ ವಿ ಟೆಲಿಕಾಂ ಈ ಯೋಜನೆಯಲ್ಲಿ ಕೆಲವೊಂದು ಹೆಚ್ಚುವರಿ ಸೌಲಭ್ಯಗಳನ್ನು ಸಹ ಲಭ್ಯ ಮಾಡಿದೆ. ಹಾಗಾದರೆ ವಿ ಟೆಲಿಕಾಂನ 2,999ರೂ. ಪ್ಲ್ಯಾನಿನ ಒಟ್ಟಾರೇ ಪ್ರಯೋಜನಗಳೆನು?..ಈ ಪ್ಲ್ಯಾನ್ ರೀಚಾರ್ಜ್‌ಗೆ ಸೂಕ್ತವೇ? ಇತರೆ ದೀರ್ಘ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 2,999ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 2,999ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ವ್ಯಾಲಿಡಿಟಿ ಯೋಜನೆಯಾಗಿದ್ದು, 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯು ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 850 GB ಡೇಟಾ ಪ್ರಯೋಜನ ಲಭ್ಯ ಮಾಡಿದ್ದು, ಇದನ್ನು ದೈನಂದಿನ ಡೇಟಾಗೆ ಲೆಕ್ಕಾಚಾರ ಮಾಡಿದರೆ ಪ್ರತಿದಿನ 2.33GB ಆಗುತ್ತದೆ. ಹಾಗೆಯೇ 12 am ನಿಂದ 6 am ವರೆಗೂ ಅನಿಯಮಿತ ಡೇಟಾ ಬಳಕೆ ಮಾಡಬಹುದಾಗಿದೆ.

ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್‌ನಲ್ಲಿ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ. ಇದರೊಂದಿಗೆ ವಿ ಮ್ಯೂವಿಸ್ ಹಾಗೂ ವಿ ಕ್ಲಾಸಿಕ್ ಆಪ್ಸ್‌ಗಳು ಲಭ್ಯವಾಗಲಿವೆ. ದೀರ್ಘ ವ್ಯಾಲಿಡಿಟಿ ಜೊತೆಗೆ ಅಧಿಕ ಡೇಟಾ ಸೌಲಭ್ಯ ಬಯಸೋ ಗ್ರಾಹಕರಿಗೆ ಈ ಯೋಜನೆ ಸೂಪರ್ ಎನ್ನಬಹುದಾಗಿದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 730 GB ಲಭ್ಯವಾಗಲಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ. ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ. ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.


Click it and Unblock the Notifications








